ಹಲೋ ಸ್ನೇಹಿತರೆ, ಶಿಕ್ಷಕರ ಬಹುದಿನಗಳ ಬೇಡಿಕೆಯನ್ನು ರಾಜ್ಯ ಸರ್ಕಾರ ಇದೀಗ ಈಡೇರಿಸಿದ್ದು, ಪದವಿ ಪೂರ್ವ ಕಾಲೇಜು ಉಪನ್ಯಾಸಕರಾಗಿ ಬಡ್ತಿ ಪಡೆಯಲು ಇದ್ದಂತಹ ಅಡ್ಡಿಯನ್ನು ನಿವಾರಿಸಿದೆ. ಇದರ ಸಲುವಾಗಿ ಶುಕ್ರವಾರ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪದವಿ ಪೂರ್ವ ಕಾಲೇಜು ಹುದ್ದೆಗೆ ಬಡ್ತಿ ನೀಡಲು ಸ್ನಾತಕೋತ್ತರ ಪದವಿಯಲ್ಲಿ ಕನಿಷ್ಠ ಶೇ.55 ಅಂಕ ಪಡೆಯಬೇಕಿತ್ತು. ಆದರೆ ಈ ವಿಷವಾಗಿ ಸರ್ಕಾರ ಹೊಸ ನಿರ್ಧಾರ ಕೈಗೊಂಡು ಸಡಿಲಿಕೆ ಮಾಡಿದೆ.
ಬಡ್ತಿ ಪಡೆಯುವ ಅಂಕವನ್ನು ಪರಿಷ್ಕರಿಸಿ ಶೇ.50ಕ್ಕೆ ಇಳಿಕೆ ಮಾಡಲಾಗಿದೆ. ಇದಕ್ಕಾಗಿ ಪದವಿಪೂರ್ವ ಕಾಲೇಜು ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ಕರ್ನಾಟಕ ಸಾಮಾನ್ಯ ಸೇವೆಯ ನಿಯಮಗಳಿಗೆ ಸಂಬಂಧಿಸಿದಂತೆ 2024ಕ್ಕೆ ತರಲಾಗಿದ್ದ ತಿದ್ದುಪಡಿಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಮೂಲಕ ಶಿಕ್ಷಕರಿಗೆ ಅನುಕೂಲ ಕಲ್ಪಿಸಲಾಗಿದ್ದು, ಉಪನ್ಯಾಸಕರ ಕೊರತೆ ನಿಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ.
ಇದನ್ನು ಓದಿ: Breaking News: ಆಯುಷ್ಮಾನ್ ಕಾರ್ಡ್ ಸೇವೆ ರದ್ದು! ಇನ್ಮುಂದೆ ಸಿಗಲ್ಲ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ
ವಯೋಮಿತಿ ವಿನಾಯ್ತಿ: 2017-18ನೇ ಸಾಲಿಗೆ ಗೆಜೆಟೆಡ್ ಪ್ರೊಬೆಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ 2023-24 ಸಾಲಿನೆ ಗೆಜೆಟೆಡ್ ಪ್ರೊಬೆಷನರ್ಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಒಂದು ಬಾರಿಗೆ ವಯೋಮಿತಿಯ ನಿರ್ಬಂಧವನ್ನು ಸಡಿಲಿಸಿ ಹೆಚ್ಚುವರಿ ವಿಶೇಷ ಅವಕಾಶ ಹೊರಡಿಸಿದ್ದ ಆದೇಶಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.
ರಾಜ್ಯ ಸಂಪುಟ ಸಭೆ:
15 ಹಾಸ್ಟೆಲ್ಗಳ ನಿರ್ವಣಕ್ಕೆ ಅಸ್ತು: ರಾಜ್ಯದಲ್ಲಿನ 15 ತಾಲ್ಲೂಕುಗಳಲ್ಲಿ ತಲಾ ಒಂದು ಹಾಸ್ಟೆಲ್ ಕಟ್ಟಡಗಳ ನಿರ್ಮಾಣ ಮಾಡಲು ಒಟ್ಟು 105 ಕೋಟಿ ರೂ. ಅಂದಾಜು ಮೊತ್ತವನ್ನು ಲೋಕೋಪಯೋಗಿ ಇಲಾಖೆ ನಿರ್ವಿುಸಲಿದೆ. ಸಮಾಜ ಕಲ್ಯಾಣ ಇಲಾಖೆಗೆ ಸೇರಿದ ಪ್ರತಿ ಹಾಸ್ಟೆಲ್ ನಿರ್ಮಾಣಕ್ಕೆ 7 ಕೋಟಿ ರೂ. ನೀಡಲು ಆಡಳಿತಾತ್ಮಕ ಅಸ್ತು ಎಂದಿದೆ. ಪ್ರತಿ ಹಾಸ್ಟೆಲ್ ಗೆ ನೂರು ಮಕ್ಕಳ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ.
ಇತರೆ ವಿಷಯಗಳು:
ರಾಜ್ಯದ ರೈತರ ಜಮೀನುಗಳಿಗೆ ಹೊಸ ತಂತ್ರಾಂಶ ಜಾರಿ!
ಹಿಂಬದಿ ಸವಾರರಿಗೆ ಬಂತು ಹೊಸ ರೂಲ್ಸ್.!! ಈ ತಪ್ಪು ಮಾಡಿದ್ರೆ ಬೀಳುತ್ತೆ ಭಾರೀ ದಂಡ