ಜಿಲ್ಲೆಯ ಪಡಿತರ ಚೀಟಿದಾರರಿಗೆ ಮೇ ತಿಂಗಳ ಪಡಿತರ ಧಾನ್ಯಗಳ ಹಂಚಿಕೆ ಪ್ರಕ್ರಿಯೆ ಮುಗಿದಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿಯೊಂದು ಕಾರ್ಡ್‍ಗೆ 35 ಕೆ.ಜಿ. ಅಕ್ಕಿಯನ್ನು ವಿತರಿಸಲಾಗಿದೆ. ಆದ್ಯತಾ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ ಪ್ರತಿ ಸದೆಸ್ಯನಿಗೂ 5 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡಲಾಗಿದೆ.
ಎಪಿಎಲ್ ಏಕಸದಸ್ಯ ಪಡಿತರ ಚೀಟಿದಾರರಿಗೆ ಪ್ರತಿ ಕೆ.ಜಿ. ಅಕ್ಕಿಯನ್ನು 15 ರೂ. ದರದಲ್ಲಿ ಒದಗಿಸುವ ಮೂಲಕ, 5 ಕೆ.ಜಿ. ಅಕ್ಕಿಯನ್ನು ನೀಡಲಾಗಿದೆ. ಎರಡು ಅಥವಾ ಹೆಚ್ಚಿನ ಸದಸ್ಯರನ್ನು ಹೊಂದಿರುವ ಎಪಿಎಲ್ ಪಡಿತರ ಚೀಟಿದಾರರಿಗೆ 10 ಕೆ.ಜಿ. ಅಕ್ಕಿಯನ್ನು ಹಂಚಿಕೆ ಮಾಡಲಾಗಿದೆ.
ಸರ್ಕಾರದ ಗ್ಯಾರಂಟಿ ಯೋಜನೆಯಡಿಯಲ್ಲಿ, 5 ಕೆ.ಜಿ. ಅಕ್ಕಿ ಬದಲಾಗಿ ಪಡಿತರ ಚೀಟಿದಾರರಿಗೆ ನಗದು ಸಹಾಯವನ್ನು ನೇರವಾಗಿ ವರ್ಗಾವಣೆ ಮಾಡಲಾಗುತ್ತಿದೆ. ಯಾವುದೇ ತಾಂತ್ರಿಕ ತೊಂದರೆ ಉಂಟಾದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹಾರ ಪಡೆಯಲು ತಹಶೀಲ್ದಾರ್ ಮನವಿ ಮಾಡಿದ್ದಾರೆ.
ಈ ವ್ಯವಸ್ಥೆಯ ಮೂಲಕ, ಸರ್ಕಾರವು ಜಿಲ್ಲೆಯಲ್ಲಿ ಪಡಿತರ ಚೀಟಿದಾರರ ಆಹಾರ ಭದ್ರತೆಯನ್ನು ಹೆಚ್ಚಿಸಲು ವಿಶೇಷ ಕ್ರಮಗಳನ್ನು ಕೈಗೊಂಡಿದೆ. ಇದರಿಂದ ಪಡಿತರ ಚೀಟಿದಾರರು ಅಕ್ಕಿಯ ಅಗತ್ಯಗಳನ್ನು ಸುಲಭವಾಗಿ ಪೂರೈಸಬಹುದಾಗಿದೆ.
ಇತರೆ ವಿಷಯಗಳು:
ರಾಜ್ಯದಲ್ಲಿ ಮತ್ತೆ 1 ವಾರಗಳ ಕಾಲ ಭಾರಿ ಮಳೆ, ಕರ್ನಾಟಕದ ಈ 5 ಜಿಲ್ಲೆಗಳಿಗೆ ಬಾರಿ ಮಳೆಯಾಗಲಿದೆ.