ಕೆಲಸ ಹುಡುಕುತ್ತಿರುವವರಿಗೆ ಗುಡ್‌ ನ್ಯೂಸ್.!! 338ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಅಹ್ವಾನ

ಹಲೋ ಸ್ನೇಹಿತರೇ, ಹುಬ್ಬಳ್ಳಿಯ ವಿದ್ಯುತ್ ಸರಬರಾಜು ಕಂಪೆನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 338 ಹುದ್ದೆಗಳಿಗೆ ಅರ್ಹರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅಪ್ರೆಂಟಿಸ್‌ಶಿಪ್ ಕಾಯಿದೆಯ 1961ರ ಅಡಿಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಈ ಹೊಸದಾದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

hescom recruitment
hescom recruitment

ಈ ಅವಕಾಶವನ್ನು ಪಡೆಯಲು ಬಯಸುವ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ನ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಈಗಾಗಲೇ ಹೆಸ್ಕಾಂ ಅಪ್ರೆಂಟಿಸ್ ನೇಮಕಾತಿಯನ್ನು 2024 ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದ್ದು, ಆಗಸ್ಟ್ 20 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು NATS ಪೋರ್ಟಲ್‌ನಲ್ಲಿ ನೋಂದಾಯಿಸಿಕೊಳ್ಳಬೇಕಾಗುತ್ತದೆ. ಇದು ಅಪ್ರೆಂಟಿಸ್‌ಶಿಪ್ ನೇಮಕಾತಿಗಾಗಿ ಏಕೀಕೃತವಾದ ಪೋರ್ಟಲ್ ಆಗಿದೆ.

ಹುದ್ದೆಗಳ ವಿವರ

ಎಲೆಕ್ಟ್ರಿಕಲ್ ಹಾಗೂ ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಬಿಇ ಪದವೀಧರರಿಗೆ ಒಟ್ಟು 200 ಹುದ್ದೆಗಳನ್ನು ಮತ್ತು ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಹೊಂದಿರುವವರಿಗೆ ಒಟ್ಟು 138 ಹುದ್ದೆಗಳು ಖಾಲಿಯಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಅಪ್ರೆಂಟಿಸ್‌ಶಿಪ್ ಹುದ್ದೆಗೆ ಹೆಸ್ಕಾಂನಲ್ಲಿ ಆಯ್ಕೆಯಾಗುವ ಅಭ್ಯರ್ಥಿಗಳು ಮಾಸಿಕ ಸ್ಟೈಫಂಡ್ ಪಡೆಯುತ್ತಾರೆ. ಪದವೀಧರ ಅಪ್ರೆಂಟಿಸ್‌ಗಳಿಗೆ ಮಾಸಿಕವಾದ ಸ್ಟೈಫಂಡ್ 9000 ರೂ. ಹಾಗೂ ಡಿಪ್ಲೋಮಾ ಅಪ್ರೆಂಟಿಸ್‌ಗಳಿಗೆ ಮಾಸಿಕವಾಗಿ ಸ್ಟೈಫಂಡ್ 8000 ರೂ. ಆಗಿರುತ್ತದೆ.

ಹುದ್ದೆಗೆ ಇರಬೇಕಾದ ಅರ್ಹತೆ

ಅಪ್ರೆಂಟಿಸ್ ಶಿಪ್ ನಿಯಮಗಳ ಪ್ರಕಾರ ಪ್ರತಿ ಹುದ್ದೆಗೂ ವಯಸ್ಸಿನ ಮಿತಿ ಅನ್ವಯಿಸುತ್ತದೆ. ಇದಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

ಪುನಃ ಏರಿಕೆ ಕಂಡ ಅಡುಗೆ ಎಣ್ಣೆ ಬೆಲೆ.!! ಇಂದಿನಿಂದ ಎಷ್ಟು ಬೆಲೆ ಗೊತ್ತಾ.??

ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಬಿಇ, ಬಿಟೆಕ್ ಪದವಿ ಹಾಗೂ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಪಾಲಿಟೆಕ್ನಿಕ್ ಕಾಲೇಜು ಅಥವಾ ಸಂಸ್ಥೆಯಿಂದ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ 3 ವರ್ಷಗಳ ಡಿಪ್ಲೊಮಾ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆ ಪ್ರಕ್ರಿಯೆ

ಅರ್ಜಿ ಸಲ್ಲಿಸುವ ಮೊದಲು ಪೂರ್ಣ ನೇಮಕಾತಿ ಅಧಿಸೂಚನೆಯನ್ನು ಒಮ್ಮೆ ಎಚ್ಚರಿಕೆಯಿಂದ ಓದಿ. ಇದರಿಂದಲೇ ಅರ್ಹತಾ ಮಾನದಂಡಗಳು ಹಾಗೂ ಅಪ್ಲಿಕೇಶನ್ ಪ್ರಕ್ರಿಯೆಯನ್ನು ಸರಿಯಾಗಿ ಅರ್ಥಮಾಡಿಕೊಳ್ಳಬಹುದು. ಬಳಿಕ ಅಧಿಕೃತವಾದ ವೆಬ್‌ಸೈಟ್‌ಗೆ ಭೇಟಿ ನೀಡಿ ಹಾಗೂ ಆನ್‌ಲೈನ್ ಅರ್ಜಿ ನಮೂನೆಯನ್ನು ಭರ್ತಿ ಮಾಡಿ. ಆನ್‌ಲೈನ್ ಮೋಡ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಿ. ಅನಂತರ ಆನ್‌ಲೈನ್ ಅಪ್ಲಿಕೇಶನ್‌ನಲ್ಲಿ ಕೇಳಿರುವ ಅಗತ್ಯವಾದ ದಾಖಲೆಗಳು ಮತ್ತು ಪ್ರಮಾಣಪತ್ರಗಳನ್ನು ಅಪ್‌ಲೋಡ್ ಮಾಡಿ. ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿಯನ್ನು ಮಾಡಿದ ಅನಂತರ ಅರ್ಜಿ ನಮೂನೆಯನ್ನು ಸಲ್ಲಿಸಿ.

ಆಯ್ಕೆ ಪ್ರಕ್ರಿಯೆ

ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಆಗಸ್ಟ್ 20ರೊಳಗೆ ಅರ್ಜಿ ಸಲ್ಲಿಸಬೇಕು. ಶಾರ್ಟ್‌ಲಿಸ್ಟ್ ಅನ್ನು ಮಾಡಿದ ಅಭ್ಯರ್ಥಿಗಳ ಪಟ್ಟಿಯನ್ನು ಆಗಸ್ಟ್ 27ರೊಳಗೆ ಘೋಷಣೆಯನ್ನು ಮಾಡಲಾಗುತ್ತದೆ. ದಾಖಲೆಯ ಪರಿಶೀಲನೆಯನ್ನು ಪ್ರಕ್ರಿಯೆಯು ಸೆಪ್ಟೆಂಬರ್ 9ರಂದು ಹುಬ್ಬಳ್ಳಿಯ ಕಾರವಾರದ ರಸ್ತೆ, ವಿದ್ಯುತ್ ನಗರದ ಕಾರ್ಯನಿರ್ವಾಹಕ ಅಭಿಯಂತರರ ಕಚೇರಿ (ಎಲ್.), ಐಟಿಐ ಮತ್ತು ಹೆಸ್ಕಾಂನಲ್ಲಿ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷ ತರಬೇತಿಯನ್ನು ಇರುತ್ತದೆ.

ಇತರೆ ವಿಷಯಗಳು:

ಕೇಂದ್ರದಿಂದ ಭರ್ಜರಿ ಸುದ್ದಿ.! ಮೋದಿ ಸರ್ಕಾರದಿಂದ ಹೊಸ ಆಫರ್

ಎಸ್‌ಎಸ್‌ಎಲ್‌ಸಿ ಪಾಸಾದ ಮಹಿಳೆಯರಿಗೆ ಬಂಪರ್‌ ನ್ಯೂಸ್ : ಈ ಹುದ್ದೆಗಳಿಗೆ ಅರ್ಜಿ ಆಹ್ವಾನ.!

Leave a Reply

Your email address will not be published. Required fields are marked *