ಹಲೋ ಸ್ನೇಹಿತರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಒಂದು ಲಕ್ಷ ಮನೆ ಯೋಜನೆಯಡಿ ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಈ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಈ ಮಹತ್ವದ ನಿರ್ಧಾರದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ.
ಬಿಜೆಪಿ ಸರ್ಕಾರ ದಲ್ಲಿ ಯೂನಿಟ್ ವೆಚ್ಚ ಹೆಚ್ಚಳ ನಿರ್ಧಾರ ದಿಂದ ಆತಂಕ ಗೊಂಡಿದ್ದ ರಾಜ್ಯದ 12,153 ಕುಟುಂಬಗಳಿಗೆ ಸಿಹಿ ಸುದ್ದಿ ನೀಡಿದ್ದು, ಪ್ರತಿ ಮನೆಗೆ ಒಂದು ಲಕ್ಷ ರೂ. ನಂತೆ 121 ಕೋಟಿ 53 ಲಕ್ಷ ರೂ.ಸರ್ಕಾರವೇ ಭರಿಸಲು ಒಪ್ಪಿಗೆ ನೀಡಲಾಗಿದೆ.
ಕೇಂದ್ರ ಸರ್ಕಾರ ಪ್ರತೀ ಮನೆಗೆ 1.50 ಲಕ್ಷ, ರಾಜ್ಯ ಸರ್ಕಾರ ಸಾಮಾನ್ಯ ವರ್ಗಕ್ಕೆ 1.20 ಲಕ್ಷ, ಎಸ್ ಟಿ -ಎಸ್ ಸಿ ವರ್ಗಕ್ಕೆ 2 ಲಕ್ಷ ರೂ. ನಂತೆ ನಿಗದಿಯಾಗಿತ್ತು. ನಂತರ ಬಿ. ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗ ಬಿಜೆಪಿ ಸರ್ಕಾರದಲ್ಲಿ ಘಟಕ ವೆಚ್ಚವನ್ನು 10 ಲಕ್ಷದ 60 ಸಾವಿರ ರೂ. ನಿಗದಿ ಮಾಡಲಾಗಿತ್ತು. ಇದಕ್ಕೆ 60 ಸಾವಿರ ರೂ. ಜಿಎಸ್ ಟಿ ಸೇರಿ 11 ಲಕ್ಷದ 20 ಸಾವಿರ ರೂ. ಆಗಿತ್ತು. ಇಷ್ಟು ಮೊತ್ತ ಭರಿಸಲು ಕಷ್ಟ ಎಂದು ಫಲಾನುಭವಿಗಳು ಸಚಿವರ ಬಳಿ ಮನವಿ ಮಾಡಿಕೊಳ್ಳಲಾಗಿತ್ತೂ.
ಇದನ್ನು ಓದಿ: ಉದ್ಯೋಗ ಆಕಾಂಕ್ಷಿಗಳಿಗೆ ಭರ್ಜರಿ ಆಫರ್.!! ಇಲ್ಲಿದೆ 200 ಕ್ಕೂ ಹೆಚ್ಚು ಖಾಲಿ ಹುದ್ದೆಗಳಿಗೆ ಅವಕಾಶ; ಇಂದೇ ಅಪ್ಲೇ ಮಾಡಿ
ಇದೀಗ ಈ ಬಗ್ಗೆ ಸರ್ಕಾರದ ಮಹತ್ವದ ತೀರ್ಮಾನದಿಂದ ಸಬ್ಸಿಡಿ ಹೊರತು ಪಡಿಸಿ ಸಾಮಾನ್ಯ ವರ್ಗಕ್ಕೆ 7.50 ಲಕ್ಷ, ಎಸ್ ಸಿ -ಎಸ್ ಟಿ ವರ್ಗಕ್ಕೆ 6.70 ಲಕ್ಷರೂ.ಕಟ್ಟಬೇಕಾಗುತ್ತದೆ. ಇದರಿಂದ 12,153 ಕುಟುಂಬ ಗಳು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಈ ಹಿಂದೆ 8.50 ಲಕ್ಷ ಹಾಗೂ 7.70 ಲಕ್ಷ ರೂ. ಕ್ರಮವಾಗಿ ಕಟ್ಟಬೇಕಿತ್ತು.
ಈ ತೀರ್ಮಾನವು 2020 ರಲ್ಲಿ ಘಟಕ ವೆಚ್ಚ ಹೆಚ್ಚಳ ತೀರ್ಮಾನದ ಅಧಿಸೂಚನೆ ಹೊರಡಿಸಿದ ನಂತರದ ಸಂದರ್ಭದಲ್ಲಿ ಪ್ರಾರಂಭಿಕ ಠೇವಣಿ ಮೊತ್ತ ಪಾವತಿ ಮಾಡಿರುವ ಫಲಾನುಭವಿಗಳಾದ 12,153 ಮಂದಿಗೆ ಮಾತ್ರ ಅನ್ವಯಿಸಲಿದೆ. ಪ್ರಾರಂಭಿಕ ಠೇವಣಿ ಮೊತ್ತ ಪಾವತಿ ಮಾಡದ ಆನ್ಲೈನ್ ಅರ್ಜಿಗಳಿಗೆ ಇದು ಅನ್ವಯವಾಗುವುದಿಲ್ಲ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ಸ್ಪಷ್ಟ ಪಡಿಸಿದ್ದಾರೆ.
ಇತರೆ ವಿಷಯಗಳು:
ಅನ್ನದಾತರಿಗೆ ಸಿಗಲಿದೆ ಬೆಳೆ ಹಾನಿ ಪರಿಹಾರ.!! 39 ಲಕ್ಷ ರೈತರ ಖಾತೆಗೆ ಬಂದೇ ಬಿಡ್ತು ಹಣ
ಮನೆ ಖರೀದಿದಾರರಿಗೆ ಬಜೆಟ್ ವರದಾನ.!!! ಬಡ ಮತ್ತು ಮಧ್ಯಮ ವರ್ಗದವರಿಗೆ ಮತ್ತೊಮ್ಮೆ ಬಂಪರ್ ಆಫರ್