ಕರ್ನಾಟಕದ 5 ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ದಕ್ಷಿಣ ತಮಿಳುನಾಡಿನಲ್ಲಿ 1.5 ರಿಂದ 4.5 ಕಿ.ಮೀ ನಡುವೆ ಗಾಳಿಯ ಪ್ರಸರಣದಿಂದಾಗಿ, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಮೇ 18 ರಿಂದ 21 ರವರೆಗೆ ಮಳೆಯಾಗಲಿದೆ. ಈ ಅವಧಿಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಮೇ 18 ರಂದು, ಉತ್ತರ ಕನ್ನಡ, ತುಮಕೂರು ಮತ್ತು ಬೆಂಗಳೂರಿನ ಗ್ರಾಮಾಂತರ ಪ್ರದೇಶಗಳಲ್ಲಿ ಗುಡುಗು ಮತ್ತು ಬಲವಾದ ಗಾಳಿಯೊಂದಿಗೆ (40-50 K.M) ಭಾರೀ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಸೂಚಿಸಿದೆ.
ಇಂದು ಬೆಳಿಗ್ಗೆ ಹವಾಮಾನ ಇಲಾಖೆ ಬಿಡುಗಡೆ ಮಾಡಿದ ವರದಿಯಲ್ಲಿ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ತುಮಕೂರು, ವಿಜಯನಗರ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ ಇದೆ. ಜೊತೆಗೆ ಬಿರುಗಾಳಿಯು (40-50 ಕಿ.ಮೀ. ವೇಗ) ಬೀಸುವ ಸಾಧ್ಯತೆಯೂ ಇದೆ.
ಈ ಸಂದರ್ಭದಲ್ಲಿ, ಹವಾಮಾನ ಇಲಾಖೆ ತಜ್ಞ ಸಿಎಸ್ ಪಾಟೀಲ್ ಅವರು, ದಕ್ಷಿಣ ಕನ್ನಡ ಜಿಲ್ಲೆಗೆ ಮೇ 18 ರಿಂದ 21 ರವರೆಗೆ ಹಳದಿ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಅಲ್ಲದೇ, ಇತರ ಸ್ಥಳಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇತರೆ ವಿಷಯಗಳು:
ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಸಿಹಿ ಸುದ್ದಿ, ತಪ್ಪದೇ ಈ ಮಾಹಿತಿ ತಿಳಿದುಕೊಳ್ಳಿ.