ಸ್ವ ಉದ್ಯೋಗಿಗಳಿಗೆ ಗುಡ್‌ ನ್ಯೂಸ್.!!‌ ಉಚಿತ ತರಬೇತಿ ಯೊಂದಿಗೆ ನಿಮ್ಮದಾಗಲಿದೆ ಸಾಲ ಸೌಲಭ್ಯ

ಹಲೋ ಸ್ನೇಹಿತರೇ, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆ,ಕುಮಟಾವತಿಯಿಂದ ಉಚಿತ ಊಟ ಮತ್ತು ವಸತಿ ಸಹಿತ 30 ದಿನದ ಉಚಿತವಾಗಿ ಹೊಲಿಗೆ ಉಚಿತ ತರಬೇತಿ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯು ನಡೆಯುವ ಕೇಂದ್ರದ ವಿವರಗಳು ಇತ್ಯಾದಿ ಸಂಪೂರ್ಣವಾದ ಮಾಹಿತಿಯನ್ನು ಈ ಲೇಖನ ಮೂಲಕ ನಿಮಗೆ ವಿವರಿಸಲಾಗಿದೆ.

Free tailoring training kannada

ಯಾರೆಲ್ಲ ಅರ್ಜಿ ಸಲ್ಲಿಸಬಹುದು?

1) ಅರ್ಜಿದಾರರ ವಯಸ್ಸು 18 ರಿಂದ 45 ವರ್ಷದ ಒಳಗಿರಬೇಕು.

2) ಕನ್ನಡ ಬಾಷೆಯನು ಓದಲು ಮತ್ತು ಬರೆಯಲು ಬರಬೇಕು.

3) ಅರ್ಜಿದಾರ ಅಭ್ಯರ್ಥಿಯು ಸಂಸ್ಥೆಯಿಂದ ತರಬೇತಿ ಪಡೆದ ಬಳಿಕ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿಯನ್ನು ಹೊಂದಿರಬೇಕು.

4) ಗ್ರಾಮೀಣ ಭಾಗದಲ್ಲಿ ವಾಸಿರುವ BPL ಕಾರ್ಡ್ ಹೊಂದಿರುವ ಅಭ್ಯರ್ಥಿಗಳಿಗೆ ಈ ತರಬೇತಿಯಲ್ಲಿ ಭಾಗವಹಿಸಲು ಮೊದಲನೆಯ ಅದ್ಯತೆಯನ್ನು ನೀಡಲಾಗುತ್ತದೆ ಎಂದು ತರಬೇತಿ ನೀಡುವ ಸಂಸ್ಥೆಯ ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದೆ:

ಈ ತರಬೇತಿಯು ಒಟ್ಟು 30 ದಿನ ಆಯೋಜನೆ ಮಾಡಲಾಗಿದ್ದು ತರಬೇತಿ ಕೇಂದ್ರದಿಂದ ತರಬೇತಿ ಭಾಗವಹಿಸುವ ಎಲ್ಲಾ ಅಭ್ಯರ್ಥಿಗಳಿಗೆ ಉಚಿತ ವಸತಿ ಮತ್ತು ಊಟದ ವ್ಯವಸ್ಥೆ ಇರುತ್ತದೆ ಮತ್ತು ತರಬೇತಿಯು ಸಂಪೂರ್ಣ ಉಚಿತವಾಗಿದ್ದು ಯಾವುದೇ ಶುಲ್ಕ ಪಾವತಿ ಮಾಡುವ ಅವಶ್ಯಕತೆ ಇರುವುದಿಲ್ಲ ಎಂದು ತಿಳಿಸಲಾಗಿದೆ.

ಸಾಲ ಸೌಲಭ್ಯ:

ಈ ತರಬೇತಿಗಳಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ 30 ದಿನಗಳ ತರಬೇತಿಯಲ್ಲಿ ಉಚಿತವಾಗಿ ಹೋಲಿಗೆ ತರಬೇತಿ ನೀಡುವುದರ ಜೊತೆಗೆ ರಾಜ್ಯ ಮತ್ತು ಕೇಂದ್ರ ಸರಕಾರದ ಯಾವೆಲ್ಲ ಯೋಜನೆ ಅಡಿ ಸ್ವ-ಉದ್ಯೋಗವನ್ನು ಪ್ರಾರಂಭಿಸಲು ಬ್ಯಾಂಕ್ ನ ಮೂಲಕ ಸಹಾಯಧನದಲ್ಲಿ ಸಾಲವನ್ನು ಪಡೆಯಬಹುದು ಎಂದು ಸಹ ಮಾಹಿತಿ ನೀಡುವುದ್ರ ಜೊತೆಗೆ ಸಾಲವನ್ನು ಪಡೆಯಲು ದಾಖಲಾತಿಗಳನ್ನು ಹೇಗೆ ಸಿದ್ದಪಡಿಸಬೇಕು? ಯಾವ ರೀತಿಯಾಗಿ ಸಾಲಕ್ಕೆ ಅರ್ಜಿಯನ್ನು ಸಲ್ಲಿಸಬೇಕು ಎನ್ನುವುದರ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ.

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ.!! ಕೇಂದ್ರದಿಂದ 1 ಲಕ್ಷ ʻಆಯುಷ್ಮಾನ್ ಮಿತ್ರʼರ ನೇಮಕಾತಿ

ಅರ್ಜಿ ಸಲ್ಲಿಸುವ ವಿಧಾನ:

ಈ ತರಬೇತಿಯಲ್ಲಿ ಭಾಗವಹಿಸಲು ಆಸಕ್ತಿಯಿರುವ ಅರ್ಹ ಅಭ್ಯರ್ಥಿಗಳು ನೇರವಾಗಿ ಅಗತ್ಯ ದಾಖಲಾತಿಗಳನ್ನು ತೆಗೆದುಕೊಂಡು ತರಬೇತಿ ಪ್ರಾರಂಭವಾಗುವ ದಿನ ಹಾಜರಾಗಬಹುದು ಅಥವಾ ಮುಂಚಿತವಾಗಿ ನಿಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಈ ಮೊಬೈಲ್ 9449860007, 9538281989, 9916783825, 888044612 ಸಂಖ್ಯೆಗಳಿಗೆ ಸಂಪರ್ಕಿಸಿ ಹೆಸರನ್ನು ನೋಂದಣಿ ಮಾಡಿಸಬಹುದು.

ಅಗತ್ಯ ದಾಖಲೆಗಳು:

  • ಆಧಾರ್ ಕಾರ್ಡ್ ಪ್ರತಿ
  • ಬ್ಯಾಂಕ್ ಪಾಸ್ ಬುಕ್
  • ರೇಶನ್ ಕಾರ್ಡ್
  • ಮೊಬೈಲ್ ಸಂಖ್ಯೆ

ತರಬೇತಿ ನಡೆಯುವ ಅವಧಿ:

30 ದಿನಗಳವರೆಗೆ ಉಚಿತ ಹೋಲಿಗೆ ತರಬೇತಿಯ ದಿನಾಂಕ: 12 ಆಗಸ್ಟ್ 2024 ರಿಂದ ಪ್ರಾರಂಭವಾಗಿ 10 ಸೆಪ್ಟೆಂಬರ್ 2024ಕ್ಕೆ ಮುಕ್ತಾಯವಾಗಲಿದೆ ಎಂದು ತಿಳಿಸಿದ್ದಾರೆ.

ತರಬೇತಿ ನಡೆಯುವ ಸ್ಥಳ:

ಇಂಡಿಸ್ಟ್ರೀಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ, ಉತ್ತರಕನ್ನಡ ಜಿಲ್ಲೆ-581343

ಇನ್ನು ಹೆಚ್ಚಿನ ಮಾಹಿತಿಗಾಗಿ: 9449860007, 9538281989, 9916783825, 888044612

ಇತರೆ ವಿಷಯಗಳು :

ಈ ಜಿಲ್ಲೆಗಳಲ್ಲಿ 48 ಗಂಟೆಗಳ ಕಾಲ ಭಾರೀ ಮಳೆ ; IMD ರೆಡ್‌ ಅಲರ್ಟ್‌ ಘೋಷಣೆ

ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್‌! 80 ಕೋಟಿ ರೂ.ವೆಚ್ಚದಲ್ಲಿ ವಿದ್ಯಾರ್ಥಿವೇತನ ಘೋಷಣೆ

Leave a Reply

Your email address will not be published. Required fields are marked *