ಹಲೋ ಸ್ನೇಹಿತರೇ, ರೈತರಿಗೆ ತೋಟಗಾರಿಕೆ ಇಲಾಖೆಯು 2024-25 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ವರ್ಗದ ರೈತರಿಂದ ಅರ್ಜಿ ಆಹ್ವಾನಿಸಿದೆ. ಇದರ ಕುರಿತಾದ ಸಂಪೂರ್ಣ ಮಾಹಿತಿಗಾಗಿ ಈ ಲೇಖನವನ್ನು ಕೊನೆವರೆಗೂ ಓದಿ..
ತೋಟಗಾರಿಕೆ ಬೆಳೆಯನ್ನು ಬೆಳೆಯುತ್ತಿರುವ ಎಲ್ಲಾ ವರ್ಗದ ರೈತರಿಗೆ (ಕಾಫಿ.ಟೀ ಹಾಗೂ ರಬ್ಬರ್ ಬೆಳೆಗಳನ್ನು ಹೊರತುಪಡಿಸಿ) ಹನಿ ನೀರಾವರಿ ಅಳವಡಿಸಿದ ಪ್ರತಿ ಫಲಾನುಭವಿಗೆ ಗರಿಷ್ಟ 5 ಹೆಕ್ಟೇರ್ ಪ್ರದೇಶದವರೆಗೆ ಹಾಗೂ ತರಕಾರಿ ಮತ್ತು ಹೂ ಬೆಳೆಗಳಿಗೆ ಗರಿಷ್ಟ 2 ಹೆಕ್ಟೇರ್ ಪ್ರದೇಶಕ್ಕೆ ಸಹಾಯಧನವನ್ನು ನೀಡಲಾಗುವುದು.
ಸೂಕ್ಷ್ಮ ನೀರಾವರಿ ಘಟಕ ಅಳವಡಿಸಿದ ಅರ್ಹ ಪ.ಜಾ./ಪ.ಪಂ.ದ ರೈತ ಫಲಾನುಭವಿಗಳಿಗೆ ಮೊದಲ 2 ಹೆ. ಪ್ರದೇಶದವರೆಗೆ ಶೇ. 90% ಮತ್ತು ಇತರೇ ವರ್ಗದ ರೈತ ಫಲಾನುಭವಿಗೆ ಶೇ.55 ರಷ್ಟು ಹಾಗೂ ಎಲ್ಲಾ ವರ್ಗದ ರೈತರಿಗೆ 3 ಹೆ. ಪ್ರದೇಶಕ್ಕೆ ಶೇ. 45% ರಷ್ಟು ಸಹಾಯಧನ ಸೌಲಭ್ಯ ಲಭ್ಯವಿರುತ್ತದೆ.
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್! ಪ್ರತಿ ತಿಂಗಳು ಪಡೆಯಬಹುದು ₹39,000
ಇಲಾಖೆಯಿಂದ ಅನುಮೋದಿತ ಕಂಪನಿಗಳ ಮಾಹಿತಿಯನ್ನು ಹಾಗೂ ಹೆಚ್ಚಿನ ವಿವರಗಳನ್ನು ಆಯಾ ಹೋಬಳಿ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಶಿವಮೊಗ್ಗ ಇವರಿಗೆ ಪಡೆಯಬಹುದಾಗಿದೆ. 2024-25 ನೇ ಸಾಲಿನಲ್ಲಿ ಈ ಕಚೇರಿಗೆ ನಿಗದಿಪಡಿಸಿರುವ ಆರ್ಥಿಕ ಗುರಿಯ ಅನುಸಾರ ಆಯಾ ವರ್ಗದ ರೈತರ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಈ ಹಿಂದೆ ಅರ್ಜಿ ಸಲ್ಲಿಸಿ ಸಹಾಯಧನ ಪಡೆಯದವರು ಈ ಸಾಲಿನಲ್ಲಿ ಪುನಃ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇತರೆ ವಿಷಯಗಳು:
IPPB ನಲ್ಲಿ ಮ್ಯಾನೇಜರ್ ಹುದ್ದೆಗಳ ನೇರ ನೇಮಕಾತಿ..!
ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್! ಸೆಪ್ಟೆಂಬರ್‌ನಲ್ಲಿ ‘DA’ ಹೆಚ್ಚಳ ಖಚಿತ