ಹಲೋ ಸ್ನೇಹಿತರೇ, ಗ್ಯಾರಂಟಿ ಯೋಜನೆಗಳ ಹೊರತಾಗಿ ನೀರಾವರಿಗೆ 18,000 ಕೋಟಿ ವೆಚ್ಚ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇಂದು ಮೈಸೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆಗಳ ಹೊರತಾಗಿ ನೀರಾವರಿಗೆ 18,000 ಕೋಟಿ ವೆಚ್ಚ ಮಾಡಲಾಗಿದೆ. ಇದು ಕಡಿಮೆಯೇ? ಗ್ಯಾರಂಟಿಗಳನ್ನು ಒಳಗೊಂಡಂತೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ 1 ಲಕ್ಷದ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿರಿಸಿದ್ದೇವೆ.
ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆಯ ಗಂಧಗಾಳಿಯೂ ಅವರಿಗೆ ಗೊತ್ತಿಲ್ಲ. ಅಭಿವೃದ್ಧಿ ಶೂನ್ಯ ಎನ್ನುತ್ತಾರೆ. ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು, ಆರ್ಥಿಕ, ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದು ಅಂಬೇಡ್ಕರ್ ಹೇಳಿದ್ದರು. ಈ ಬಗ್ಗೆ ಬಿಜೆಪಿಗೆ ತಿಳಿದಿದೆಯೇ? ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
5,8 ಮತ್ತು 9 ನೇ ತರಗತಿ ವಿದ್ಯಾರ್ಥಿಗಳಿಗೆ ಸಂತಸದ ಸುದ್ದಿ.!! ಸರ್ಕಾರದ ಮಹತ್ವದ ನಿರ್ಧಾರ
ನಾವು ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿಟ್ಟವರು. ಬಿಜೆಪಿ ಸಾಮಾಜಿಕ ನ್ಯಾಯದ ವಿರೋಧಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಹೊರಗುತ್ತಿಗೆಯ ನೇಮಕಾತಿಯಲ್ಲಿ ಸಾಮಾಜಿಕ ನ್ಯಾಯದ ಪಾಲನೆಗೆ ಅವಕಾಶವನ್ನು ಕಲ್ಪಿಸುವ ಐತಿಹಾಸಿಕ ಹೆಜ್ಜೆಯಿರಿಸಿದ್ದೇವೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಸುವ ಹೊರಗುತ್ತಿಗೆಯ ನೌಕರರ ನೇಮಕಾತಿಯಲ್ಲಿ ಮೀಸಲಾತಿ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ. ಸಂಪತ್ತು, ಅಧಿಕಾರ, ಅವಕಾಶಗಳು ಸಮಾನವಾಗಿ ಹಂಚಿಕೆಯಾಗಬೇಕೆಂಬ ಸಮಸಮಾಜದ ಆಶಯವೇ ನಮ್ಮ ಸರ್ಕಾರದ ಆಶಯವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.
ಇತರೆ ವಿಷಯಗಳು:
ರಾಜ್ಯದಲ್ಲಿ ಮತ್ತೆ 1 ವಾರಗಳ ಕಾಲ ಭಾರಿ ಮಳೆ, ಕರ್ನಾಟಕದ ಈ 5 ಜಿಲ್ಲೆಗಳಿಗೆ ಬಾರಿ ಮಳೆಯಾಗಲಿದೆ.