ಹಲೋ ಸ್ನೇಹಿತರೇ, ರಾಜ್ಯ ಸರ್ಕಾರದ ನಿರ್ಧಾರದಿಂದಾಗಿ ಭಾರಿ ವಿವಾದಕ್ಕೆ ಕಾರಣವಾಗಿರುವ 5,8 ಮತ್ತು 9ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆದಿದ್ದರೂ, ಸುಪ್ರೀಂ ಕೋರ್ಟ್ನಲ್ಲಿ ಇದರ ಭವಿಷ್ಯ ಇನ್ನೂ ನಿರ್ಧಾರ ಇನ್ನೂ ಆಗಿಲ್ಲ. ಇದು ಶಾಲಾ ಆಡಳಿತ ಮಂಡಳಿ, ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಈ ಮೂರೂ ತರಗತಿವಾರು ಮೌಲ್ಯಾಂಕನದ ವಿಶ್ಲೇಷಣೆಯನ್ನು ಮಾಡಿ, ವಿದ್ಯಾರ್ಥಿಗಳನ್ನು ಮುಂದಿನ ತರಗತಿಗಳಿಗೆ ದಾಖಲಿಸುವ ಗೊಂದಲದಲ್ಲಿ ಶಿಕ್ಷಣ ಇಲಾಖೆಯು ಸಹ ಇದೆ. ಈಗ ಈ ಸಂಬಂಧದಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಈಗಾಗಲೇ ಶಾಲೆಗಳಲ್ಲಿ ಮಾಸಿಕವಾಗಿ, ಅರ್ಧ ವಾರ್ಷಿಕವಾಗಿ ನಡೆಸಲಾಗಿರುವ ಪರೀಕ್ಷೆಗಳಲ್ಲಿ ಪಡೆದ ಅಂಕಗಳನ್ನು ಅಗ್ರಿಗೇಟ್ ಮಾಡುವುದರೊಂದಿಗೆ ಮುಂದಿನ ತರಗತಿಗಳಿಗೆ ದಾಖಲಿಸಲು ಮುಂದಾಗಲಾಗಿದೆ.
ಸರ್ವೋಚ್ಚ ನ್ಯಾಯಾಲಯವು 2024ರ ಏಪ್ರಿಲ್ 08ರಂದು ಪಬ್ಲಿಕ್ ಪರೀಕ್ಷೆಗೆ ತಡೆಯಾಜ್ಞೆ ನೀಡಿತ್ತು. ಈ ಸಂಬಂಧದಲ್ಲಿ ತೀರ್ಪನ್ನು ಪ್ರಕಟವಾಗುವ ಮೂಲಕ ಪಬ್ಲಿಕ್ ಪರೀಕ್ಷೆಗಳ ಬಗ್ಗೆ ನಿರ್ಧಾರವಾಗಬೇಕಿದೆ. ಅಂದರೆ, 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನ ಕಾರ್ಯ ಮುಗಿದಿದ್ದು, ರಾಜ್ಯದ ಎಲ್ಲ ಶಾಲೆಗಳಲ್ಲಿ ದಿನಾಂಕ: 08-04-2024ರಂದು ಫಲಿತಾಂಶವನ್ನು ಪ್ರಕಟಿಸಲು ತಿಳಿಸಲಾಗಿತ್ತು. ಬಳಿಕ ಫಲಿತಾಂಶವನ್ನು ಪ್ರಕಟಿಸಲು ಸರ್ವೋಚ್ಚ ನ್ಯಾಯಾಲಯವು ತಡೆಯಾಜ್ಞೆಯನ್ನು ನೀಡಿದ್ದು, ಅಂತಿಮ ತೀರ್ಪು ಬಾಕಿ ಇದೆ. ಹೀಗಾಗಿ ಮುಂದಿನ ಪ್ರವೇಶಾತಿಯ ದೃಷ್ಟಿಯಿಂದ ಈ ನಿರ್ಧಾರಕ್ಕೆ ಬರಲಾಗಿದೆ.
ಈಗಿರುವ ಸಮಸ್ಯೆ ಏನು?
ಪ್ರಸ್ತುತ 2023-24ನೇ ಸಾಲಿನ ಶೈಕ್ಷಣಿಕ ವರ್ಷ ಅಂತ್ಯಗೊಳ್ಳುತ್ತಿದೆ. ಆದ್ರೆ ಸುಪ್ರೀಂ ಕೋರ್ಟ್ನಿಂದ ಪರೀಕ್ಷೆಯ ಬಗ್ಗೆ ಇನ್ನೂ ಹೆಚ್ಚಿನ ತೀರ್ಪು ಬಂದಿಲ್ಲ. ಹೀಗಾಗಿಯೇ ನಡೆಸಿದ ಪರೀಕ್ಷೆಯ ಮೌಲ್ಯಮಾಪನಕ್ಕೆ ಸೇರಿದಂತೆ ಫಲಿತಾಂಶವನ್ನು ಪ್ರಕಟ ಮಾಡಲು ಶಾಲೆಗಳಿಗೆ ಅವಕಾಶ ಇಲ್ಲ. ಆದರೆ, ಮೇ 29ರಿಂದ 2024- 25ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗಲಿದೆ. ಇನ್ನು ಫಲಿತಾಂಶವೇ ಬರದೇ ಮುಂದಿನ ತರಗತಿಗಳಿಗೆ ಕಳುಹಿಸಲು ಆಗದ ಇಕ್ಕಟ್ಟಿನಲ್ಲಿ ಶಾಲಾ ಆಡಳಿತ ಮಂಡಳಿಯು ಸಿಲುಕಿಕೊಂಡಿದೆ.
ವಾಹನ ಸವಾರರೇ ಹುಷಾರ್.!! ಜೂನ್ 1 ರಿಂದ ʼಡ್ರೈವಿಂಗ್ ಲೈಸೆನ್ಸ್ʼ ನ್ಯೂ ರೂಲ್ಸ್
ವರ್ಗಾವಣೆಯಾದವರಿಗೂ ಭಾರಿ ಸಮಸ್ಯೆ!
2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸದೇ ಇರುವುದರಿಂದ ಅವರನ್ನು ಮುಂದಿನ ಶೈಕ್ಷಣಿಕ ವರ್ಷಕ್ಕೆ/ತರಗತಿಗೆ ಶಾಲಾ ಪ್ರವೇಶ/ದಾಖಲಾತಿ ಮಾಡಲು, ಪ್ರವೇಶ ಶುಲ್ಕ ಪಾವತಿಸಲು ಹಾಗೂ ಬೇರೆ ಸ್ಥಳಗಳಿಗೆ ವರ್ಗಾವಣೆ ಹೊಂದಿರುವ ಪ್ರಯುಕ್ತ ಮಕ್ಕಳ ವರ್ಗಾವಣೆ ಪ್ರಮಾಣಪತ್ರ, ಪ್ರಗತಿ ಪತ್ರ ಮತ್ತು ವ್ಯಾಸಂಗ ಪ್ರಮಾಣಪತ್ರಗಳನ್ನು ವಿತರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಅಗತ್ಯ ಕ್ರಮ ವಹಿಸುವಂತೆ ಶಾಲೆಗಳು, ವಿದ್ಯಾರ್ಥಿಗಳು ಕೋರಿದ್ದಾರೆ. ಅದರಂತೆಯೇ ಮಕ್ಕಳ ಶೈಕ್ಷಣಿಕ ಭವಿಷ್ಯವನ್ನು ಸುಗಮಗೊಳಿಸುವ ಉದ್ದೇಶದಿಂದ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಮೌಲ್ಯಾಂಕನದ ಆಧಾರದ ಮೇಲೆ ಪಾಸ್
ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ಪ್ರಕರಣ ಸಂಖ್ಯೆ: 8142/2024, 8136/2024 ಮತ್ತು 8127/2024ರ ಮಧ್ಯಂತರ ತೀರ್ಪಿನಂತೆ, 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ SA-2 ಮೌಲ್ಯಾಂಕನವನ್ನು ತಡೆಹಿಡಿದಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಶಾಲೆಗಳಲ್ಲಿ ನಡೆದಿರುವ FA- 1, FA-2, FA-3, FA-4 ಮತ್ತು SA-1 ಗಳ ಮೌಲ್ಯಾಂಕನದ ಆಧಾರದ ಮೇಲೆ ಮಕ್ಕಳನ್ನು ಮುಂದಿನ ಶೈಕ್ಷಣಿಕ ತರಗತಿಗೆ ಮುಂದುವರಿಸಲು ಅವಕಾಶ ಕಲ್ಪಿಸುವ ನಿರ್ಧಾರವನ್ನು ಕೈಗೊಂಡಿದ್ದಾಗಿ ಆದೇಶದಲ್ಲಿ ತಿಳಿಸಲಾಗಿದೆ.
ಇತರೆ ವಿಷಯಗಳು:
ರಾಜ್ಯದಲ್ಲಿ ಮತ್ತೆ 1 ವಾರಗಳ ಕಾಲ ಭಾರಿ ಮಳೆ, ಕರ್ನಾಟಕದ ಈ 5 ಜಿಲ್ಲೆಗಳಿಗೆ ಬಾರಿ ಮಳೆಯಾಗಲಿದೆ.