ಹಲೋ ಸ್ನೇಹಿತರೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು ತಂತ್ರಾಂಶದ ಹೊಸ ಸೇವೆಯನ್ನು ಅಭಿವೃದ್ದಿಪಡಿಸಲಾಗಿದ್ದು ಈ ತಂತ್ರಾಂಶದ ಹೊಸ ಅವತರಣಿಕೆಯನ್ನು ಸಾರ್ವಜನಿಕರ ಸೇವೆಗಾಗಿ ಬಿಡುಗಡೆ ಮಾಡಲಾಗುತ್ತಿದೆ. ಇ-ಸ್ವತ್ತು ತಂತ್ರಾಂಶದ ಬಳಕೆದಾರರಿಗೆ ಅನುಕೂಲವಾಗುವಂತೆ ಸಚಿವರು ಸಮಗ್ರ ಆವೃತ್ತಿಯೊಂದಿಗೆ ಸಜ್ಜುಗೊಳಿಸಲಾಗಿರುವ ಈ ಸಾಫ್ಟವೇರ್ ಮೂಲಕ ಸಾರ್ವಜನಿಕರ ಆಸ್ತಿಯನ್ನು ಗ್ರಾಮದ ಒಳಗೆ ಆಥವಾ ಹೊರಗೆ ಬರುವ ಬಗ್ಗೆ ಅಳತೆ ಮಾಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತಿಯ ಹಂತದಲ್ಲಿ ದಿಶಾಂಕ್ ಆಫ್ ಮೂಲಕ ನಿರ್ವಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.
ಇದನ್ನು ಓದಿ: ಅನ್ನದಾತರಿಗೆ ಸಿಗಲಿದೆ ಬೆಳೆ ಹಾನಿ ಪರಿಹಾರ.!! 39 ಲಕ್ಷ ರೈತರ ಖಾತೆಗೆ ಬಂದೇ ಬಿಡ್ತು ಹಣ
ಇ-ಸ್ವತ್ತು ಸಾಫ್ಟವೇರ್ ನ ಹೊಸ ಸೇವೆಯನ್ನು ಪರಿಚಯಿಸುತ್ತಿರುವುದರಿಂದ 2024ರ ಜುಲೈ 27ರಿಂದ 2024ರ ಜುಲೈ 29ರವರೆಗೆ ಇ-ಸ್ವತ್ತು ಸಾಫ್ಟವೇರ್ ಕಾರ್ಯನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದು, ಇದಕ್ಕೆ ಸಾರ್ವಜನಿಕರ ಸಹಕಾರ ಕೋರಿದ್ದಾರೆ.
ಸಾರ್ವಜನಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು ತಂತ್ರಾಂಶದ ಕಾರ್ಯಾ ಆರಂಭಿಸಿದ ನಂತರ ಇ-ಸ್ವತ್ತು ತಂತ್ರಾಂಶದ ಕಾರ್ಯಾ ಅವಧಿಯನ್ನು 2024ರ ಆಗಸ್ಟ್ 2ರವರೆಗೆ ಪ್ರತಿ ನಿತ್ಯ ಸಂಜೆ 8 ಗಂಟೆಯವರೆಗೂ ಸೇವೆ ಸಲ್ಲಿಸಲು ಕಾಲಾವಧಿಯನ್ನು ವಿಸ್ತರಿಸಲಾಗುವುದು ಎಂದೂ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಇತರೆ ವಿಷಯಗಳು:
ಅಂಗನವಾಡಿಗಳಲ್ಲಿ ಮಕ್ಕಳು, ಗರ್ಭಿಣಿಯರು, ಬಾಣಂತಿಯರಿಗೆ ಹೊಸ ಮೆನು! ಏನೆಲ್ಲಾ ಇರಲಿದೆ?
ಉಚಿತ ಮನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ! 1 ಲಕ್ಷದ ಹೊರೆ ತಗ್ಗಿಸಲು ಸರ್ಕಾರದ ಮಹತ್ವದ ನಿರ್ಧಾರ