ಹಲೋ ಸ್ನೇಹಿತರೇ, ರಾಜ್ಯ ಸರ್ಕಾರವು ಅಂಗನವಾಡಿ ಮಕ್ಕಳಿಗೆ ಗುಡ್‌ನ್ಯೂಸ್ ನೀಡಿದೆ. ಹಾಗಾದರೆ ಆ ಶುಭಸುದ್ದಿ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ. ರಾಜ್ಯ ಸರ್ಕಾರದಿಂದ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಲಾಗುತ್ತಿದೆ ಎನ್ನುವ ಮಾಹಿತಿಯೊಂದು ಲಭ್ಯವಾಗಿತ್ತು. ಇದರ ಬೆನ್ನಲ್ಲೇ ಇದೀಗ ಅಂಗನವಾಡಿ ಮಕ್ಕಳಿಗೆ ರಾಜ್ಯ ಸರ್ಕಾರದಿಂದ ಬ್ಯಾಗ್, ಯೂನಿಫಾರ್ಮ್ ವಿತರಣೆ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ಗೃಹಕಚೇರಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ (ಎಐಟಿಯುಸಿ) ಕಾರ್ಯಕರ್ತರು ಭೇಟಿ ಮಾಡಿ, ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಲ್ಲಿಸಿದ ಮನವಿ ಸ್ವೀಕರಿಸಿ ಅವರು ಮಾತನಾಡಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ಅಂಗನವಾಡಿ ಮಕ್ಕಳಿಗೆ ಬ್ಯಾಗ್, ಯೂನಿಫಾರ್ಮ್ ಕೊಡುವ ಬಗ್ಗೆ ತೀರ್ಮಾನಿಸಿದೆ ಎಂದರು.
ಕರ್ನಾಟಕ ಪಬ್ಲಿಕ್ ಶಾಲೆ (ಕೆ ಪಿಎಸ್) ಹಾಗೂ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಎಲ್ ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ಸರ್ಕಾರ ತೀರ್ಮಾನಿಸಿದ್ದು, ಇದರಿಂದ ಅಂಗನವಾಡಿ ಶಿಕ್ಷಕರಿಗೆ ಯಾವುದೇ ತೊಂದರೆ ಆಗುವುದಿಲ್ಲ. ನಿಮ್ಮ ಹಾಗೂ ಮಕ್ಕಳ ಇಬ್ಬರ ಹಿತದೃಷ್ಟಿಯಿಂದ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಅವರು ಹೇಳಿದರು.
ರಾಜ್ಯ ಪಠ್ಯಕ್ರಮದ ಶಾಲೆಗಳ 5, 8 ಮತ್ತು 9ನೇ ತರಗತಿ ಮಕ್ಕಳ ಬೋರ್ಡ್ ಪರೀಕ್ಷೆಯ ಪ್ರಕರಣ ನ್ಯಾಯಾಲಯದಲ್ಲಿ ವಿಚಾರಣೆ ಇದ್ದು, 2024-25ನೇ ಸಾಲಿನಲ್ಲಿ ಈ ಹಿಂದೆ ಇದ್ದಂತೆ ಎಲ್ಲಾ ತರಗತಿಗಳಿಗೂ ಮೌಲ್ಯಾಂಕನ ಮುಂದುವರೆಸಲು ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಪ್ರಮುಖಾಂಶಗಳು ಇಲ್ಲಿವೆ ನೋಡಿ.
ಕೊಳವೆ ಬಾವಿ ವಿಫಲವಾದ ರೈತರಿಗೆ ಸರ್ಕಾರದಿಂದ ಈ ಯೋಜನೆ ಜಾರಿ!
2024-25ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ರಾಜ್ಯ ಪಠ್ಯಕ್ರಮದ 1ರಿಂದ 10ನೇ ತರಗತಿಗೆ 2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳ ವಾರ್ಷಿಕ ಕ್ರಿಯಾಯೋಜನೆ ಹಾಗೂ ಶೈಕ್ಷಣಿಕ ಮಾರ್ಗದರ್ಶಿಯನ್ನು ಉಲ್ಲೇಖಗಳನ್ವಯ ಹೊರಡಿಸಲಾಗಿದ್ದು, ಇದನ್ನು ಆಧರಿಸಿ ಶಾಲೆಗಳಲ್ಲಿ ಪಠ್ಯವಸ್ತು ಬೋಧನೆ ಹಾಗೂ ಮೌಲ್ಯಾಂಕನ ಕುರಿತು ವಹಿಸಬೇಕಾದ ಕ್ರಮಗಳನ್ನು ಈ ಕೆಳಕಂಡಂತೆ ಸೂಚಿಸಲಾಗಿದೆ.
ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ 1ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೇ 29, 2024ರಿಂದ ಶೈಕ್ಷಣಿಕ ವರ್ಷ ಪ್ರಾರಂಭ ಆಗಿದೆ. 2022-23ನೇ ಶೈಕ್ಷಣಿಕ ಸಾಲಿನಲ್ಲಿ ಕಲಿಕಾ ಚೇತರಿಕೆ ಉಪಕ್ರಮವನ್ನು ಮತ್ತು 2023-24ನೇ ಸಾಲಿನಲ್ಲಿ “ಕಲಿಕಾ ಬಲವರ್ಧನೆ” ಕಾರ್ಯಕ್ರಮದಡಿ ಕಲಿವಿನ ಫಲಾಧಾರಿತ ವಿದ್ಯಾರ್ಥಿಗಳ ಚಟುವಟಿಕೆ ಪುಸ್ತಕ ಹಾಗೂ ಶಿಕ್ಷಕರ ಚಟುವಟಿಕೆ ಕೋಶಗಳನ್ನು ಸಿದ್ಧಪಡಿಸಿ ಬೋಧನಾ ಕಲಿಕಾ ಪ್ರಕ್ರಿಯೆಯಲ್ಲಿ ಅಳವಡಿಸಿ ಕಲಿಕಾ ಅಂತರವನ್ನು ಬೆಸೆಯಲು ನಿರಂತರವಾಗಿ ಉಪಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ಇದಕ್ಕೆ ಪೂರಕವಾಗಿ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ಸಜ್ಜುಗೊಳಿಸಲು ಶೈಕ್ಷಣಿಕ ವರ್ಷದ ಆರಂಭದಲ್ಲಿ “ಸೇತುಬಂಧ” ಕಾರ್ಯಕ್ರಮವನ್ನು ಜೂನ್‌ನಲ್ಲಿ ನಡೆಸುವುದು. 1ರಿಂದ 10ನೇ ತರಗತಿಗಳಿಗೆ ಸೇತುಬಂಧ ಸಾಹಿತ್ಯವನ್ನು ಸಿದ್ಧಪಡಿಸಿ DSERT websiteನಲ್ಲಿ ಅಳವಡಿಕೆ ಮಾಡಲಾಗಿದೆ. ಕಾರ್ಯಕ್ರಮ ಅನುಷ್ಠಾನಕ್ಕೆ ತರುವ ಕುರಿತು ಸೇತುಬಂಧ ಸುತ್ತೋಲೆಯ ಮೂಲಕ ಮಾರ್ಗದರ್ಶನ ನೀಡಲಾಗಿದೆ.
ಇತರೆ ವಿಷಯಗಳು:
ಮೇಕೆ-ಕುರಿ-ಹಸು ಸಾಕಾಣಿಕೆಗೆ ಸರ್ಕಾರದ ಸಹಕಾರ.!! ಈ ಯೋಜನೆಯಡಿ ನಿಮ್ಮದಾಗಲಿದೆ ಸಹಾಯಧನ
ರೈತರಿಗೆ ಸಂತಸದ ಸುರಿ ಮಳೆ.!! ನೀರಾವರಿಗಾಗಿ ಸೋಲಾರ್ ಪಂಪ್‌ಗಳ ಮೇಲೆ ಭರ್ಜರಿ ಸಬ್ಸಿಡಿ