ಹಲೋ ಸ್ನೇಹಿತರೇ, ರಾಜ್ಯದಲ್ಲಿ ಶೇ. 80 ರಷ್ಟು ಬಿಪಿಎಲ್ ಕಾರ್ಡುಗಳನ್ನು ಹೊಂದಿದ್ದಾರೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದ್ರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಗಳನ್ನು ನೀಡಿದ್ದೇವೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಸಂಪುಟದ ಎಲ್ಲ ಸದಸ್ಯರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಸರ್ಕಾರದ ಹಿರಿಯ ಅಧಿಕಾರಿಗಳು ಹಾಗೂ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪಾಲ್ಗೊಂಡಿದ್ದರು.
ಇದೇ ವೇಳೇ ಮಾತನಾಡಿದ ಅವರು ರಾಜ್ಯದಲ್ಲಿ ಈ ಬಾರಿ ಬರವನ್ನು ನಿರ್ವಹಣೆಯನ್ನು ಉತ್ತಮವಾಗಿ ಮಾಡಿದ್ದೇವೆ. ಕುಡಿಯುವ ನೀರಿಗೆ ಸಂಬಂಧಿಸಿದ ಹಾಗೆ ಸಮಸ್ಯಾತ್ಮಕ ಗ್ರಾಮಗಳನ್ನು ಮೊದಲೇ ಗುರುತಿಸಿ ಪರ್ಯಾಯವಾದ ವ್ಯವಸ್ಥೆ ಮಾಡಿದ ಕಾರಣ ಎಲ್ಲೂ ಹೆಚ್ಚು ತೊಂದರೆಯಾಗಿಲ್ಲ.
ರೇಷನ್ ಕಾರ್ಡ್‌ಗೆ ಮಕ್ಕಳ ಹೆಸರು ಸೇರ್ಪಡೆಗೆ ಸುಲಭ ವಿಧಾನ! ಇಲ್ಲಿದೆ ಡೈರೆಕ್ಟ್ ಲಿಂಕ್
ಬರವನ್ನು ನಿರ್ವಹಣೆಗೆ 85 ಕೋಟಿ ವೆಚ್ಚವಾಗಿದ್ದು, ಪಾರದರ್ಶಕವಾಗಿ ಮಾಡಲಾಗಿದೆ. 783 ಕೋಟಿ ಜಿಲ್ಲಾಧಿಕಾರಿ ಖಾತೆಯಲ್ಲಿ ಲಭ್ಯವಿದೆ. ರಾಜ್ಯದಲ್ಲಿ ಪ್ರಸ್ತುತವಾಗಿ ಮುಂಗಾರು ಅವಧಿಯಲ್ಲಿ ಇದುವರೆಗೆ ಶೇ.7ರಷ್ಟು ಮಳೆಯಾಗಿದೆ.
ಈ ವರ್ಷ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅತಿವೃಷ್ಟಿಯಿಂದ ಸಮಸ್ಯೆಯಾಗುವ ಗ್ರಾಮಗಳನ್ನು ಗುರುತಿಸಲಾಗಿದೆ 225 ಅಂತಹ ಜಲಾಗ್ರಾಮಗಳನ್ನು 1247ಗ್ರಾಮ ಪಂಚಾಯತ್ ಗುರುತಿಸಲಾಗಿದೆ. ಪ್ರತಿಯೊಂದು ಗ್ರಾಂ ಪಂಚಾಯತ್ ನಲ್ಲಿ ಟಾಸ್ಕ್ ಪೋಸ್ಟ್ ರಚನೆ. ಕಂದಾಯ ಇಲಾಖೆ ಮತ್ತು ಪಂಚಾಯತ್, ಪೋಲಿಸ್, ಅಗ್ನಿಶಾಮಕ ಹಾಗೂ ಆರೋಗ್ಯ ಸೇರಿದಂತೆ ತಾಲೂಕು ಒಬ್ಬರಂತೆ ನೋಡಲ್ ಅಧಿಕಾರಿಯನ್ನು ನೇಮಕ. ಎಲ್ಲಾ ಕಡೆ ಅಣಕುಪ್ರದರ್ಶನ ಮಾಡಲಾಗುತ್ತಿದೆ. ಎಲ್ಲಾ ಸಲಕರಣೆಯು ಲಭ್ಯವಾಗಿಡುವಂತೆ ಸೂಚನೆ ನೀಡಿದರು.
ಇತರೆ ವಿಷಯಗಳು:
ಕೃಷಿಯೊಂದಿಗೆ ಪಶುಪಾಲನೆ ಮಾಡಿದ್ರೆ ರೈತರಿಗೆ ಸಿಗುತ್ತೆ 10 ಲಕ್ಷ ರೂ. ಸಾಲ!
ಕೇಂದ್ರ ಸರ್ಕಾರದಿಂದ ಶಾಕಿಂಗ್ ಸುದ್ದಿ.!! ಇನ್ಮುಂದೆ ಇಂತವರಿಗೆ ಸಿಗಲಿದೆ ತೆರಿಗೆಯಲ್ಲಿ ವಿನಾಯಿತಿ