ಈ ಸಮುದಾಯಕ್ಕೆ ಗುಡ್ ನ್ಯೂಸ್.!! ಶೈಕ್ಷಣಿಕ ಸಾಲ ಸೇರಿ ವಿವಿಧ ಸೌಲಭ್ಯಕ್ಕಾಗಿ ಇಂದೇ ಅಪ್ಲೇ ಮಾಡಿ

ಹಲೋ ಸ್ನೇಹಿತರೇ, ಕರ್ನಾಟಕ ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಸ್ವಯಂ ಉದ್ಯೋಗವನ್ನು ನೇರ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ ಮತ್ತು ಶೈಕ್ಷಣಿಕ ಸಾಲ ಯೋಜನೆ (ಹೊಸಬರು ಮತ್ತು ನವೀಕರಣ) ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಸಾಲ ಯೋಜನೆ (ಹೊಸಬರು ಮತ್ತು ನವೀಕರಣ), ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ (ವಾಣಿಜ್ಯ ಬ್ಯಾಂಕ್ಗಳ ಸಹಯೋಗದೊಂದಿಗೆ), ಸ್ವಾತಂತ್ರ್ಯ ಮಹೋತ್ಸವದ ಅಮೃತ ಮುನ್ನಡೆ ಯೋಜನೆಯ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮಗಳಡಿಯಲ್ಲಿ ಸೌಲಭ್ಯ ಪಡೆಯಲು ಅರ್ಜಿಯನ್ನು ಅಹ್ವಾನಿಸಲಾಗಿದೆ. ನೀವು ಕೂಡ ಈ ಯೋಜನೆಯ ಬಗ್ಗೆ ತಿಳಿದುಕೊಳ್ಳಲು ಈ ಲೇಖನವನ್ನು ತಪ್ಪದೇ ಕೊನೆಯವರೆಗೂ ಓದಿ. ಮತ್ತು ನಿಮ್ಮ ಸ್ನೇಹಿರಿಗೂ ಮಿಸ್‌ ಮಾಡದೇ ಶೇರ್‌ ಮಾಡಿ.

Karnataka Okkaliga Community Development Corporation

(ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ ಮತ್ತು ಅಲೆಮಾರಿ, ಅರೆ ಅಲೆಮಾರಿ ಸಮುದಾಯ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಉಳಿದ ಹಿಂದುಳಿದ ವರ್ಗಗಳ ಪ್ರವರ್ಗ-3ಎ ರಲ್ಲಿ ಬರುವ ಒಕ್ಕಲಿಗ, ವಕ್ಕಲಿಗ, ಸರ್ಪ ಒಕ್ಕಲಿಗ, ಹಳ್ಳಿಕಾರ್ ಒಕ್ಕಲಿಗ, ನಾಮಧಾರಿ ಒಕ್ಕಲಿಗ, ಗಂಗಡ್ಕಾರ್ ಒಕ್ಕಲಿಗ, ದಾಸ್ ಒಕ್ಕಲಿಗ, ರೆಡ್ಡಿ ಒಕ್ಕಲಿಗ ಮತ್ತು ಮರಸು ಒಕ್ಕಲಿಗ, ಗೌಡ, ಹಳ್ಳಿಕಾರ್, ಕುಂಚಿಟಿಗ, ಗೌಡ, ಕಾಪು, ಹೆಗ್ಗಡೆ ಹಾಗೂ ಕಮ್ಮ ರೆಡ್ಡಿ, ಗೌಂಡರ್, ನಾಮಧಾರಿಗೌಡ, ಉಪ್ಪಿನಕೊಳಗ/ಉತ್ತಮಕೊಳಗ ಸಮುದಾಯಕ್ಕೆ ಸೇರಿದ ಆಸಕ್ತರಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.

ಅರ್ಜಿದಾರರು ತಮ್ಮದೇ ಆದ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು ಮತ್ತು ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆನ್ನು ಸೀಡ್ ಅನ್ನು ಮಾಡಿರಲೇಬೇಕು. ಇದರಿಂದ ಶೈಕ್ಷಣಿಕ ಸಾಲವನ್ನು ನೀಡಲಾಗುತ್ತದೆ.

ಸಾರ್ವಜನಿಕರೇ ಹುಷಾರ್.!! ಆನ್ಲೈನ್ ಮೂಲಕ ಹಣ ದೋಚಲು ಹೊಸ ದಾರಿ ಹಿಡಿದಿದ ‘ವಂಚಕರು’

ಒಂದು ಕುಟುಂಬದ ಒಬ್ಬರಿಗೆ ಮಾತ್ರ ಈ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹರಿರುತ್ತಾರೆ. ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ/ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿರಬಾರದು. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿಯನ್ನು ಸೌಲಭ್ಯ ಪಡೆಯದೇ ಇರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆಯೇ ಇರುವುದಿಲ್ಲ.

ಆಸಕ್ತರು ಸೇವಾಸಿಂಧು ಪೋರ್ಟಲ್ನ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ಮತ್ತು ಸ್ವಾತಂತ್ರ್ಯ ಅಮೃತ ಮುನ್ನಡೆ ಯೋಜನೆಗೆ ಅರ್ಜಿಯನ್ನು ಕೌಶಲ್ಯ ಕರ್ನಾಟಕ ತಂತ್ರಾಂಶದ https://www.kaushalkar.com ರಲ್ಲಿ ದಾಖಲೆಗಳ ಸಹಿತ ಆಗಸ್ಟ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ಈಗಾಗಲೇ ತಿಳಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ನಿಗಮ ತಿಳಿಸಿರುವ ವೆಬ್ಸೈಟ್ www.kvcdc.karnataka.gov.in ರಲ್ಲಿ ಅಥವಾ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಇಲ್ಲವೇ ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ, ಭಾಗ್ಯನಿಲಯ, 1ನೇ ತಿರುವು, ಗಾಂಧಿನಗರ, ಶಿವಮೊಗ್ಗ, ದೂ.ಸಂ.: 08182-229634 ಅನ್ನು ಸಂಪರ್ಕಿಸುವುದು.

ಇತರೆ ವಿಷಯಗಳು

ಗೃಹಿಣಿಯರಿಗೆ ಸಂತಸದ ಸುದ್ದಿ.!! ಒಂದೇ ದಿನ ಏರಡು ತಿಂಗಳ ಹಣ ಖಾತೆಗೆ ಜಮಾ

ವಯನಾಡು ಭೂಕುಸಿತ ಸಂತ್ರಸ್ತರಿಗೆ ಕರ್ನಾಟಕದಿಂದ 100 ಮನೆ!

Leave a Reply

Your email address will not be published. Required fields are marked *