ಹಲೋ ಸ್ನೇಹಿತರೇ, ಶಿಶು ಅಭಿವೃದ್ದಿ ಯೋಜನೆಯಡಿ ಸಂಡೂರು ತಾಲ್ಲೂಕಿನ ಪುರಸಭೆ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ 28 ಅಂಗನವಾಡಿ ಕಾರ್ಯಕರ್ತೆಯರು ಮತ್ತು 79 ಅಂಗನವಾಡಿ ಸಹಾಯಕಿಯರ ಗೌರವ ಸೇವೆ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ, ಲಿಂಗತ್ವ ಮತ್ತು ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳು ಅರ್ಹರಾಗಿದ್ದು, ಆಸಕ್ತ ಅಭ್ಯರ್ಥಿಗಳು ಸೆ.17ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
*ಬೇಕಾದ ದಾಖಲೆಗಳು:*
ಮಹಿಳಾ ಹಾಗೂ ಮಕ್ಕಳ ಅಭಿವೃದ್ಧಿ ಇಲಾಖೆಯನ್ನು ಅಧಿಕಾರಿಗಳಿಂದ ಪಡೆದ ನಿವಾಸಿ ಪ್ರಮಾಣ ಪತ್ರ ಮತ್ತು ಯೋಜನಾ ನಿರಾಶ್ರಿತರ ಬಗ್ಗೆ ತಹಶೀಲ್ದಾರರಿಂದ ಪಡೆದ ಪ್ರಮಾಣ ಪತ್ರ, ಆಧಾರ್ ಕಾರ್ಡ್ ಹಾಗೂ ಮತದಾರರ ಗುರುತಿನ ಚೀಟಿ, ರೇಷನ್ ಕಾರ್ಡ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಂದ ಪಡೆದ ದೃಢೀಕರಣ ಪತ್ರ, ಎಲ್ಲಾ ದಾಖಲಾತಿಗಳನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಣ ಮಾಡಿಸಿ ಸಲ್ಲಿಸಬೇಕು.
ಜನನ ಪ್ರಮಾಣ ಪತ್ರ ಇಲ್ಲವೇ ಜನ್ಮ ದಿನಾಂಕ ಇರುವಂತಹ SSLC ಅಂಕಪಟ್ಟಿ, ನಿಗದಿತ ವಿದ್ಯಾರ್ಹತೆಯ ಅಂಕಪಟ್ಟಿ, ತಹಶೀಲ್ದಾದಾರರು ಅಥವಾ ಉಪ ತಹಶೀಲ್ದಾದಾರರಿಂದ ಪಡೆದ ಮೂರು (3) ವರ್ಷದೊಳಗಿನ ವಾಸಸ್ಥಳ ದೃಢೀಕರಣ ಪತ್ರ, ಅಭ್ಯರ್ಥಿಗಳ ಜಾತಿ ಪ್ರಮಾಣ ಪತ್ರ ಮತ್ತು ಪತಿಯ ಮರಣ ಪ್ರಮಾಣ ಪತ್ರ ಹಾಗೂ ವಿಧವಾ ಪ್ರಮಾಣ ಪತ್ರ (ವಿಧವಾ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ).
ಅಂಗವಿಕಲತೆ ಪ್ರಮಾಣಪತ್ರ (ಅಂಗವಿಕಲ ವೇತನದ ದೃಢೀಕರಣವನ್ನು ಪರಿಗಣಿಸುವಂತಿಲ್ಲ), ವಿಚ್ಛೇದನ ಪ್ರಮಾಣ ಪತ್ರ (ನ್ಯಾಯಾಲಯದಿಂದ ಪಡೆದಿರಬೇಕು), ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ನಡೆಸಲ್ಪಟ್ಟ ಮಾಜಿ ದೇವದಾಸಿಯರ ಸಮೀಕ್ಷೆಯ ಪಟ್ಟಿಯಲ್ಲಿರುವ ಮಾಜಿ ದೇವದಾಸಿಯರ ಮಕ್ಕಳು ಎಂಬುದರ ಬಗ್ಗೆ ಮಹಿಳಾ ಅಭಿವೃದ್ಧಿ ನಿಗಮದ ಅಧಿಕಾರಿಗಳಿಂದ ಪಡೆದಂತಹ ಪ್ರಮಾಣ ಪತ್ರ ಮತ್ತು ಇಲಾಖೆಯ ಸುಧಾರಣಾ ಸಂಸ್ಥೆ, ರಾಜ್ಯ ಮಹಿಳಾ ನಿಲಯಗಳ ನಿವಾಸಿಗಳು ಕನಿಷ್ಠ 03 ವರ್ಷಗಳ ಸಂಸ್ಥೆಯಲ್ಲಿರಬೇಕು.
*ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ವಿದ್ಯಾರ್ಹತೆ:*
ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿರಬೇಕು. ಎಸ್‌ಎಸ್‌ಎಲ್ಸಿಯಲ್ಲಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಓದಿರಬೇಕು.
ಉಚಿತ ಗ್ಯಾಸ್ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ! ಈ ದಾಖಲೆಗಳು ಕಡ್ಡಾಯ
*ಅಂಗನವಾಡಿ ಸಹಾಯಕಿ ವಿದ್ಯಾರ್ಹತೆ:*
ಅಂಗನವಾಡಿ ಸಹಾಯಕಿಯರ ಹುದ್ದೆಗೆ SSLC ವಿದ್ಯಾರ್ಹತೆಯನ್ನು ಹೊಂದಿದ್ದು ಹಾಗೂ ತತ್ಸಮಾನ ತರಗತಿಯಲ್ಲಿ ಉತ್ತೀರ್ಣವಾಗಿರಬೇಕು.
*ಸೂಚನೆ:*
ಅಂಗನವಾಡಿ ಕಾರ್ಯಕರ್ತೆರು ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿಗಳನ್ನು ಅನ್ಲೈನ್ ನ ಮೂಲಕ ಮಾತ್ರವೇ ಅರ್ಜಿಯನ್ನು ಸಲ್ಲಿಸಬೇಕು. ಇತರೇ ಯಾವುದೇ ಮೂಲದಿಂದಲೂ ಸಲ್ಲಿಸಲು ಅವಕಾಶವಿರುವುದಿಲ್ಲ ಹಾಗೂ ಪರಿಗಣಿಸಲಾಗುವುದಿಲ್ಲ. ಆಸಕ್ತಯನ್ನು ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿಯನ್ನು ಮಾಡಿ, ಕಡ್ಡಾಯವಾಗಿ ಅವಶ್ಯಕತೆ ಇರುವಂತಹ ಮೂಲ ದಾಖಲೆಗಳನ್ನು ಸ್ಪಷ್ಟವಾಗಿ ಸ್ಕ್ಯಾನ್ ಮಾಡಿ ಮತ್ತು ಅಪ್ಲೋಡ್ ಮಾಡಿ ಅರ್ಜಿ ಸಲ್ಲಿಸಬೇಕು.
ಆನ್ಲೈನ್ ಮೂಲಕವೇ ಎಲ್ಲಾ ಅಗತ್ಯ ದಾಖಲಾತಿಗಳನ್ನು ಸಲ್ಲಿಸುವುದು, ತದನಂತರ ಸಲ್ಲಿಸುವ ದಾಖಲಾತಿಗಳನ್ನು ಪರಿಗಣಿಸುವುದಿಲ್ಲ. ಆನ್ಲೈನ್ ಅರ್ಜಿಯೊಂದಿಗೆ ಯಾವುದೇ ಅಗತ್ಯ ದಾಖಲೆಯನ್ನು ಸಲ್ಲಿಸದೇ ಇದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಮತ್ತು ಆಸ್ಪಷ್ಟ ಅಥವಾ ಅಪೂರ್ಣ ದಾಖಲೆಗಳನ್ನು ಪರಿಗಣಿಸುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಸಂಡೂರಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಅಥವಾ ದೂ.08395-261156 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಇತರೆ ವಿಷಯಗಳು:
ಸರ್ಕಾರದಿಂದ ಬಂತು ನ್ಯೂ ಅಪ್ಡೇಟ್..!! ಬೋರ್ವೆಲ್ ಕೊರೆಸಲು ನಿಮ್ಮದಾಗಲಿದೆ ಉಚಿತ 4 ಲಕ್ಷ ರೂ.
ಜನ ಸಾಮಾನ್ಯರಿಗೆ ಭರ್ಜರಿ ನ್ಯೂಸ್.!! ಈ ದಾಖಲೆ ಇದ್ರೆ ನಿಮಗೆ ಸಿಗಲಿದೆ 20 ಲಕ್ಷ ಸಾಲ ಸೌಲಭ್ಯ