ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ನೇಮಕಾತಿ, ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಿ.

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತೀ ರಾಜ್ಯ ಇಲಾಖೆ ಕರ್ನಾಟಕದಿಂದ ಖಾಲಿಯಾಗಿರುವ 247 ಪಂಚಾಯತೀ ಡೆವಲಪ್​ಮೆಂಟ್ ಆಫೀಸರ್ (PDO) ಹುದ್ದೆಗಳಿಗೆ ಅರ್ಹರಾದ ಅಭ್ಯರ್ಥಿಗಳನ್ನು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುವ ಮೇ 15, 2024. ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಗೊಳಗಾದ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಪ್ರಕ್ರಿಯೆ ಏಪ್ರಿಲ್ 15 ರಿಂದ ಪ್ರಾರಂಭವಾಗುತ್ತದೆ.

ಹುದ್ದೆಯ ಮಾಹಿತಿ:

  • ಪಂಚಾಯತ್​ ಡೆವಲಪ್​ಮೆಂಟ್​ ಆಫೀಸರ್(HK)- 97
  • ಪಂಚಾಯತ್​ ಡೆವಲಪ್​ಮೆಂಟ್​ ಆಫೀಸರ್(RPC)- 150

ಶೈಕ್ಷಣಿಕ ಅರ್ಹತೆ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಅಭ್ಯರ್ಥಿಗಳ ವಯಸ್ಸು ಮೇ 15, 2024ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

  • SC/ST/Cat-1 ಅಭ್ಯರ್ಥಿಗಳು: 05 ವರ್ಷಗಳು
  • ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: 03 ವರ್ಷಗಳು
  • PWD/ವಿಧವೆ ಅಭ್ಯರ್ಥಿಗಳು: 10 ವರ್ಷಗಳು

ಅರ್ಜಿ ಶುಲ್ಕ:

  • SC/ST/ಪ್ರವರ್ಗ-I/PWD ಅಭ್ಯರ್ಥಿಗಳು: ಇಲ್ಲ
  • ಮಾಜಿ ಸೈನಿಕ ಅಭ್ಯರ್ಥಿಗಳು: ರೂ.50/-
  • ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳು: ರೂ.300/-
  • ಸಾಮಾನ್ಯ ಅಭ್ಯರ್ಥಿಗಳು: ರೂ.600/-

ವೇತನ:

  • ಮಾಸಿಕ ₹ 37,900-70,850

ಆಯ್ಕೆ ಪ್ರಕ್ರಿಯೆ:

  • ಕನ್ನಡ ಭಾಷಾ ಪರೀಕ್ಷೆ
  • ಸ್ಪರ್ಧಾತ್ಮಕ ಪರೀಕ್ಷೆ

ಅರ್ಜಿ ಹಾಕೋದು ಹೇಗೆ?

ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ಈ ಕೆಳಗೆ ನೀಡಲಾಗಿದೆ.

RDPR Karnataka RecruitmentApply Now

Leave a Comment