ರಾಜ್ಯದ ಅನ್ನದಾತರಿಗೆ ಸಂತಸದ ಸುದ್ದಿ.!! ಸೆಪ್ಟೆಂಬರ್ ನಿಂದ ‘ಪೋಡಿ’ ಅಭಿಯಾನ ಆರಂಭ

ಹಲೋ ಸ್ನೇಹಿತರೇ, ಸೆಪ್ಟೆಂಬರ್‌ ತಿಂಗಳಿನಿಂದ ‘ಪೋಡಿ’ ಅಭಿಯಾನಕ್ಕೆ ಚಾಲನೆ ನೀಡಲಾಗುವುದು, ಲಕ್ಷಾಂತರ ರೈತರಿಗೆ ಅವರ ಜಮೀನಿನ ಹಕ್ಕನ್ನು ಅವರಿಗೆ ನೀಡುವ ಮೂಲಕ ನೆಮ್ಮದಿಯ ಬದುಕು ಕಲ್ಪಿಸಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

Podi campaign started

ವಿಕಾಸಸೌಧದ ನಾಲ್ಕನೇ ಮಹಡಿಯಲ್ಲಿ ಇರುವ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿತ್ತು. ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಸಾಗುವಳಿ ಮಾಡುವ ರೈತರಿಗೆ ಮಂಜೂರು ಮಾಡಿದ ಲಕ್ಷಾಂತರ ಪ್ರಕರಣಗಳಲ್ಲಿ ಹಲವು ವರ್ಷಗಳಿಂದ ಪೋಡಿ ದುರಸ್ಥಿ ಇನ್ನೂ ಕೂಡ ಆಗಿಲ್ಲ.

ಈ ಹಿಂದಿನ ಸರ್ಕಾರದ ಅವಧಿಯಲ್ಲೂ ಹತ್ತಾರು ಚರ್ಚೆ, ನಾನಾ ಪ್ರಯತ್ನಗಳಾಗಿದ್ದರೂ ಈ ವಿಚಾರದಲ್ಲಿ ಸರಿಯಾದ ಪರಿಹಾರ ನೀಡಲು ಸಾಧ್ಯವಾಗಿಲ್ಲ. ಆದರೆ, ರೈತರಿಗೆ ಅವರ ಜಮೀನಿನ ಹಕ್ಕನ್ನು ಸಂಪೂರ್ಣವಾಗಿ ಅವರಿಗೇ ನೀಡಲು, ಈ ವಿಚಾರದಲ್ಲಿ ಶಾಶ್ವತ ಪರಿಹಾರ ನೀಡಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ” ಎಂದು ಭರವಸೆ ನೀಡಿದರು.

“ರೈತರಿಗೆ ಜಮೀನು ಮಂಜೂರಾಗಿದ್ರೂ ‘ಪೋಡಿ’ ಅಭಿಯಾನಯನ್ನು ದುರಸ್ಥಿಯಾಗದಿರಲು ಎರಡು ಪ್ರಮುಖ ಕಾರಣಗಳಿವೆ. ದಶಕಗಳ ಹಿಂದಿನಿಂದಲೂ ನಮ್ಮ ಅಧಿಕಾರಿಗಳು 100 ಎಕರೆ ಜಮೀನಿದ್ರೆ ಅದಕ್ಕಿಂತ ಹೆಚ್ಚಿನ ವಿಸ್ತೀಣ ಮಂಜೂರು ಮಾಡಿದ್ದಾರೆ. ಇದೊಂದು ಕಾರಣವಾದ್ರೆ, ಕೆಲವು ಸಂದರ್ಭದಲ್ಲಿ ಸಾಗುವಳಿಯನ್ನು ಮಾಡದಂತವರಿಗೂ ಮಂಜೂರು ಮಾಡಿದ್ದಾರೆ. ಇನ್ನೂ ಕೆಲವು ಪ್ರಕರಣಗಳಲ್ಲಿ ಆರ್‌ಟಿಸಿಯಲ್ಲಿ ಮಂಜೂರುದಾರರ ಹೆಸರಿದೆ. ಆದ್ರೆ, ಅವರಿಗೆ ಮಂಜೂರು ಆಗಿರುವ ಬಗ್ಗೆ ಯಾವುದೇ ನಿಖರವಾದ ದಾಖಲೆಗಳಿಲ್ಲ. ಮತ್ತಷ್ಟು ಪ್ರಕರಣಗಳಲ್ಲಿ ಮಂಜೂರಿಗೆ ಅರ್ಜಿ ಕೊಟ್ಟಿರುವ ದಾಖಲೆ ಇದೆ. ಆದರೆ, ಮಂಜೂರು ಆಗಿರುವ ದಾಖಲೆ ಇಲ್ಲ.

ಈ ಎರಡು ಪ್ರಮುಖ ಕಾರಣಗಳಿಂದ ಜಮೀನು ಮಂಜೂರಾಗಿದ್ರೂ ದುರಸ್ಥಿಯಾಗಿಲ್ಲ. ಹೀಗಾಗಿಯೇ ರೈತರು ಅಂತಹ ಜಮೀನಿನಲ್ಲಿ ಕೃಷಿಯನ್ನು ಮಾಡಬಹುದೇ ವಿನಃ ಅವರಿಗೆ ಆ ಭೂಮಿಯಿಂದ ಬೇರೆಯಾದ ಯಾವುದೇ ಪ್ರಯೋಜನ ಇಲ್ಲ. ಈ ಸಮಸ್ಯೆಗೆ ಶಾಶ್ವತವಾದ ಪರಿಹಾರವನ್ನು ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರೂ ಸೇರಿದಂತೆ ಎಲ್ಲಾ ಸಚಿವರು ಒತ್ತಡ ಇದೆ.

ಅಲ್ಲದೆ, ರೈತರಿಂದಲೂ ಸಾಕಷ್ಟು ಒತ್ತಡವಿದೆ. ಹೀಗಾಗಿಯೇ ಕಳೆದ ಆರೆಂಟು ತಿಂಗಳಿನಿಂದ ಅಧಿಕಾರಿಗಳ ಜೊತೆಯಲ್ಲಿ ನಿರಂತರವಾದ ಚರ್ಚೆಯನ್ನು ನಡೆಸಿ ಇದೀಗ ಈ ಸಮಸ್ಯೆಗಳಿಗೆ ಪರಿಹಾರವನ್ನು ನೀಡಲು ಮುಂದಾಗಿದ್ದೇವೆ. ಯಾರಿಗೆ ಪೋಡಿ ಮಾಡಿಕೊಡಲು ಸಾಧ್ಯವೋ ಅವರಿಗೆಲ್ಲಾ ಪೋಡಿ ಮಾಡಿಕೊಡಲೇಬೇಕು ಎಂದು ನಮ್ಮ ಸರ್ಕಾರದ ಸಂಕಲ್ಪ ಮಾಡಿದ್ದು, ಇದಕ್ಕೆಂದು ಪ್ರಾಯೋಗಿಕ ಆಯಪ್ ಸಿದ್ಧಪಡಿಸಲಾಗಿದೆ” ಎಂದರು

ಗರ್ಭಿಣಿ ಮಹಿಳೆಯರಿಗೆ ಸಿಗಲಿದೆ ಉಚಿತ 11,000 ರೂ.!! ಈ ದಾಖಲೆ ಇದ್ರೆ ಬೇಗ ಅಪ್ಲೇ ಮಾಡಿ

ದುರಸ್ಥಿ ಕೆಲಸವನ್ನು ಕಾಗದದಲ್ಲಿ ಕಾರ್ಯಗತಗೊಳಿಸಿದರೆ ನಮಗೂ ಯಾವುದೇ ಲೆಕ್ಕ ಸಿಗುವುದಿಲ್ಲ. ತಳಮಟ್ಟದ ಅಧಿಕಾರಿಗಳ ಇಚ್ಚೆಯಂತೆಯೇ ಕೆಲಸ ನಡೆಯುತ್ತೇ ವಿನಃ ಜನರಿಗೆ ನ್ಯಾಯ ಸಿಗಲ್ಲ. ಇದೇ ಕಾರಣಕ್ಕಾಗಿಯೇ ಡಿಜಿಟಲ್‌ ಆ್ಯಪ್ ನ ಮೂಲಕ ದುರಸ್ಥಿ ಕೆಲಸಕ್ಕೆ ಚಾಲನೆ ನೀಡಲು ಉದ್ದೇಶಿಸಲಾಗಿದೆ. 1 to 5 ಹಾಗೂ 6 to 10 ಪೋಡಿ ದುರಸ್ಥಿ ಪ್ರಕರಣ ಬಾಕಿ ಇರುವ ಎಲ್ಲಾ ತಾಲೂಕುಗಲ್ಲೂ ನಾವೇ ಹುಡುಕಿ ದಾಖಲೆ ಕಡತ ಸಿದ್ದಪಡಿಸಬೇಕು ಎಂದು ತೀರ್ಮಾನಿಸಿದ್ದೇವೆ.

ಹಾಸನದಲ್ಲಿ ಈಗಾಗಲೇ ಪ್ರಾಯೋಗಿಕ ಯೋಜನೆ ನಡೆಯುತ್ತಿದೆ. ಇದ್ರ ಆಧಾರದ ಮೇಲೆಯೇ ಸೆಪ್ಟೆಂಬರ್‌ ತಿಂಗಳಿನಿಂದ ಜನರ ಅರ್ಜಿಗೆ ಕಾಯದೆ ನಾವೇ ಸ್ವಯಂ ಪ್ರೇರಣೆಯಿಂದ ಅಭಿಯಾನದ ಮಾದರಿಯಲ್ಲಿ 1 to 5 ಮತ್ತು 6 to 10 ಪೋಡಿ ದುರಸ್ಥಿ ಮಾಡಲಿದ್ದೇವೆ ಎಲ್ಲಾ ಮಂಜೂರಿದಾರರ ಪರವಾಗಿ ನಾವೇ ಪ್ರಕ್ರಿಯೆ ಆರಂಭಿಸಲಿದ್ದು, ಇದರಿಂದ ಲಕ್ಷಾಂತರ ಜನರಿಗೆ ಅವರ ಜಮೀನಿನ ಹಕ್ಕನ್ನು ಅವರಿಗೆ ನೀಡದಂತಾಗುತ್ತದೆ” ಎಂದು ಸಚಿವರಾದ ಕೃಷ್ಣ ಬೈರೇಗೌಡ ರವರು ತಿಳಿಸಿದರು.

ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ:

ಕೆಲವು ಕಡೆಗಳಲ್ಲಿ 50 ಎಕರೆ ಪೋಡಿ ಮಾಡಿಕೊಡಿ ಎಂದ್ರೆ 100 ಎಕರೆ ಮಾಡಿಕೊಟ್ಟಿದ್ದಾರೆ, ಬಡ ರೈತನೊಬ್ಬ ತಾನು ಮಾಡುತ್ತಿರುವ ಸಾಗುವಳಿ ಭೂಮಿಗೆ ದಾಖಲೆಗಳನ್ನು ಮಾಡಿಕೊಳ್ಳಲು ಹೊರಟ್ರೆ ಆತನನ್ನು ಅಲೆದಾಡಿಸುತ್ತಿದ್ದಾರೆ.

ಇದಕ್ಕೆಲ್ಲಾ ಇತಿಶ್ರೀ ಹಾಡುವ ಉದ್ದೇಶದಿಂದಲೇ ‘ಪೋಡಿ’ ಅಭಿಯಾನವನ್ನು ಆರಂಭಿಸಿದ್ದೇವೆ, ಈ ಸಂದರ್ಭದಲ್ಲಿ ಇಲಾಖಾ ನೌಕರರು ಮತ್ತು ಅಧಿಕಾರಿಗಳು ಕಾನೂನಿನ ಚೌಕಟ್ಟನಡಿ ಅರ್ಜಿಗಳನ್ನು ವಿಲೇವಾರಿ ಮಾಡಬೇಕು, ಇಲ್ಲದಿದ್ದರೆ ನಾವು ನಿಮ್ಮ ಮೇಲೆ ಕಠಿಣ ಕ್ರಮ ಜರುಗಿಸಬೇಕಾದೀತು ಎಂದು ಎಚ್ಚರಿಸಿದ್ದೇನೆ ಎಂದರು.

ಇತರೆ ವಿಷಯಗಳು:

ಇನ್ಮುಂದೆ ಸಿಗ್ನಲ್‌ ಲೈಟ್‌ಗೆ ಮೂರಲ್ಲ ನಾಲ್ಕು ಬಣ್ಣಗಳು!

ಮಹಿಳೆಯರಿಗೆ ಬಂಪರ್‌ ಆಫರ್.!! ಈ ಯೋಜನೆಯಲ್ಲಿ 1,000 ರೂ.ಠೇವಣಿ ಮಾಡಿದ್ರೆ ನಿಮ್ಮದಾಗಲಿದೆ 2 ಲಕ್ಷ ರೂ.!

Leave a Reply

Your email address will not be published. Required fields are marked *