ವಿದ್ಯಾರ್ಥಿಗಳಿಗೆ ಬಸ್​ ಪಾಸ್​ ವಿತರಣೆ ಆರಂಭ.!! ಅರ್ಜಿ ಸಲ್ಲಿಕೆ ವಿಧಾನ

ಹಲೋ ಸ್ನೇಹಿತರೇ, 2024-25ನೇ ಸಾಲಿನಲ್ಲಿನ ಶೈಕ್ಷಣಿಕ ವರ್ಷದ ಶಾಲಾ ಹಾಗೂ ಪದವಿ ಪೂರ್ವ ಕಾಲೇಜುಗಳು ಪ್ರಾರಂಭವಾಗಿವೆ. ವಿದ್ಯಾರ್ಥಿಗಳು ನಲಿಯುತ್ತಲೇ ಶಾಲೆ-ಕಾಲೇಜುಗಳತ್ತ ಹೆಜ್ಜೆಯನ್ನು ಇಡುತ್ತಿದ್ದಾರೆ. ಈಗಾಗಲೆ ತರಗತಿಗಳು ಆರಂಭವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಬಸ್ ಪಾಸ್ ನೀಡುವುದಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಕರಟಣೆ ಹೊರಡಿಸಿದೆ. ನಿಗಮ 10 ತಿಂಗಳ ಪಾಸ್ ದರ ನಿಗದಿ ಮಾಡಿದೆ. ಹಾಗಿದ್ದರೆ ಈ ಬಾರಿಯ ಬಸ್​ ಪಾಸ್​ ದರ ಎಷ್ಟು? ಅರ್ಜಿ ಸಲ್ಲಿಸುವುದು ಹೇಗೆ ಇಲ್ಲಿದೆ ಓದಿ..

KSRTC Sudent Bus Pass

ಪಾಸ್ ದರ ಪಟ್ಟಿ

  1. ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಬಸ್ ಪಾಸ್ ದರ – 150 ರೂ.
  2. ಪ್ರೌಢ ಶಾಲಾ ವಿದ್ಯಾರ್ಥಿಗಳ ಪಾಸ್ ದರ- 750 ರೂ.
  3. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಪಾಸ್​ ದರ – 150 ರೂ.
  4. ಪ್ರೌಢ ಶಾಲೆಯ ವಿದ್ಯಾರ್ಥಿನಿಯರ ಬಸ್‌ ಪಾಸ್‌ ದರ (ಗಡಿ ಭಾಗದ ಆಚೆಗೆ) – 150 ರೂ.
  5. ಕಾಲೇಜು- ಡಿಪ್ಲೊಮಾ ವಿದ್ಯಾರ್ಥಿಗಳ ಪಾಸ್ ದರ- 1050 ರೂ.
  6. ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 150 ರೂ.
  7. ಐಟಿಐ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳ ಬಸ್ ಪಾಸ್ ದರ (12 ತಿಂಗಳ ಅವದಿ) 1310 ರೂ.
  8. ಐಟಿಐ, ಡಿಪ್ಲೊಮಾ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 160 ರೂ.
  9. ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳ ಪಾಸ್ ದರ- 1550 ರೂ.
  10. ವೃತ್ತಿಪರ ಕೋರ್ಸ್ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪಾಸ್ ದರ- 150 ರೂ.
  11. ಸಂಜೆ ಕಾಲೇಜು ವಿದ್ಯಾರ್ಥಿಗಳ ಪಾಸ್ ದರ- 1350 ರೂ.
  12. ಸಂಜೆ ಕಾಲೇಜು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪಾಸ್ ದರ – 150 ರೂ. ಈ ಪಾಸ್​ಗಳನ್ನು ಪಡೆಯಲು ಆನ್​ ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಮದ್ಯ ಪ್ರಿಯರಿಗೆ ಶಾಕ್.!!‌ ಇನ್ನು 5 ದಿನ ಇಲ್ಲ ಎಣ್ಣೆ ಅಂಗಡಿ ಬಂದ್

ಅರ್ಜಿ ಸಲ್ಲಿಸುವ ವಿಧಾನ

  • ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್ ಮುಖೇನ ಅರ್ಜಿಯನ್ನು ಸಲ್ಲಿಸಬೇಕು. ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/buspassservices
  • ವಿದ್ಯಾರ್ಥಿಗಳು ಮೇ 31 ಾನಂತರ ಸೇವಾಸಿಂಧು ಪೋರ್ಟಲ್‌ ಸಹಾಯದಿಂದ ಬಸ್ ಪಾಸ್‌ಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್​ ಲೈನ್ ಪೋರ್ಟಲ್​ನಲ್ಲಿ ಅರ್ಜಿ ಸಲ್ಲಿಸಲು ಯಾವುದೇ ಶುಲ್ಕವು ಇರುವುದಿಲ್ಲ.
  • ಇದಲ್ಲದೆ, ವಿದ್ಯಾರ್ಥಿಗಳು, ಕರ್ನಾಟಕ-ಒನ್, ಗ್ರಾಮ-ಒನ್ ಮತ್ತು ಬೆಂಗಳೂರು-ಒನ್ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸಿಬ್ಬಂದಿಗಳ ಮೂಲಕವು ಅರ್ಜಿ ಸಲ್ಲಿಸಬಹುದು. ಈ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಸರ್ಕಾರದ ಆದೇಶದಂತೆ 30 ರೂಪಾಯಿ ಸೇವಾ ಶುಲ್ಕವನ್ನು ಕೇಂದ್ರಗಳ ಸಿಬ್ಬಂದಿಗಳು ಪಡೆಯಲು ಪಡೆಯುತ್ತಾರೆ.
  • ವಿದ್ಯಾರ್ಥಿಗಳು ವಿದ್ಯಾರ್ಥಿಗಳು ಬಸ್ ಪಾಸ್‌ಗಾಗಿ ಅರ್ಜಿ ಸಲ್ಲಿಸಲು Declaration Formeನ್ನು ಸೇವಾಸಿಂಧು ತಂತ್ರಾಂಶದಲ್ಲಿ ಹಾಗೂ ಕರಾರಸಾ ನಿಗಮದ ವೆಬ್​​ಸೈಟ್​ನಲ್ಲಿ (https://ksrtc.karnataka.gov.in/studentpass) ಡೌನ್​ಲೋಡ್ ಅನ್ನು​​ ಮಾಡಿಕೊಳ್ಳಬೇಕು ಹಾಗೂ ಅದನ್ನು ಅರ್ಜಿ ಸಲ್ಲಿಸುವಾಗ Submitಮಾಡಬೇಕು.
  • ಅರ್ಜಿ ಅನುಮೋದನೆಯಾದ ವಿದ್ಯಾರ್ಥಿಗಳಿಗೆ ಪಾಸ್‌ ಅನ್ನು ಪಡೆಯಲು ಭೇಟಿಯಾದ ನೀಡಬೇಕಿರುವ ಕೌಂಟರ್‌ನ ಹೆಸರು ಹಾಗೂ ವಿಳಾಸ ಮಾಹಿತಿಯನ್ನು ಅರ್ಜಿಯಲ್ಲಿ ನೀಡಲಾದ ಮೊಬೈಲ್ ಸಂಖ್ಯೆಗೆ SMS ಮುಖೇನ ಕಳುಹಿಸಲಾಗುತ್ತದೆ. ವಿದ್ಯಾರ್ಥಿ ಪಾಸುಗಳನ್ನು ಜೂ. 01 ರಿಂದ ನಿಗದಿತ ಪಾಸ್ ಕೌಂಟರ್​ಗಳಲ್ಲಿ ವಿತರಿಸಲಾಗುತ್ತದೆ.
  • ತದನಂತರ ವಿದ್ಯಾರ್ಥಿಗಳು ಆಯ್ಕೆ ಮಾಡಿದ ಕೌಂಟರ್ಗೆಗೆ ತೆರಳಿ, ನಿಗದಿತ ಪಾಸಿನ ಶುಲ್ಕವನ್ನು ನಗದು, ಕ್ರೆಡಿಟ್ ಕಾರ್ಡ್ ಅಥವಾ ಡೆಬಿಟ್ ಕಾರ್ಡ್ / UPI ಮುಖೇನ ಪಾವತಿಸಿ ಪಾಸನ್ನು ಪಡೆಯಬಹುದು.
  • ಸರ್ಕಾರವು ಕರ್ನಾಟಕ ರಾಜ್ಯದ ಮಹಿಳೆಯರಿಗೆ (ವಿದ್ಯಾರ್ಥಿನಿಯರು ಮತ್ತು ಅಂಗತ್ವ ಅಲ್ಪ ಸಂಖ್ಯಾತರು ಸೇರಿದಂತೆ) ಶಕ್ತಿ ಯೋಜನೆಯಡಿ ಕರ್ನಾಟಕ ರಾಜ್ಯದೊಳಗೆ ಉಚಿತವಾದ ಪ್ರಯಾಣ ಸೌಲಭ್ಯವನ್ನು ಒದಗಿಸಿದೆ. ನೆರೆರಾಜ್ಯದಲ್ಲಿ ವಾಸವಿದ್ದು ಕರ್ನಾಟಕ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ನೆರೆ ರಾಜ್ಯದ ಶಾಲೆ / ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ, ಗಡಿಭಾಗದ ಮಾರ್ಗಗಳಲ್ಲಿನ ವಿದ್ಯಾರ್ಥಿನಿಯರು, ವಿದ್ಯಾರ್ಥಿ ರಿಯಾಯಿತಿ ಬಸ್ ಪಾಸ್ ಪಡೆಯಬಹದು. ಮೇಲ್ಕಂಡ ಕ್ರಮಗಳನ್ನು ಅನುಸರಿಸಿ ಗಡಿಭಾಗದ ವಿದ್ಯಾರ್ಥಿಗಳು ಪಾಸುಗಳನ್ನು ಪಡೆಯಬಹು.
  • ಕರಾರಸಾನಿಗಮ ವ್ಯಾಪ್ತಿಯ 129 ಪಾಸ್ ವಿತರಣಾ ಕೌಂಟರ್ಗಗಳ ವಿವರಗಳನ್ನು ವಿದ್ಯಾರ್ಥಿಗಳ ಮಾಹಿತಿಗಾಗಿ ನಿಗಮದ ವೆಬ್‌ ಸೈಟ್ ನಲ್ಲಿ ಒದಗಿಸಲಾಗಿದೆ. ನಿಗಮದ ವೆಬ್ ಸೈಟ್​ ವಿಳಾಸ: https://ksrtc.karnataka.gov.in

ಇತರೆ ವಿಷಯಗಳು:

‌ರಾಜ್ಯ ಸರ್ಕಾರದಿಂದ ಬಿಗ್‌ ಅಪ್ಡೇಟ್! ಗೃಹಲಕ್ಷ್ಮೀ ಹಣ ಬಾರದಿದ್ರೇ ಹೀಗೆ ಮಾಡಲು ಸೂಚನೆ

ಲಕ್ಷಾಂತರ ಜನರ ಭವಿಷ್ಯ ಬದಲಾಯಿಸಿದ ಯೋಜನೆ! ಆಧಾರ್‌ ಕಾರ್ಡ್‌ ಮೂಲಕ 5 ನಿಮಿಷಗಳಲ್ಲಿ ಸಿಗತ್ತೆ 10 ಲಕ್ಷ

Leave a Reply

Your email address will not be published. Required fields are marked *