ಹಲೋ ಸ್ನೇಹಿತರೆ, ಕರ್ನಾಟಕ ರಾಜ್ಯ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಿಂದ ಸಬ್ಸಿಡಿ ಆಹಾರ ಧಾನ್ಯವನ್ನು ಖರೀದಿಸಲು ಅರ್ಹರಾಗಿರುವ ಮನೆಗಳಿಗೆ ಪಡಿತರ ಚೀಟಿಗಳನ್ನು ನೀಡುತ್ತದೆ. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯಿಂದ ನೀಡಲಾಗಿದ್ದು, ಇದು ಗುರುತಿನ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ. ಈಗ ಈ ಚೀಟಿಗಳನ್ನು ಹೊಂದಿರುವವರಿಗೆ ಸರ್ಕಾರ ಬಿಗ್ ಶಾಕ್ ನೀಡಿದೆ.
ಪಡಿತರ ಚೀಟಿಗಾಗಿ ನಕಲಿ ದಾಖಲೆ ನೀಡಿ ಪಡೆದುಕೊಂಡಿದ್ದ ಸುಮಾರು 12.47 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಅವುಗಳನ್ನು ಎಪಿಎಲ್ ಕಾರ್ಡ್ ಆಗಿ ಬದಲಾವಣೆ ಮಾಡಲಾಗಿದೆ. ಈ ವರ್ಷ ಬಾಕಿ ಉಳಿದಿರುವ ಅನರ್ಹ ಬಿಪಿಎಲ್ ಕಾರ್ಡ್ ಗಳನ್ನು ಪತ್ತೆ ಹಚ್ಚಲು ಸರ್ಕಾರ ಆದಾಯ ತೆರಿಗೆ ಇಲಾಖೆ, ಆರ್‌ಟಿಓ, ಸಬ್ ರಿಜಿಸ್ಟ್ರಾರ್ ಕಚೇರಿ, ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ಮಾಹಿತಿ ಸಂಗ್ರಹಿಸಲು ಆಹಾರ ಇಲಾಖೆ ಕ್ರಮ ಕೈಗೊಂಡಿದೆ.
ಅರ್ಹತೆಗಳು:
- ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್ ಗಳನ್ನು ಪಡೆದುಕೊಳ್ಳಲು ಆದಾಯ ತೆರಿಗೆ ಪಾವತಿದಾರರಾಗಿರಬಾರದು.
- ಐಷಾರಾಮಿ ಕಾರು ಹೊಂದಿರಬಾರದು.
- ಮೂರು ಎಕರೆಗಿಂತ ಹೆಚ್ಚು ಕೃಷಿ ಜಮೀನು ಹೊಂದಿರಬಾರದು.
- ಸರ್ಕಾರಿ ನೌಕರಿ, ಬಾಡಿಗೆ ಮನೆಗಳನ್ನು ಹೊಂದಿದವರು ಬಿಪಿಎಲ್ ಕಾರ್ಡ್ ಪಡೆದುಕೊಳ್ಳುವಂತಿಲ್ಲ.
ಇಂತಹ ಕೆಲವು ಮಾನದಂಡ ಹೊಂದಿಲ್ಲದವರು ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಾರೆ. ಅಂತವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಇದನ್ನು ಓದಿ: ಪಿಂಚಣಿ ಯೋಜನೆಯಲ್ಲಿ ಬದಲಾವಣೆ..! ಮಾಸಿಕ ಹಣ ಪಡೆಯಲು ಈ ಕೆಲಸ ಕಡ್ಡಾಯ
ಪ್ರಸ್ತುತ ಅನೇಕ ಸೇವೆಗಳಿಗೆ ಆಧಾರ್ ಸಂಖ್ಯೆ ಕಡ್ಡಾಯವಾಗಿದ್ದು, ಐಷಾರಾಮಿ ಕಾರು ಹೊಂದಿದವರು ಪಡಿತರ ಚೀಟಿ ಇದ್ದರೆ ಆರ್‌ಟಿಓ ಕಚೇರಿಯಿಂದ, ಹಾಗೆಯೇ ತೆರಿಗೆ ಪಾವತಿದಾರರಾಗಿದ್ದರೆ ಐಟಿ ಇಲಾಖೆಯಿಂದ, ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ. ಹೆಚ್ಚು ಇರುವವರ ಬಗ್ಗೆ ವಿವಿಧ ಇಲಾಖೆಗಳಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ.
ಪಡಿತರ ಕಾರ್ಡ್ ಪಡೆಯಲು ನಿಗದಿಪಡಿಸಿದ ಮಾನದಂಡಗಳನ್ನು ಉಲ್ಲಂಘಿಸಿದವರ ಬಗ್ಗೆ ಮಾಹಿತಿ ಸಂಗ್ರಹಿಸಿ ಅಂತಹ ಬಿಪಿಎಲ್ ಕಾರ್ಡ್ ಗಳನ್ನು ರದ್ದುಗೊಳಿಸಲಾಗುವುದು. ಅನರ್ಹರು ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದಲ್ಲಿ ಅವರಿಗೆ ಎಪಿಎಲ್ ಕಾರ್ಡ್ ಕೊಡಲಾಗುವುದು ಎಂದು ಹೇಳಲಾಗಿದೆ.
ಇತರೆ ವಿಷಯಗಳು:
1 ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಇನ್ಮುಂದೆ ಹೊಸ ಕಾರ್ಯಕ್ರಮ ಜಾರಿ.!
ಚಿನ್ನ ಕೊಳ್ಳುವವರಿಗೆ ಭರ್ಜರಿ ಅವಕಾಶ.!! ಪಾತಳಕ್ಕೆ ಇಳಿಕೆಯಾದ ಬಂಗಾರ