ರಾಜ್ಯದ ಅನ್ನದಾತರಿಗೆ ಗುಡ್ ನ್ಯೂಸ್.!! `ಕೃಷಿ ಭಾಗ್ಯ ಯೋಜನೆ’ ಗೆ ಇಂದೇ ಅರ್ಜಿ ಸಲ್ಲಿಸಿ

ಹಲೋ ಸ್ನೇಹಿತರೇ, ಕೃಷಿ ಇಲಾಖೆಯು ಮಳೆ ನೀರನ್ನು ಸಂಗ್ರಹಿಸಿ ಕೃಷಿಯಲ್ಲಿ ಸದ್ಬಳಕೆ ಮಾಡಲು ರೈತರನ್ನು ಉತ್ತೇಜಿಸುವ ಸಲುವಾಗಿ ಕರ್ನಾಟಕ ಸರ್ಕಾರವು ಕೃಷಿ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ವಿವಿದ ಸೌಲಭ್ಯಗಳನ್ನು ಪಡೆದುಕೊಳ್ಳಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

krishi bhagya scheme apply online

ಕೃಷಿ ಭಾಗ್ಯ ಯೋಜನೆಯ ಪ್ಯಾಕೇಜ್ ಮಾದರಿಯಲ್ಲಿ ಅನುಷ್ಟಾನಗೊಳ್ಳುತ್ತಿದ್ದು, ಬದು, ಕೃಷಿ ಹೊಂಡ ಮತ್ತು ಕೃಷಿಹೊಂಡದ ಸುತ್ತ ತಂತಿ ಬೇಲಿ, ಕೃಷಿಹೊಂಡಕ್ಕೆ ಪಾಲೀಥಿನ್ ಹೊದಿಕೆ ಹಾಗೂ ಪಂಪ್ ಸೆಟ್, ಲಘು ನೀರಾವರಿ ಘಟಕಗಳನ್ನು ಅನುಷ್ಠಾನ ಮಾಡಲು ಸಹಾಯಧನ ನೀಡಲಾಗುತ್ತಿದೆ.

ರೈತರು ಈ ಎಲ್ಲಾ ಘಟಕಗಳನ್ನು ಕಡ್ಡಾಯವಾಗಿ ಅನುಷ್ಠಾನ ಮಾಡಬೇಕಾಗಿರುತ್ತದೆ. ಸಾಮಾನ್ಯ ವರ್ಗದ ರೈತರಿಗೆ ಶೇ. 80 % ಹಾಗೂ ಪರಿಶಿಷ್ಟ ಜಾತಿ ಹಾಗೂ ಪಂಗಡದ ರೈತರಿಗೆ ಶೇ. 90% ಸಹಾಯಧನ ನೀಡಲು ಅವಕಾಶವಿರುತ್ತದೆ.

ಆಸಕ್ತ ರೈತರು ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಪಾಸ್ ಪೋರ್ಟ್ ಸೈಜ್ ಪೋಟೊ, ಪಹಣಿ, ಜಾತಿ ಪ್ರಮಾಣ ಪತ್ರ ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ ಸೇರಿದಂತೆ ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ರೈತ ಸಂಪರ್ಕ ಕೇಂದ್ರಗಳಲ್ಲಿ ಅರ್ಜಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.

ಇತರೆ ವಿಷಯಗಳು:

ವಿದ್ಯಾರ್ಥಿಗಳಿಗೆ ಬಂಪರ್‌ ಸುದ್ದಿ.!! ಈ ವರ್ಷದಿಂದ 50 ಸಾವಿರ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ

ಈ ಕೆಲಸ ಮಾಡದಿದ್ರೆ ನಿಮ್ಮ ಖಾತೆಗೆ ಬರಲ್ಲ ಪಿಎಂ ಕಿಸಾನ್ 18 ನೇ ಕಂತಿನ ಹಣ.!

Leave a Reply

Your email address will not be published. Required fields are marked *