ಹಲೋ ಸ್ನೇಹಿತರೇ, ಮುಂದಿನ 4 ವಾರಗಳಲ್ಲಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ, ಮಲೆನಾಡಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವುದಾಗಿ ಜಲ ಗಂಡಾಂತರ ಇದ್ದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಹಿನ್ನೆಲೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿ ಪರಿಶೀಲನೆ ಕುರಿತು ಇಂದು ವಿಧಾನಸೌಧದಲ್ಲಿ ಸಭೆ ಮಾಡಿದ ಅವರು, ರಾಜ್ಯದಲ್ಲಿ ಜೂ.1 ರಿಂದ ಆ.15ರ ವರೆಗೆ ವಾಡಿಕೆಗಿಂತ ಶೇ. 22 ರಷ್ಟುಕ್ಕೂ ಹೆಚ್ಚು ಮಳೆಯಾಗಿರುವ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.
ಚಾಮರಾಜನಗರ, ಮಂಡ್ಯ, ತುಮಕೂರಿನಲ್ಲಿ ಅತ್ಯಧಿಕ ಮಳೆಯಾಗಿದೆ. 13 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಈ ಬಾರಿ ಇಡೀ ರಾಜ್ಯದಲ್ಲಿ ಉತ್ತಮ ಮಳೆಯಾಗಿದೆ. ರಾಯಚೂರಿನ ಸಿರುಗುಪ್ಪ, ದೇವದುರ್ಗ, ಬೀದರ್ನ ಔರಾದ್, ಬೀದರ್ ನಗರ, ಕಮಲಾನಗರ, ಹುಬ್ಬಳ್ಳಿ, ಶಹಾಪುರ, ಯಾದಗಿರಿ ಮೊದಲಾದ ಒಂಬತ್ತು ತಾಲ್ಲೂಕುಗಳಲ್ಲಿ ಈಗ ಕಡಿಮೆ ಮಳೆ ಇದೆ. ಆದರೆ ಈ ತಾಲ್ಲೂಕುಗಳಲ್ಲಿಯೂ ಉತ್ತಮ ಮಳೆಯಾಗುವ ಮುನ್ಸೂಚನೆ ಬಂದಿದೆ ಎಂದರು.
ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್.!! 338ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಅಹ್ವಾನ
ರಾಜ್ಯಾದ್ಯಂತ 82 ಲಕ್ಷ ಕ್ಕೂ ಹೆಚ್ಚು ಹೆಕ್ಟೇರ್ ಗುರಿಗೆ ಎದುರಾಗಿ 7೦ ಲಕ್ಷ ಹೆಕ್ಟೇರ್ ಬಿತ್ತನೆ ಆಗಿದೆ. ಈ ಬಾರಿಯ ಗುರಿ ಮೀರಿ ಸಾಧನೆಯು ಆಗುವ ನಿರೀಕ್ಷೆ ಇದೆ. ಮುಂಗಾರು ಪೂರ್ವ ಬಿತ್ತನೆಯು ಕೂಡ ಆಗಿರುವ ಉದ್ದು ಮತ್ತು ಹೆಸರು ಕಟಾವಿಗೆ ಬಂದಿದೆ. ಮಳೆಯಿಂದ 81,589 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಅಂತಿಮ ವರದಿ ಬಂದ ಕೂಡಲೇ ಪರಿಹಾರ ವಿತರಣೆಗೆ ಕ್ರಮ ವಹಿಸುವಂತೆ ಸಿಎಂ ಸೂಚಿಸಿದ್ದಾರೆ.
ಇತರೆ ವಿಷಯಗಳು:
ಪುನಃ ಏರಿಕೆ ಕಂಡ ಅಡುಗೆ ಎಣ್ಣೆ ಬೆಲೆ.!! ಇಂದಿನಿಂದ ಎಷ್ಟು ಬೆಲೆ ಗೊತ್ತಾ.??
ಎಸ್‌ಎಸ್‌ಎಲ್‌ಸಿ ಪಾಸಾದ ಮಹಿಳೆಯರಿಗೆ ಬಂಪರ್ ನ್ಯೂಸ್ : ಈ ಹುದ್ದೆಗಳಿಗೆ ಅರ್ಜಿ ಆಹ್ವಾನ.!