ಗ್ರಾಮೀಣ ಭಾಗದ ಮಕ್ಕಳಿಗೆ ಗುಡ್‌ ನ್ಯೂಸ್.!!‌ ಈ ಸ್ಕೀಮ್‌ ನಿಂದ ನಿಮ್ಮ ಕೈ ಸೇರಲಿದೆ 6000 ರೂ.

ಹಲೋ ಸ್ನೇಹಿತರೇ, ಭಾರತೀಯ ಅಂಚೆ ಇಲಾಖೆಯು ಶಾಲಾ ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣೆ ಉತ್ತೇಜಿಸಲು ‘ದೀನ್ ದಯಾಳ್ ಸ್ಪರ್ಶ್ ಯೋಜನೆ’ ಅಡಿಯಲ್ಲಿ ವಿದ್ಯಾರ್ಥಿ ವೇತನವನ್ನು ನೀಡುವುದಕ್ಕಾಗಿ 6 ನೇ ತರಗತಿಯಿಂದ 9 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

Deen Dayal Touch project

ಸ್ಪರ್ಶ್ ಎಂದ್ರೆ ಸ್ಟ್ಯಾಂಪ್‍ಗಳಲ್ಲಿ ಅಭಿರುಚಿ ಹಾಗೂ ಸಂಶೋಧನೆಯನ್ನು ಹವ್ಯಾಸವಾಗಿ ಉತ್ತೇಜಿಸಲು ವಿದ್ಯಾರ್ಥಿ ವೇತನವನ್ನು ಹಾಗೂ ಶೈಕ್ಷಣಿಕ ಪಠ್ಯಕ್ರಮವಾಗಿ ಬಲಪಡಿಸಲು ಮತ್ತು ಪೂರಕವಾಗಿ ಸಮರ್ಥನೀಯವಾದ ರೀತಿಯಲ್ಲಿ, ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹಗಳ ಹವ್ಯಾಸವನ್ನು ಉತ್ತೇಜಿಸುವುದು ವಿದ್ಯಾರ್ಥಿ ವೇತನದ ಪ್ರಮುಖ ಉದ್ದೇಶವಾಗಿದೆ.

ಈ ಹವ್ಯಾಸವು ಅವರಿಗೆ ವಿಶ್ರಾಂತಿಯನ್ನು ಹಗೂ ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಈ ಯೋಜನೆ ಅಡಿಯಲ್ಲಿ 2023-24 ಶೈಕ್ಷಣಿಕ ವರ್ಷದಲ್ಲಿ ಕನಿಷ್ಠವಾಗಿ ಶೇ.60 ಅಂಕಗಳನ್ನು ಹೊಂದಿರುವ ಹಾಗೂ ಅಂಚೆ ಚೀಟಿಗಳ ಸಂಗ್ರಹದ ಠೇವಣಿ ಖಾತೆ ಇಲ್ಲವೇ ಫಿಲಾಟೆಲಿಕ್ ಕ್ಲಬ್‍ನ ಸದಸ್ಯರು ಮತ್ತು ಅಂಚೆ ಚೀಟಿ ಸಂಗ್ರಹವನ್ನು ಹವ್ಯಾಸವಾಗಿ ಮುಂದುವರಿಸುವ 6 ನೇ ತರಗತಿಯಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ಕೈ ಸೇರಲಿದೆ 6000 ರೂ. ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಈ ವರ್ಗದರಿಗೆ ಸಂತಸದ ಸುದ್ದಿ.!! ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಅಂಚೆ ಇಲಾಖೆಯು ನೀಡುವ ಅಂಚೆ ಚೀಟಿಗಳ ಸಂಗ್ರಹ ಯೋಜನೆಯಲ್ಲಿ ಯಶಸ್ವಿಯಾಗಿ ಸ್ಪರ್ಧಿಸಬೇಕಿದೆ.

ಹಂತ-1 ಅಂಚೆಚೀಟಿಗಳ ಸಂಗ್ರಹದ ರಸಪ್ರಶ್ನೆಯಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಲು/ಪೋಸ್ಟ್ ಮಾಡಲು ಆಗಸ್ಟ್, 31 ಕೊನೆಯ ದಿನವಾಗಿದೆ. ಕೊಡಗು ಜಿಲ್ಲೆಯ ಎಲ್ಲಾ ಶಾಲೆಗಳು ತಮ್ಮ ವಿದ್ಯಾರ್ಥಿಗಳನ್ನು ವಿದ್ಯಾರ್ಥಿ ವೇತನದ ಈ ಯೋಜನೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸಲಾಗುತ್ತಿದೆ. ಹೆಚ್ಚಿನ ಮಾಹಿತಿಗೆ ಬಿ.ಎಸ್.ಸುದರ್ಶನ, ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್, ಕೊಡಗು ಅಂಚೆ ವಿಭಾಗ ದೂ.ಸಂ. 9448291044 ನ್ನು ಸಂಪರ್ಕಿಸಬಹುದು ಎಂದು ಕೊಡಗು ವಿಭಾಗದ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.

ಇತರೆ ವಿಷಯಗಳು:

ಕೆಲಸ ಹುಡುಕುತ್ತಿರುವವರಿಗೆ ಗುಡ್‌ ನ್ಯೂಸ್.!! 338ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಅಹ್ವಾನ

ಪುನಃ ಏರಿಕೆ ಕಂಡ ಅಡುಗೆ ಎಣ್ಣೆ ಬೆಲೆ.!! ಇಂದಿನಿಂದ ಎಷ್ಟು ಬೆಲೆ ಗೊತ್ತಾ.??

Leave a Reply

Your email address will not be published. Required fields are marked *