ಹಲೋ ಸ್ನೇಹಿತರೇ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್‌ಗಳ ಸಹಯೋಗದೊಂದಿಗೆ) ಗಳಡಿಯಲ್ಲಿ ಸೌಲಭ್ಯ ಪಡೆಯಲು (ವಿಶ್ವಕರ್ಮ, ಉಪ್ಪಾರ, ಅಂಬಿಗ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಉಳಿದ ಹಿಂದುಳಿದ ವರ್ಗಗಳ ಪ್ರವರ್ಗ-2 A ಗೆ ಸೇರಿದ ಮಡಿವಾಳ ಮತ್ತು ಅದ್ರ ಉಪಜಾತಿಗಳ ನಿರುದ್ಯೋಗಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
ಅರ್ಜಿದಾರರು ನಿಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆನ್ನು ಜೋಡಣೆಯನ್ನು ಮಾಡಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆನ್ನು ಸೀಡ್ ಅನ್ನು ಮಾಡಿರಬೇಕು. ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಲ್ಲಿ ಸೌಲಭ್ಯವನ್ನು ಪಡೆಯಲು ಅರ್ಹರಿರುತ್ತಾರೆ.
ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನವನ್ನು ಪಡೆದವರು ಮತ್ತು ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯವನ್ನು ಕೋರಿ ಅರ್ಜ ಸಲ್ಲಿಸುವಹಾಗಿಲ್ಲ ಎಂದು ತಿಳಿಸಿದ್ದಾರೆ. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಆಸಕ್ತರು ಸೇವಾಸಿಂಧು https:/sevasindhu.karnataka.gov.in ಅಥವಾ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇತರೆ ವಿಷಯಗಳು :
ಮದ್ಯ ಪ್ರಿಯರಿಗೆ ಬ್ಯಾಡ್ ನ್ಯೂಸ್.!! ದುಬಾರಿಯಾಗಲಿದೆ ಬಡವರ ಬ್ರಾಂಡ್
ಸರ್ಕಾರಿ ನೌಕರರಿಗೆ ಸಂತಸದ ಸುದ್ದಿ.!! ಮೂಲ ವೇತನ ಹಾಗೂ ತುಟ್ಟಿ ಭತ್ಯೆಯಲ್ಲಿ ಭಾರಿ ಏರಿಕೆ