ಕರ್ನಾಟಕ ಆಯುಷ್ ಇಲಾಖೆಯಲ್ಲಿನ ಹುದ್ದೆಯ ನೇಮಕಾತಿ 2024, ವೇತನ : ರೂ. 1,31,400 ರಿಂದ ರೂ. 2,17,100.

ಆಯುಷ್ ಇಲಾಖೆಯಲ್ಲಿ ಒಟ್ಟು 01 (ಬ್ಯಾ.ಲಾ) ಹುದ್ದೆ ಖಾಲಿ ಇರುವ ಹೊಮಿಯೋಪತಿ – ಸಹ ಪ್ರಾಧ್ಯಾಪಕರು (ಅನಾಟಮಿ) ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಹುದ್ದೆ :

ಹೊಮಿಯೋಪತಿ – ಸಹ ಪ್ರಾಧ್ಯಾಪಕರು (ಅನಾಟಮಿ)

ಉದ್ಯೋಗದ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 01 (ಬ್ಯಾ.ಲಾ) ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :

ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ ಅನಾಟಮಿ ವಿಷಯದಲ್ಲಿ 5 ವರ್ಷಗಳಿಗಿಂತ ಕಡಿಮೆಯಿಲ್ಲದ ಬೋಧನಾ ಅನುಭವವನ್ನು ಹೊಂದಿರಬೇಕು.

ವೇತನ :

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 1,31,400 ರಿಂದ ರೂ. 2,17,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ವಯೋಮಾನ :

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ಆಯ್ಕೆ ವಿಧಾನ :

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ನಿಗದಿತ ಅರ್ಜಿ ಶುಲ್ಕದ ವಿವರ :

ಪ.ಜಾತಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 22, 2024
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 21, 2024
NOTIFICATIONCLICK HERE
APPLY ONLINECLICK HERE ಏಪ್ರಿಲ್ 22 ರಿಂದ ಪ್ರಾರಂಭ

Leave a Comment