ಗ್ಯಾರಂಟಿ ಫಲಾನುಭವಿಗಳೇ ಗಮನಿಸಿ: ಹಣ ಬಾರದೇ ಇದ್ದರೆ ತಪ್ಪದೇ ಈ ಕೆಲಸ ಮಾಡಿ

ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ರಾಜ್ಯ ಸರ್ಕಾರದ ಮಹತ್ವಕಾಂಕ್ಷಿಯ ಯೋಜನೆಗಳಾಗಿರುವ 5 ಗ್ಯಾರಂಟಿ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಯಾವುದೇ ರೀತಿಯ ತಾಂತ್ರಿಕವಾದ ಸಮಸ್ಯೆಗಳು ಕಂಡುಬಂದಲ್ಲಿ ತಕ್ಷಣ ಸರಿಪಡಿಸುವ ಕಾರ್ಯವನ್ನು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮಾಡಬೇಕು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಎನ್.ಝುಬೇರ್ ಅವರು ಸೂಚನೆಯನ್ನು ನೀಡಿದರು.

Guarantee Schemes

ನಗರದ ಅನಂತಪುರ ರಸ್ತೆಯ ನೂತನವಾದ ಜಿಲ್ಲಾಡಳಿತ ಭವನದ ವಿಡಿಯೋ ಸಭಾಂಗಣದಲ್ಲಿ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆಯ ಅನುಷ್ಠಾನದ ಪ್ರಾಧಿಕಾರದ ಜಿಲ್ಲಾ ಸಮಿತಿಯ ಅಧ್ಯಕ್ಷ ಮತ್ತು ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

5 ಗ್ಯಾರಂಟಿ ಯೋಜನೆಗಳಾದ ಗೃಹ ಲಕ್ಷ್ಮಿ, ಶಕ್ತಿ ಯೋಜನೆ, ಅನ್ನ ಭಾಗ್ಯ , ಗೃಹ ಜ್ಯೋತಿ ಹಾಗೂ ಯುವನಿಧಿ ಯೋಜನೆಗಳನ್ನು ಜಿಲ್ಲೆಯ ಅರ್ಹ ಫಲಾನುಭವಿಗಳಿಗೆ ತಲುಪಿಸುವಂತಹ ನಿಟ್ಟಿನಲ್ಲಿ ಸಮಿತಿಯನ್ನು ರಚಿಸಿದ್ದು, ಲೋಪದೋಷ ಹಾಗೂ ವಿಳಂಬಗಳು ಕಂಡುಬಂದಲ್ಲಿ ಅಧ್ಯಕ್ಷರು ಹಾಗೂ ಸದಸ್ಯರ ಗಮನಕ್ಕೆ ತರಬೇಕು ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜಿಲ್ಲಾಧ್ಯಕ್ಷ K.E.ಚಿದಾನಂದಪ್ಪ ಅವರು ಮಾತನಾಡಿ, ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿಯ ಯೋಜನೆಗಳಿಂದ ಜಿಲ್ಲೆಯ ಸಹಸ್ರಾರು ಕುಟುಂಬಗಳು ಏಳಿಗೆಯನ್ನು ಕಾಣುತ್ತಿವೆ. ಅನುಷ್ಠಾನದ ಸಮಿತಿಯ ಕಾರ್ಯಕರ್ತರು ಪ್ರತಿಯೊಬ್ಬರ ಮನೆಯ ಬಾಗಿಲಿಗೆ ತೆರಳಿ ಯೋಜನೆಗಳು ತಲುಪಿದ ಬಗ್ಗೆ ಖಾತರಿಯನ್ನು ಪಡಿಸಿಕೊಳ್ಳಬೇಕು. ತಾಂತ್ರಿಕ ಸಮಸ್ಯೆಯಿಂದ ಯೋಜನೆಯ ಸದುಪಯೋಗವನ್ನು ಪಡೆಯದ ಜನರ ಅಗತ್ಯ ದಾಖಲೆಗಳನ್ನು ಪಡೆದುಕೊಂಡು ಯೋಜನೆಯ ಫಲಾನುಭವಿಗಳಿಗೆ ಮುಟ್ಟುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಅಹವಾಲು ಅಥವಾ ಮಾಹಿತಿಗಳು ಬೇಕಾದಲ್ಲಿ ಅಲೆದಾಡಿಸದೇ ಸೂಕ್ತ ಪರಿಹಾರವನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಒದಗಿಸಬೇಕು ಎಂದರು.

ಕೊಳವೆ ಬಾವಿ ವಿಫಲವಾದ ರೈತರಿಗೆ ಸರ್ಕಾರದಿಂದ ಈ ಯೋಜನೆ ಜಾರಿ!

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್ ಅವರು, ಗೃಹಲಕ್ಷ್ಮೀ ಯೋಜನೆಯ ಬಗ್ಗೆ ಮಾಹಿತಿಯನ್ನು ನೀಡುತ್ತಾ, ಜಿಲ್ಲೆಯಲ್ಲಿ ಒಟ್ಟು 3,11,180 ಪಡಿತರ ಚೀಟಿಗಳು ಇದ್ದು, ಅದರಲ್ಲಿ ಅಂತ್ಯೋದಯ, APL, BPL ಕಾರ್ಡ್ ಫಲಾನುಭವಿಗಳು ಸೇರಿ 2,81,987 ಫಲಾನುಭವಿಗಳು ನೋಂದಾಯಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ಪ್ರತಿ ಗೃಹಲಕ್ಷ್ಮೀ ಯೋಜನೆಗೆ ಒಟ್ಟು ರೂ.55 ಕೋಟಿ ಹಣವನ್ನು ಜಮೆ ಮಾಡಲಾಗುತ್ತಿದೆ ಎಂದು ಹೇಳಿದರು.

ಇಲ್ಲಿಯವರೆಗೂ ಗೃಹಲಕ್ಷ್ಮೀ ಹಣವು ಜಮಾ ಆಗದೇ ಇದ್ದವರು ಎನ್‍ಪಿಸಿಐ ಸಕ್ರಿಯವಾಗಿದೆಯೇ ಎಂಬುದನ್ನು ಸಾರ್ವಜನಿಕರು ಪರಿಶೀಲಿಸಿಕೊಳ್ಳಬೇಕು. ಒಮ್ಮೆ ಬ್ಯಾಂಕ್ ಮತ್ತು ಆಧಾರ್ ಜೋಡಣೆಗೆ EKYC ಮಾಡಿಸಿದಲ್ಲಿ ಪದೇ ಪದೇ ಮಾಡಿಸುವಂತಹ ಅಗತ್ಯವಿರುವುದಿಲ್ಲ ಎಂದರು. ಯಾವುದೇ ಕಾರಣಕ್ಕೂ ಗೃಹಲಕ್ಷ್ಮೀ ಯೋಜನೆಯನ್ನು ಸ್ಥಗಿತಗೊಳಿಸಲಾಗುವುದಿಲ್ಲ ಎಂದು ಈಗಾಗಲೇ ಸರ್ಕಾರವು ಖಚಿತ ಪಡಿಸಿದೆ ಎಂದು ಸಭೆಯಲ್ಲಿ ತಿಳಿಸಿದರು. ಸಭೆಯಲ್ಲಿ ಇನ್ನುಳಿದ ಗ್ಯಾಂರಟಿ ಯೋಜನೆಗಳಾದ ಗೃಹ ಜ್ಯೋತಿ, ಶಕ್ತಿ ಯೋಜನೆ, ಯುವನಿಧಿ ಹಾಗೂ ಅನ್ನ ಭಾಗ್ಯ ಯೋಜನೆಗಳ ಅನುಷ್ಠಾನ ಹಾಗೂ ಪ್ರಗತಿಯ ವಿವರಗಳ ಬಗ್ಗೆಯು ಚರ್ಚಿಸಲಾಯಿತು.

ಇತರೆ ವಿಷಯಗಳು:

ಮೇಕೆ-ಕುರಿ-ಹಸು ಸಾಕಾಣಿಕೆಗೆ ಸರ್ಕಾರದ ಸಹಕಾರ.!! ಈ ಯೋಜನೆಯಡಿ ನಿಮ್ಮದಾಗಲಿದೆ ಸಹಾಯಧನ

ರೈತರಿಗೆ ಸಂತಸದ ಸುರಿ ಮಳೆ.!! ನೀರಾವರಿಗಾಗಿ ಸೋಲಾರ್‌ ಪಂಪ್‌ಗಳ ಮೇಲೆ ಭರ್ಜರಿ ಸಬ್ಸಿಡಿ

Leave a Reply

Your email address will not be published. Required fields are marked *