ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ! ಈ ದಾಖಲೆಗಳಿದ್ದರೆ ಸಾಕು

ಹಲೋ ಸ್ನೇಹಿತರೇ, ಮನೆಯಲ್ಲಿ ಕುಳಿತು ಹೊಲಿಗೆ ಕೆಲಸ ಮಾಡುವ ಮೂಲಕ ಆದಾಯವನ್ನು ಗಳಿಸಲು ಬಯಸಿದರೆ, ಈ ಯೋಜನೆಯ ಲಾಭವನ್ನು ನೀವೂ ಪಡೆದುಕೊಳ್ಳಬಹುದು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು ಪ್ರಾರಂಭಿಸಿದ್ದು, ಅದು ಈಗ್ಲೂ ಚಾಲ್ತಿಯಲ್ಲಿದೆ.

free sewing machine scheme online apply

ಈ ಯೋಜನೆ ಅಡಿಯಲ್ಲಿ ಪ್ರತಿ ರಾಜ್ಯದಲ್ಲಿ 50,000ಕ್ಕೂ ಹೆಚ್ಚು ಕಾರ್ಮಿಕ ಕುಟುಂಬಗಳ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ನೀಡಲಾಗುವುದು. ಸರ್ಕಾರ ನಡೆಸುತ್ತಿರುವ ಉಚಿತ ಹೊಲಿಗೆ ಯಂತ್ರ ಯೋಜನೆಯ ಲಾಭ ಪಡೆಯಲು ಮಹಿಳೆಯರು ಅರ್ಜಿ ಸಲ್ಲಿಸಬೇಕು. ಕೆಳಗೆ ನೀಡಿರುವ ಮಾಹಿತಿಯ ಪ್ರಕಾರ ನೀವು ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಬಹುದು.

ಕೇಂದ್ರ ಸರ್ಕಾರದ ಈ ಉಚಿತ ಹೊಲಿಗೆ ಯಂತ್ರ ಯೋಜನೆ ಲಾಭವನ್ನು ಕರ್ನಾಟಕದ ಮಹಿಳೆಯರು ಕೂಡ ಪಡೆಯಬಹುದು. ಉಚಿತ ಹೊಲಿಗೆ ಯಂತ್ರ ಯೋಜನೆಯಡಿ, 20 ವರ್ಷದಿಂದ 40 ವರ್ಷ ವಯಸ್ಸಿನ ಮಹಿಳೆಯರಿಗೆ ಹೊಲಿಗೆ ಯಂತ್ರ ನೀಡಲಾಗುತ್ತಿದೆ. ಮಹಿಳೆಯರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಕರ್ನಾಟಕದ ಕೆಲ ಜಿಲ್ಲೆಯಲ್ಲಿ ಆನ್ಲೈನ್ ಮತ್ತು ಆಫ್ಲೈನ್ ಎರಡರಲ್ಲೂ ಹೊಲಿಗೆ ಯಂತ್ರಕ್ಕೆ ಅರ್ಜಿ ಸಲ್ಲಿಸುವ ಅವಕಾಶವಿದೆ. ಜಿಲ್ಲಾ ಉದ್ಯಮ ಕೇಂದ್ರ ಯೋಜನೆಯಡಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಪ್ರತಿ ಜಿಲ್ಲಾ ಪಂಚಾಯತಿ ವೆಬ್ಸೈಟ್ ನಲ್ಲಿ ಆನ್ ಲೈನ್ ಪೋರ್ಟಲ್ ಲಿಂಕ್ ನೀಡಲಾಗುತ್ತದೆ. ಅದನ್ನು ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬೇಕು.

ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ.!! 8,000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳ ನೇರ ನೇಮಕಾತಿ

ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆ: 

ಆಧಾರ್ ಕಾರ್ಡ್, ಪಾಸ್ ಪೋರ್ಟ್ ಗಾತ್ರದ ಫೋಟೋ, ಆದಾಯ ಪ್ರಮಾಣಪತ್ರ, ಕಾರ್ಮಿಕ ಕಾರ್ಡ್, ಮೊಬೈಲ್ ನಂಬರ್, ಹೊಲಿಗೆ ತರಬೇತಿ ಪಡೆದ ಪ್ರಮಾಣ ಪತ್ರ, ವಿಳಾಸ ಪುರಾವೆಯಾಗಿ ರೇಷನ್ ಕಾರ್ಡ್, ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್ ನೀಡಬೇಕು.

ವಿಧವೆಯಾದಲ್ಲಿ ವಿಧವಾ ಪ್ರಮಾಣ ಪತ್ರ, ವಿಕಲಾಂಗರಾಗಿದ್ದರೆ ಅದರ ಪ್ರಮಾಣ ಪತ್ರ ನೀಡಬೇಕು. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಯಿಂದ ದೃಡೀಕರಣ ಪತ್ರ ನೀಡಬೇಕಾಗುತ್ತದೆ. ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸಲು, ಕೆಳಗೆ ನೀಡಲಾದ ಹಂತಗಳನ್ನು ಅನುಸರಿಸುವ ಮೂಲಕ ನೀವು ಉಚಿತ ಹೊಲಿಗೆ ಯಂತ್ರ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ನೀವು ಅಧಿಕೃತ ವೆಬ್‌ಸೈಟ್‌ಗೆ ಹೋಗಬೇಕು (https://pmvishwakarma.gov.in/). ಇಲ್ಲಿ ನೀವೆಲ್ಲರೂ ಉಚಿತ ಹೊಲಿಗೆ ಯಂತ್ರ ಯೋಜನೆಗಾಗಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಆಯ್ಕೆಯನ್ನು ಕ್ಲಿಕ್ ಮಾಡಬೇಕು. ಆನ್‌ಲೈನ್ ಅರ್ಜಿ ಆಯ್ಕೆಯನ್ನು ಕ್ಲಿಕ್ ಮಾಡಿದ ನಂತರ ಅರ್ಜಿಯಲ್ಲಿ ಕೇಳಲಾದ ಮಾಹಿತಿಯನ್ನು ಭರ್ತಿ ಮಾಡಬೇಕು. ಆ ನಂತ್ರ ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡಬೇಕು.

ಪ್ರಸ್ತುತ ಉಚಿತ ಹೊಲಿಗೆ ಯಂತ್ರ ಯೋಜನೆಯು ಗುಜರಾತ್, ಕರ್ನಾಟಕ, ರಾಜಸ್ಥಾನ, ಮಹಾರಾಷ್ಟ್ರ, ಉತ್ತರ ಪ್ರದೇಶದಂತಹ ಕೆಲವೇ ರಾಜ್ಯದಲ್ಲಿ ಜಾರಿಯಲ್ಲಿದೆ. ಶೀಘ್ರದಲ್ಲೇ ಎಲ್ಲ ರಾಜ್ಯದಲ್ಲಿ ಈ ಯೋಜನೆ ಜಾರಿಗೆ ತರುವ ಪ್ಲಾನ್ ನಲ್ಲಿ ಕೇಂದ್ರ ಸರ್ಕಾರವಿದೆ. ಈ ಯೋಜನೆಯಡಿ ಮಹಿಳೆಯರಿಗೆ ಹೊಲಿಗೆ ಯಂತ್ರ ಪಡೆಯಲು 15000 ರೂಪಾಯಿ ಸಿಗುತ್ತದೆ. ಅದ್ರಿಂದ ವಿದ್ಯುತ್ ಚಾಲಿತ ಹೊಲಿಗೆ ಯಂತ್ರ ಖರೀದಿಸಿ ಮಹಿಳೆಯರು ಕೆಲಸ ಶುರು ಮಾಡಬಹುದು.

ಇತರೆ ವಿಷಯಗಳು:

ಕಾಸು ಕೊಡೊ ಅವಶ್ಯಕತೆನೆ ಇಲ್ಲ.!! ನಿಮ್ಮ ಮನೆ ಸೇರಲಿದೆ ಉಚಿತ ಡಿಜಿಟಲ್‌ ಮೀಟರ್

ಯಜಮಾನಿಯರೇ ಇತ್ತ ಕಡೆ ಗಮನ ಕೊಡಿ.! ಬಾಕಿ ಎಲ್ಲಾ ತಿಂಗಳ ಹಣ ಜಮಾ

Leave a Reply

Your email address will not be published. Required fields are marked *