ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ, ಜಿಲ್ಲೆಯಲ್ಲಿನ ಪಡಿತರ ಚೀಟಿದಾರರಿಗೆ ಮೇ ತಿಂಗಳ ಪಡಿತರ ಧಾನ್ಯಗಳನ್ನು ಹಂಚಿಕೆ ಮಾಡಲಾಗಿದೆ. ಅಂತ್ಯೋದಯ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡ್ಗೆ 35 ಕೆ.ಜಿ. ಅಕ್ಕಿಯನ್ನು ವಿತರಿಸಲಾಗಿದ್ದು, ಆದ್ಯತಾ ಹಾಗೂ ಬಿಪಿಎಲ್ (ಬಿಲ್ಲೊ ಪಾವ್ಟಿ ಲೈನ್) ಪಡಿತರ ಚೀಟಿದಾರರಿಗೆ 5 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ವಿತರಿಸಲಾಗಿದೆ.
ಎಪಿಎಲ್ (ಅಬೋವ್ ಪಾವ್ಟಿ ಲೈನ್) ಏಕಸದಸ್ಯ ಪಡಿತರ ಚೀಟಿದಾರರಿಗೆ, ಪ್ರತಿ ಕೆ.ಜಿ. ಅಕ್ಕಿಯನ್ನು 15 ರೂ. ದರದಲ್ಲಿ ಒಪ್ಪಿಗೆ ನೀಡಿದ್ದು, 5 ಕೆ.ಜಿ. ಅಕ್ಕಿಯನ್ನು ವಿತರಿಸಲಾಗುತ್ತದೆ. ಎರಡು ಅಥವಾ ಹೆಚ್ಚಿನ ಸದಸ್ಯರನ್ನು ಹೊಂದಿರುವ ಎಪಿಎಲ್ ಪಡಿತರ ಚೀಟಿದಾರರಿಗೆ, 10 ಕೆ.ಜಿ. ಅಕ್ಕಿಯನ್ನು ಹಂಚಿಕೆ ಮಾಡಲಾಗಿದೆ.
ಸರ್ಕಾರದ ಗ್ಯಾರಂಟಿ ಯೋಜನೆಯಡಿ, 5 ಕೆ.ಜಿ. ಅಕ್ಕಿ ಬದಲಿಗೆ ಪಡಿತರ ಚೀಟಿದಾರರಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದ್ದು, ಯಾವುದೇ ರೀತಿಯ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಪರಿಹರಿಸಿಕೊಳ್ಳಬಹುದು ಎಂದು ತಹಶೀಲ್ದಾರ್ ತಿಳಿಸಿದ್ದಾರೆ.
ಈ ವ್ಯವಸ್ಥೆ ಮೂಲಕ, ಅಕ್ಕಿಯ ಆವಶ್ಯಕತೆಗಳನ್ನು ಪೂರೈಸಲು ಸರ್ಕಾರವು ವಿಶೇಷ ಕ್ರಮಗಳನ್ನು ತೆಗೆದುಕೊಂಡಿದೆ, ಇದು ಜಿಲ್ಲೆಯಲ್ಲಿ ಪಡಿತರ ಚೀಟಿದಾರರ ಆಹಾರ ಭದ್ರತೆಯನ್ನು ಇನ್ನಷ್ಟು ಬಲಪಡಿಸಲು ನೆರವಾಗಲಿದೆ.
ಇತರೆ ವಿಷಯಗಳು
ರಾಜ್ಯದಲ್ಲಿ ಇನ್ನೂ 3 ದಿನ ಭರ್ಜರಿ ಮಳೆಯಾಗಲಿದೆ, ಎಲ್ಲೆಲ್ಲಿ ಮಳೆಯಾಗಲಿದೆ ಎಂಬ ಮಾಹಿತಿ ಇಲ್ಲಿದೆ.
ಕರ್ನಾಟಕ ಗಂಗಾ ಕಲ್ಯಾಣ ಯೋಜನೆ 2024, ಉಚಿತ ಬೋರ್ವೆಲ್ ಗೆ ಅರ್ಜಿ ಸಲ್ಲಿಕೆ ಪ್ರಾರಂಭ.