ಹಲೋ ಸ್ನೇಹಿತರೆ, ರಾಜ್ಯದ ರೈತರ ಜಮೀನುಗಳ ಪೋಡಿ, ದುರಸ್ತಿ ಕಾರ್ಯ ಮಾಡಲು ಹೊಸ ತಂತ್ರಾಂಶವನ್ನು ಜಾರಿಗೊಳಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಕಂದಾಯ ಸಚಿವರು ರೈತರಿಗಾಗುತ್ತಿರುವ ತೊಂದರೆಗಳನ್ನು ನಿವಾರಿಸಲು ಸರ್ಕಾರ ಪಹಣಿ ತಿದ್ದುಪಡಿ ಮತ್ತು ಪೌತಿ ಖಾತೆ ಇತ್ಯಾದಿಗಳ ಇತ್ಯರ್ಥಕ್ಕಾಗಿ ಕಂದಾಯ ಅದಾಲತ್ಗಳನ್ನು ನಡೆಸುತ್ತಿದೆ.
ಮಂಜೂರಾಗಿರುವ ರೈತರ ಜಮೀನುಗಳ ಪೋಡಿ, ದುರಸ್ತಿ ಕಾರ್ಯವನ್ನು ಆನ್ಲೈನ್ ಮುಖಾಂತರ ಮಾಡಲು ಹೊಸ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನ ಮಂಡಲ ಸಭೆಯಲ್ಲಿ ತಿಳಿಸಿದ್ದಾರೆ.
ಇದನ್ನು ಓದಿ: ಬಜೆಟ್ 2024 ಅಪ್‌ಡೇಟ್: ಮೊಬೈಲ್ ಫೋನ್‌ಗಳು, ಚಿನ್ನ, ಬೆಳ್ಳಿ ಇನ್ಮುಂದೆ ಅಗ್ಗ
ಹಾಗೆಯೇ ಬ್ಯಾಂಕಿಂಗ್ ಸೇವೆಯಲ್ಲಿ ಪಾರದರ್ಶಕತೆ ಹಾಗೂ ಎಲ್ಲ ರೀತಿಯ ಕೃಷಿ ಸಾಲ ವಿತರಣೆ ಮಾಡಲು FRUITS BANK ಪೋರ್ಟಲ್ ಅನ್ನು ಅಭಿವೃದ್ಧಿ ಪಡಿಸಲಾಗಿದೆ. ವಾಣಿಜ್ಯ ಬ್ಯಾಂಕ್‌ಗಳಲ್ಲಿ ಈಗಾಗಲೇ ಈ ಸೇವೆಯನ್ನು ಪ್ರಾರಂಭಿಸಲಾಗಿದ್ದು, ಹೊಸ ಪೋರ್ಟಲ್‌ಗಾಗಿ ಸಹಕಾರಿ ಕ್ಷೇತ್ರದ ಪ್ರತಿ ಬ್ಯಾಂಕ್‌ಗಳಲ್ಲಿ ಯುಸರ್ ನೇಮ್ ಮತ್ತು ಪಾಸ್‌ವರ್ಡ್ ಸೃಷ್ಟಿಸುವ ಕಾರ್ಯ ಪ್ರಗತಿಯಲ್ಲಿದೆ. ಈ ತಿಂಗಳ ಅಂತ್ಯದೊಳಗೆ ಈ ಸೇವೆಯು ಎಲ್ಲಾ ರೈತರಿಗೆ ಲಭ್ಯವಾಗಲಿದೆ.
ಇತರೆ ವಿಷಯಗಳು:
ಬಜೆಟ್ ಘೋಷಣೆ ಜೊತೆ ಆಗಸ್ಟ್ 1 ರಿಂದ ಈ ನಿಯಮಗಳಲ್ಲಿ ಬದಲಾವಣೆ ಜಾರಿ!
ಬ್ಯಾಂಕ್ ಗ್ರಾಹಕರಿಗೆ ಭರ್ಜರಿ ಸುದ್ದಿ.!! ಈ ಸ್ಕೀಮ್ ನಿಂದ ನಿಮ್ಮದಾಗಲಿದೆ ಸ್ಮಾರ್ಟ್ ಪಿಂಚಣಿ