ಗರ್ಭಿಣಿ ಮಹಿಳೆಯರಿಗೆ ಸಿಗಲಿದೆ ಉಚಿತ 11,000 ರೂ.!! ಈ ದಾಖಲೆ ಇದ್ರೆ ಬೇಗ ಅಪ್ಲೇ ಮಾಡಿ

ಹಲೋ ಸ್ನೇಹಿತರೇ, ಗರ್ಭಿಣಿ ಮಹಿಳೆಯರಿಗೆ ಸಿಹಿಸುದ್ದಿ ಸಿಕ್ಕಿದ್ದು, ಕೇಂದ್ರ ಸರ್ಕಾರದ ಮಾತೃವಂದನಾ ಯೋಜನೆಯಡಿ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Matru Vandana Yojana

ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕೃತವಾದ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯ ಸೌಲಭ್ಯವನ್ನು ಪಡೆಯಲು ಮೊದಲನೇ ಪ್ರಸವದ ಗರ್ಭಿಣಿ ಮಹಿಳೆಯರು ಹಾಗೂ ಎರಡನೇ ಪ್ರಸವದಲ್ಲಿ ಹೆಣ್ಣು ಮಗು ಜನಿಸಿದ ಮಹಿಳೆಯರಿಂದ ನೋಂದಣಿಯ ಅಭಿಯಾನ ಹಮ್ಮಿಕೊಳ್ಳಲಾಗಿದೆ.

ಅರ್ಜಿ ಸಲ್ಲಿಸಲು ಹೊಂದಿರಬೇಕಾದ ದಾಖಲೆಗಳು:

ನೋಂದಣಿಗೆ ನಿಗಧಿತವಾದ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿ ಮತ್ತು ತಾಯಿ ಕಾರ್ಡ್ ಹಾಗೂ ಮಗುವಿನ ಲಸಿಕೆ ಮಾಹಿತಿಯ ಪ್ರತಿಗಳು, ಫಲಾನುಭವಿಯ ಆಧಾರ್ ಕಾರ್ಡ್ ಹಾಗೂ ಫಲಾನುಭವಿಯ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಕಡ್ಡಾಯವಾಗಿ ಲಿಂಕ್‌ ಮಾಡಿರಬೇಕಾಗುತ್ತದೆ. ಪಡಿತರ ಚೀಟಿ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ನರೇಗಾ ಕಾರ್ಡ್, ಇ-ಶ್ರಮ್ ಕಾರ್ಡ್ ಮತ್ತು ಆಯುಷ್ಮಾನ್ ಕಾರ್ಡ್(ಯಾವುದಾದರು ಪ್ರತಿ) ಇನ್ನು ಇತ್ಯಾದಿ ಅಗತ್ಯ ದಾಖಲೆಗಳನ್ನು ಲಗ್ಗತ್ತಿಸಬೇಕಾಗುತ್ತದೆ.

ಮಹಿಳೆಯರಿಗೆ ಬಂಪರ್‌ ಆಫರ್.!! ಈ ಯೋಜನೆಯಲ್ಲಿ 1,000 ರೂ.ಠೇವಣಿ ಮಾಡಿದ್ರೆ ನಿಮ್ಮದಾಗಲಿದೆ 2 ಲಕ್ಷ ರೂ.!

ಮಹಿಳೆಯ ಮೊದಲ ಪ್ರಸವದ ಹಾಗೂ ನಂತರದ ಸಾಕಷ್ಟು ವಿಶ್ರಾಂತಿಗಾಗಿ ಆಂಶಿಕ ಪರಿಹಾರವನ್ನು ಗರ್ಭಿಣಿಯರಿಗೆ ಮತ್ತು ಬಾಣಂತಿಯರ ಆರೋಗ್ಯದಲ್ಲಿ ಸುಧಾರಣೆಯನ್ನು ತರಲು ಪ್ರೋತ್ಸಾಹಧನದ ರೂಪದಲ್ಲಿ ವೇತನದ ನಷ್ಟಕ್ಕಾಗಿ ನೀಡುವುದಾಗಿದೆ.

ಮೊದಲ ಮಗುವಿಗೆ ಎರಡು ಕಂತುಗಳಲ್ಲಿ ರೂ. 5000, ಎರಡನೇ ಮಗು (ಹೆಣ್ಣು ಮಗುವಾಗಿರುವುದಕ್ಕೆ) ರೂ. 6000 ನೀಡಲಾಗುವುದು. ಸರ್ಕಾರಿಯ ನೌಕರರು ಹಾಗೂ ಸಾರ್ವಜನಿಕವಾಗಿ ಉದ್ದಿಮೆಗಳ ನೌಕರರನ್ನು ಹೊರತುಪಡಿಸಿ ಮೊದಲ ಪ್ರಸವದ ಗರ್ಭಿಣಿಯರು ಮತ್ತು ಎರಡನೇಯ ಹೆಣ್ಣು ಮಗುವಿನ ಬಾಣಂತಿಯರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಈ ಬಗ್ಗೆ ಶಿಶು ಅಭಿವೃದ್ಧಿ ಯೋಜನಾ ಕಚೇರಿ ಹಾಗೂ ನಿಮ್ಮ ಹತ್ತಿರದ ಅಂಗನವಾಡಿ ಕೇಂದ್ರದಲ್ಲಿ ಅರ್ಜಿ ಪಡೆದು ಅರ್ಜಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಇತರೆ ವಿಷಯಗಳು:

ಇನ್ಮುಂದೆ ಸಿಗ್ನಲ್‌ ಲೈಟ್‌ಗೆ ಮೂರಲ್ಲ ನಾಲ್ಕು ಬಣ್ಣಗಳು!

ಹಿರಿಯ ನಾಗರಿಕರಿಗಾಗಿ ಹೊಸದೊಂದು ಉಳಿತಾಯ ಯೋಜನೆ..!

Leave a Reply

Your email address will not be published. Required fields are marked *