ಹಲೋ ಸ್ನೇಹಿತರೇ, ಈಗಾಗಲೇ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದು, ಇದರ ನಡುವೆಯೇ ಇತ್ತೀಚೆಗಷ್ಟೇ ಹಾಲು, ಪೆಟ್ರೋಲ್, ಡೀಸೆಲ್ ದರವನ್ನು ಏರಿಕೆ ಮಾಡಿದ್ದರು. ಇದಕ್ಕೆ ವ್ಯಾಪಕ ಆಕ್ರೋಶಗಳು ಕೂಡ ವ್ಯಕ್ತವಾಗಿದ್ದವು. ಇದೀಗ ಕೆಎಸ್‌ಆರ್‌ಟಿಸಿ ಬಸ್ ಟಿಕೆಟ್ ದರ ಹೆಚ್ಚಳ ಮಾಡಲು ನಿಗಮ ಮುಂದಾಗಿದೆ.
ರಾಜ್ಯದಲ್ಲಿ ಕಳೆದ ಐದು ವರ್ಷಗಳಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್‌ಆರ್‌ಟಿಸಿ) ಬಸ್ ಟಿಕೆಟ್ ದರವನ್ನು ಪರಿಷ್ಕರಣೆ ಮಾಡಿಲ್ಲ. ಆದ್ರೆ ಈಗ ಟಿಕೆಟ್ ದರವನ್ನು ಹೆಚ್ಚಳ ಮಾಡದಿದ್ದರೆ ನಿಗಮಕ್ಕೆ ಉಳಿಗಾಲವಿಲ್ಲ. ಹೀಗಾಗಿಯೇ ಟಿಕೆಟ್ ದರದ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಕೆಯನ್ನು ಮಾಡಲಾಗಿದೆ.
ಇನ್ನು KSRTC ನೌಕರರಿಗೆ ಸಂಬಳವನ್ನು ಹೆಚ್ಚಳ ಹಾಗೂ ಇತರೆ ಸವಲತ್ತುಗಳನ್ನು ಕೊಡಬೇಕಾದ್ರೆ ಬಸ್ ಟಿಕೆಟ್ ದರವನ್ನು ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ. 2020ರಲ್ಲಿಯೇ KSRTC ನೌಕರರ ವೇತನವನ್ನು ಪರಿಷ್ಕರಣೆ ಮಾಡಬೇಕಿತ್ತು.
1 ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಇನ್ಮುಂದೆ ಹೊಸ ಕಾರ್ಯಕ್ರಮ ಜಾರಿ.!
ಆದ್ರೆ ಬಸ್ ಟಿಕೆಟ್ ದರವನ್ನು ಹೆಚ್ಚಳ ಮಾಡದ ಹಿನ್ನೆಲೆಯಲ್ಲಿ ಆರ್ಥಿಕವಾದ ಸಮಸ್ಯೆ ಉಂಟಾಗಬಾರದೆಂಬ ದೃಷ್ಟಿಯಿಂದಲೇ ಇಲ್ಲಿಯವರೆಗೂ ನೌಕರರ ವೇತನವನ್ನು ಪರಿಷ್ಕರಣೆ ಮಾಡಿಲ್ಲ. ಈ ಬಾರಿ 2024ರಲ್ಲಿ ವೇತನ ಪರಿಷ್ಕರಣೆ ಮಾಡಬೇಕಿದೆ. ಹಾಗಾಗಿಯೇ ಬೆಲೆ ಏರಿಕೆಯನ್ನು ಮಾಡುವುದು ಅನಿವಾರ್ಯ ಎಂಬಂತಿದೆ ಸಚಿವರ ನಡೆ..
ಇನ್ನು ಯೋಜನಡಯಡಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಟ್ಟಿತ್ತು. ಈ ಹಣವನ್ನು ಬರಿಸಲು ಇದೀಗ ಸರ್ಕಾರವು KSRTC ಟಿಕೆಟ್ ದರವನ್ನು ಏರಿಕೆ ಮಾಡುತ್ತಿದೆ ಎನ್ನುವ ಆಕ್ರೋಶಗಳು ಭಗಿಲೆದ್ದಿವೆ. ಒಟ್ಟಾರೆಯಾಗಿದೆ .ಬಸ್ ಟಿಕೆಟ್ ದರವನ್ನು ಜಾಸ್ತಿ ಮಾಡಿರುವುದರಿಂದ ಪುರುಷ ಪ್ರಯಾಣಿಕರಿಗೆ ಹೊರೆಯಾಗು ಅಂತೂ ನಿಜವಾಗಿದೆ. ಕೆಎಸ್‌ಆರ್‌ಟಿಸಿ ಸಂಸ್ಥೆ ಉಳಿಯ ಬೇಕಾದರೆ ದರದ ಹೆಚ್ಚಳ ಇದೀಗ ಅನಿವಾರ್ಯವಾಗಿದೆ.
ಇತರೆ ವಿಷಯಗಳು:
ಎಲ್ಲಾ ಮಾಲ್‌ಗಳಿಗೆ ಡ್ರೆಸ್ ಮಾರ್ಗಸೂಚಿ ಹೊರಡಿಸಿದ ಸರ್ಕಾರ!
ಪಿಂಚಣಿ ಯೋಜನೆಯಲ್ಲಿ ಬದಲಾವಣೆ..! ಮಾಸಿಕ ಹಣ ಪಡೆಯಲು ಈ ಕೆಲಸ ಕಡ್ಡಾಯ