ಹಲೋ ಸ್ನೇಹಿತರೆ, ಉಡುಪಿ ಜಿಲ್ಲಾದ್ಯಂತ ಕಳೆದ 48 ಗಂಟೆಗಳಿಂದ ಮಳೆ ಸುರಿಯುತ್ತಿದ್ದು, ಮುಂದಿನ 5 ದಿನಗಳು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ನಚ್ಚರಿಕೆ ಕ್ರಮ ನೀಡಿರುವ ಭಾರತೀಯ ಹವಾಮಾನ ಇಲಾಖೆ, ಜೂನ್ 3ರಿಂದ 8ರ ವರೆಗೆ ಕರಾವಳಿ ಭಾಗದಲ್ಲಿ ಯಲ್ಲೋ ಅಲರ್ಟ್ ಘೋಷಿಸಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಭಾರಿ ಮಳೆಯ ಬಗ್ಗೆ ಎಲ್ಲರೂ ಮುಂಜಾಗ್ರತಾ ಕ್ರಮವಹಿಸಬೇಕು ಎಂದು ತಿಳಿಸಿದೆ.
ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ವಿಪತ್ತು ನಿರ್ವಹಣೆಗಾಗಿ ನಿಯೋಜನೆಗೊಂಡ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು, ಪರಿಸ್ಥಿಯನ್ನು ನಿಭಾಯಿಸಲು ತಯಾರಿ ಮಾಡಿಕೊಳ್ಳಬೇಕು ಎಂದು ಕೇಂದ್ರ ಸೂಚಿಸಿದೆ. ಅಲ್ಲದೆ ಸಾರ್ವಜನಿಕರು ನದಿ, ನೀರಿರುವ ಪ್ರದೇಶ ಹಾಗೂ ಸಮುದ್ರಕ್ಕೆ ಇಳಿಯದಂತೆ ಎಚ್ಚರ ವಹಿಸಬೇಕು ಹಾಗೂ ಸುರಕ್ಷಿತ ಸ್ಥಳದಲ್ಲಿರಬೇಕು.
ಇದನ್ನು ಓದಿ: ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್!! ಗ್ರಾಚ್ಯುಟಿ ಮಿತಿಯಲ್ಲಿ ಭರ್ಜರಿ ಹೆಚ್ಚಳ ಘೋಷಣೆ
ಈ ಸಂದರ್ಭದಲ್ಲಿ ಮಕ್ಕಳು ಹಾಗೂ ಸಾರ್ವಜನಿಕರು ಅಪಾಯಕಾರಿ ಸ್ಥಳಗಳಾದ ವಿದ್ಯುತ್ ಕಂಬ, ಕಟ್ಟಡ, ಮರಗಳ ಹತ್ತಿರ ಅಥವಾ ಕೆಳಗೆ ನಿಲ್ಲಬಾರದು ಸುರಕ್ಷಿತ ಸ್ಥಳಗಳನ್ನು ತಲುಪಬೇಕು ಎಂದು ಸೂಚನೆ ನೀಡಲಾಗಿದೆ. ತುರ್ತು ಸೇವೆಗೆ ಶುಲ್ಕರಹಿತ ಸಂಖ್ಯೆ : 1077 ಹಾಗೂ ದೂ.ಸಂಖ್ಯೆ: 0820-2574802 ಅನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ.
ಅಲ್ಲದೇ ಕೆಲವೊಂದಿಷ್ಟು ವಾಹನಗಳು ರಸ್ತೆಯಲ್ಲಿ ಕೆಟ್ಟು ನಿಂತಿರುತ್ತವೆ ಎಂದು ತಿಳಿದು ಬಂದಿದೆ. ಕಳೆದ ವರ್ಷವೂ ಮಳೆ ಸಂದರ್ಭ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದೀಗ ಭಾನುವಾರ ಸಂಜೆ ಸುರಿದ ಭಾರೀ ಮಳೆಗೆ ರಸ್ತೆ ಮೇಲೆ ನೀರು ನಿಂತಿದ್ದು, ವಾಹನ ದಟ್ಟಣೆ ಉಂಟಾಗಿದೆ.
ಇತರೆ ವಿಷಯಗಳು:
ನಾಳೆಯೇ ಬರತ್ತೆ 17ನೇ ಕಂತು! ಈ ಬಾರಿ ರೈತರ ಖಾತೆಗೆ ಡಬಲ್ ಹಣ
ಪೆಟ್ರೋಲ್ – ಡೀಸೆಲ್ ಹಾಕುವವರಿಗೆ ಕಹಿಸುದ್ದಿ! ಮತ್ತೆ ಏರಿಕೆ ಕಂಡ ಬೆಲೆ