ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸಿಹಿ ಸುದ್ದಿ, ತಪ್ಪದೇ ಈ ಮಾಹಿತಿ ತಿಳಿದುಕೊಳ್ಳಿ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ, ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಮೇ ತಿಂಗಳ ಪಡಿತರ ಧಾನ್ಯಗಳನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್‍ಗೆ 35 ಕೆ.ಜಿ. ಅಕ್ಕಿಯನ್ನು ವಿತರಿಸಲಾಗಿದ್ದು, ಆದ್ಯತಾ ಹಾಗೂ ಬಿಪಿಎಲ್ (ಬಿಲ್ಲೊ ಪಾವ್ಟಿ ಲೈನ್) ಪಡಿತರ ಚೀಟಿದಾರರಿಗೆ 5 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗಿದೆ.

ಎಪಿಎಲ್ (ಅಬೋವ್ ಪಾವ್ಟಿ ಲೈನ್) ಏಕಸದಸ್ಯ ಪಡಿತರ ಚೀಟಿದಾರರಿಗೆ, ಪ್ರತಿ ಕೆ.ಜಿ. ಅಕ್ಕಿಯನ್ನು 15 ರೂ. ದರದಲ್ಲಿ ಒಪ್ಪಿಗೆ ನೀಡಿದ್ದು, 5 ಕೆ.ಜಿ. ಅಕ್ಕಿಯನ್ನು ವಿತರಿಸಲಾಗುತ್ತದೆ. ಎರಡು ಅಥವಾ ಹೆಚ್ಚಿನ ಸದಸ್ಯರನ್ನು ಹೊಂದಿರುವ ಎಪಿಎಲ್ ಪಡಿತರ ಚೀಟಿದಾರರಿಗೆ, 10 ಕೆ.ಜಿ. ಅಕ್ಕಿಯನ್ನು ಹಂಚಿಕೆ ಮಾಡಲಾಗಿದೆ.

ಸರ್ಕಾರದ ಗ್ಯಾರಂಟಿ ಯೋಜನೆಯಡಿ, 5 ಕೆ.ಜಿ. ಅಕ್ಕಿ ಬದಲಿಗೆ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು ಎಂದು ತಹಶೀಲ್ದಾರ್ ತಿಳಿಸಿದ್ದಾರೆ.

ಈ ವ್ಯವಸ್ಥೆ ಮೂಲಕ, ಅಕ್ಕಿಯ ಆವಶ್ಯಕತೆಗಳನ್ನು ಪೂರೈಸಲು ಸರ್ಕಾರವು ವಿಶೇಷ ಕ್ರಮಗಳನ್ನು ತೆಗೆದುಕೊಂಡಿದೆ, ಇದು ಜಿಲ್ಲೆಯಲ್ಲಿ ಪಡಿತರ ಚೀಟಿದಾರರ ಆಹಾರ ಭದ್ರತೆಯನ್ನು ಇನ್ನಷ್ಟು ಬಲಪಡಿಸಲು ನೆರವಾಗಲಿದೆ.

ಇತರೆ ವಿಷಯಗಳು

ರಾಜ್ಯದಲ್ಲಿ ಇನ್ನೂ 3 ದಿನ ಭರ್ಜರಿ ಮಳೆಯಾಗಲಿದೆ, ಎಲ್ಲೆಲ್ಲಿ ಮಳೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ.

ಕರ್ನಾಟಕ ಗಂಗಾ ಕಲ್ಯಾಣ ಯೋಜನೆ 2024, ಉಚಿತ ಬೋರ್ವೆಲ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ.

Leave a Reply

Your email address will not be published. Required fields are marked *