ಹಲೋ ಸ್ನೇಹಿತರೇ, ತೋಟಗಾರಿಕೆ ಇಲಾಖೆ ವತಿಯಿಂದ ತೋಟಗಾರಿಕೆ ಬೆಳೆ ಬೆಳೆಯುವ ರೈತ ಫಲಾನುಭವಿಗಳಿಗೆ 2024-25ನೇ ಸಾಲಿನಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ..
ವಿವಿಧ ಯೋಜನೆಗಳು:
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣಾ ಉದ್ಯೋಗ ಖಾತರಿ ಯೋಜನೆ:
ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮದಡಿ (ಬಾಳೆ, ಅಂಜೂರ, ದಾಳಿಂಬೆ, ನುಗ್ಗೆ, ಪೇರಲ, ಪಪ್ಪಾಯ, ತೆಂಗು, ಡ್ರಾಗನ್ ಫ್ರೂಟ್, ನೇರಳೆ, ಮಾವು, ಸೀತಾಫಲ್, ಹುಣಸೆ, ಕರಿಬೇವು, ಮತ್ತು ಗುಲಾಬಿ ಹಾಗೂ ಇತರೆ) ಬೆಳೆಗಳಿಗೆ ಮತ್ತು ಬದುಗಳಲ್ಲಿ ತೆಂಗು ಸಸಿ ನಾಟಿ, ಕೃಷಿ ಹೊಂಡ, ಬದುಗಳ ನಿರ್ಮಾಣ, ಕೊಳವೆ ಬಾವಿ ಮರುಪೂರಣ ಘಟಕ ಇತ್ಯಾದಿ ಅನುಷ್ಠಾನಗೊಳಿಸಲಾಗುವುದು.
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆ:
ಹೊಸ ಪ್ರದೇಶ ವಿಸ್ತರಣೆ, ಕೃಷಿಹೊಂಡ, ಈರುಳ್ಳಿ ಶೇಖರಣ ಘಟಕ, ನೆರಳು ಪರದೆ, ಪ್ಯಾಕ್ಹೌಸ್ ಮತ್ತು ತಳ್ಳುವ ಗಾಡಿ ವಿವಿಧ ಘಟಕಗಳಿಗೆ ಎಲ್ಲಾ ವರ್ಗದ ರೈತರಿಗೆ ಶೇ.50 ರಷ್ಟು ಲಭ್ಯತೆಯ ಮೇರೆಗೆ ಸಹಾಯಧನ ನೀಡಲಾಗುತ್ತದೆ.
ಎಣ್ಣೆಪ್ರಿಯರಿಗೆ ಸಂತಸದ ಸುದ್ದಿ.!! ಕರ್ನಾಟಕಕ್ಕೆ ಬರಲಿದೆ ದೇಶೀಯ ‘ಹುಲಿ’ ರಮ್..!
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ:
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯ-ಹನಿ ನೀರಾವರಿ ಕಾರ್ಯಕ್ರಮದಡಿ ಸಹಾಯಧನ ನೀಡಲಾಗುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಹೊಸದಾಗಿ ಅಳವಡಿಸುವ ಫಲಾನುಭವಿಗಳಿಗೆ ಮಾತ್ರ ಶೇ.75 ರಂತೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಫಲಾನುಭವಿಗಳಿಗೆ ಶೇ.90 ರಂತೆ ಸಹಾಯಧನ ವಿತರಿಸಲಾಗುವುದು.
ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿ:
ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಕುರುಗೋಡು, ಕಂಪ್ಲಿ, ಸಂಡೂರು, ಸಿರುಗುಪ್ಪ ತಾಲ್ಲೂಕುಗಳಲ್ಲಿ ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಯ ಮೇಗಾ ಮೈಕ್ರೊ ಆಗ್ರಿ-ಹಾರ್ಟಿ ಸಿಸ್ಟಮ್ ಕಾರ್ಯಕ್ರಮದಡಿ ಅನುಷ್ಠಾನಗೊಳಿಸಲಾಗುತ್ತಿರುವ ತೋಟಗಾರಿಕೆ ಬೆಳೆಗಳಾದ ಮಾವು, ಸೀತಾಫಲ, ಸೀಬೆ, ಗೇರು, ಹುಣಸೆ, ನೇರಳೆ ಮತ್ತು ಎಳೆನೀರು ತೆಂಗಿನಕಾಯಿ ಹೊಸ ಪ್ರದೇಶ ವಿಸ್ತರಣೆ ಕಾರ್ಯಕ್ರಮ ಮತ್ತು ಬೈಯೋಡೈಜಿಸ್ಟರ್ ಮತ್ತು ಅರಣ್ಯ ಬೆಳೆಗಳಾದ ಸಾಗುವಾನಿ, ಮಹಾಗನಿ ಮತ್ತು ಶ್ರೀಗಂಧ ಬೆಳೆಯಲು ಸಹ ಅರ್ಜಿ ಆಹ್ವಾನಿಸಲಾಗಿದೆ.
ಮೇಲ್ಕಂಡ ಎಲ್ಲಾ ಯೋಜನೆಗಳಡಿ ಅಲ್ಪಸಂಖ್ಯಾತರಿಗೆ ಶೇ.15, ವಿಕಲಾಂಗಚೇತನರಿಗೆ ಶೇ.5 ಮತ್ತು ರೈತ ಮಹಿಳೆಯರಿಗೆ ಶೇ.33 ರಷ್ಟು ಈ ಯೋಜನೆಗಳಡಿ ಅನುದಾನ ಮೀಸಲಿರಿಸಲಾಗಿದ್ದು, ಆಸಕ್ತ ರೈತ ಫಲಾನುಭವಿಗಳು ಈ ಯೋಜನೆಗಳ ಸೌಲಭ್ಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಲಾಗಿದೆ. ಆಸಕ್ತ ತೋಟಗಾರಿಕೆ ರೈತ ಫಲಾನುಭವಿಗಳು ಆಯಾ ತಾಲ್ಲೂಕು ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಸಂಪರ್ಕಿಸಬಹುದು.
ಇತರೆ ವಿಷಯಗಳು:
ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆಗೆ ಅರ್ಜಿ ಆಹ್ವಾನ! ಈ ದಾಖಲೆಗಳಿದ್ದರೆ ಸಾಕು
ಮಿನಿ ಟ್ರ್ಯಾಕ್ಟರ್ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ!