1 ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ಇನ್ಮುಂದೆ ಹೊಸ ಕಾರ್ಯಕ್ರಮ ಜಾರಿ.!

ಹಲೋ ಸ್ನೇಹಿತರೆ, ಶಾಲಾ ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿಯನ್ನು ಹೆಚ್ಚಿಸಲು ಪ್ರತಿ ಶಾಲೆಗಳಲ್ಲಿ ಕಡ್ಡಾಯವಾಗಿ ಗ್ರಂಥಾಲಯವನ್ನು ಸ್ಥಾಪಿಸಿ ಅಭಿವೃದ್ಧಿ ಪಡಿಸಲು ಮತ್ತು ಅದನ್ನು ಮಕ್ಕಳ ಈ ಸೌಲಭ್ಯ ಬಳಸಿಕೊಳ್ಳಲು “ಶಾಲೆಗಳಲ್ಲಿ ಓದುವ ಹವ್ಯಾಸ ಜ್ಞಾನದ ವಿಕಾಸ” ಎಂಬ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ. ಈ ಯೋಜನೆಯ ಬಗೆ ಸಂಪೂರ್ಣ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ.

Reading Hobby Knowledge Development Programme

ಉದ್ದೇಶ: ಈ ಕಾರ್ಯಕ್ರಮದ ಅಡಿಯಲ್ಲಿ ಶಾಲೆಗಳಲ್ಲಿ ವಾರಕ್ಕೆ ಒಂದು ತರಗತಿ ಅವಧಿಯನ್ನು ಗ್ರಂಥಾಲಯ ಅವಧಿಯನ್ನಾಗಿ ನಿಗಧಿಪಡಿಸಲು ಕ್ರಮವಹಿಸಲಾಗಿದೆ. ಶಾಲಾ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಶಿಕ್ಷಣದ ಧೈಯವಾಗಿದ್ದು, ವಿದ್ಯಾರ್ಥಿಗಳ ಜ್ಞಾನ, ಬುದ್ದಿ ಮತ್ತು ಮೌಲ್ಯದ ಕ್ರಿಯಾಶೀಲ ವಿಕಸನಕ್ಕಾಗಿ ಪಠ್ಯಪುಸ್ತಕಗಳ ಓದಿನ ಜೊತೆಗೆ ಇತರೆ ಪೂರಕ ಪುಸ್ತಕಗಳನ್ನು ಓದುವುದು ಅಗತ್ಯವಾಗಿರುತ್ತದೆ.

ಇದನ್ನು ಓದಿ: ಎಲ್ಲಾ ಮಾಲ್‌ಗಳಿಗೆ ಡ್ರೆಸ್‌ ಮಾರ್ಗಸೂಚಿ ಹೊರಡಿಸಿದ ಸರ್ಕಾರ!

ಶಾಲಾ ಗ್ರಂಥಾಲಯದ ಮೊದಲ ಉದ್ದೇಶವು ಮಕ್ಕಳಲ್ಲಿ ಓದುವ ಅಭ್ಯಾಸವನ್ನು ಬೆಳೆಸುವುದು. ಮಕ್ಕಳು ಖುಷಿಯಿಂದ ಪುಸ್ತಕಗಳನ್ನು ಓದಿದಾಗ ಮಾತ್ರ ಈ ಹವ್ಯಾಸವು ಬೆಳೆಯಲು ಸಾಧ್ಯ, ಮಕ್ಕಳು ಆನಂದಿಸಿ ಓದಲು ಗ್ರಂಥಾಲಯದಲ್ಲಿ ಅನೇಕ ಪ್ರಕಾರದ, ಆಕರ್ಷಕ ಪುಸ್ತಕಗಳಿರಬೇಕು. ಈ ಪುಸ್ತಕಗಳು ಶಾಲಾ ಮಕ್ಕಳ ಅಭಿರುಚಿಗೆ ತಕ್ಕಂತಿರಬೇಕು.

ಓದುವ ಹವ್ಯಾಸವು ಮಕ್ಕಳಲ್ಲಿ ಶಬ್ದಭಂಡಾರವನ್ನು ವೃದ್ಧಿಸಿ, ನಿರರ್ಗಳ ಮಾತು, ಗ್ರಹಿಕಾ ಸಾಮರ್ಥ್ಯ, ಏಕಾಗ್ರತೆಯ ಶಕ್ತಿ, ಭಾಷಾ ಕೌಶಲ್ಯ ಮತ್ತು ಸೃಜನಾತ್ಮಕ ಬರವಣಿಗೆಗೆ ಪೂರಕವಾಗಿವೆ. ಇದಲ್ಲದೆ ಬೌದ್ಧಿಕ ಕೌಶಲ್ಯಗಳಾದ ಸಾರಾಂಶ ಮಾಡುವ ಕ್ಷಮತೆ, ವಿಮರ್ಶಾತ್ಮಕ ಚಿಂತನೆ, ತಾರ್ಕಿಕತೆ, ವಿಶ್ಲೇಷಣಾತ್ಮಕ ಸಾಮರ್ಥ್ಯ, ಕಲ್ಪನಾ ಶಕ್ತಿ, ಸೃಜನಶೀಲತೆ, ಹಾಗೂ ಸಹಾನುಭೂತಿಯನ್ನು ಇನ್ನಿತರ ಭಾವನೆಗಳನ್ನು ಬೆಳೆಸುತ್ತದೆ. ಮೇಲ್ಕಂಡ ಉದ್ದೇಶದ ಗುರಿಯನ್ನು ಸಾಧಿಸಲು ಇಲಾಖೆಯಿಂದ “ಓದುವ ಹವ್ಯಾಸ ಜ್ಞಾನದ ವಿಕಾಸ ” ಎಂಬ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ. ಸದರಿ ಕಾರ್ಯಕ್ರಮದಡಿಯಲ್ಲಿ ಈ ಕೆಳಕಂಡ ಮಾರ್ಗದರ್ಶಿಯನ್ನು ಪಾಲಿಸಬೇಕೆಂದು ಶಾಲೆಗಳಿಗೆ ಸೂಚನೆ ನೀಡಲಾಗಿದೆ.

ಇತರೆ ವಿಷಯಗಳು:

UPI ಬಳಕೆದಾರರಿಗೆ ಹೊಸ ಸೇವೆ ಆರಂಭ! ಇಂದಿನಿಂದಲೇ ಲಾಭ ಪಡೆಯಿರಿ

ಪಿಂಚಣಿ ಯೋಜನೆಯಲ್ಲಿ ಬದಲಾವಣೆ..! ಮಾಸಿಕ ಹಣ ಪಡೆಯಲು ಈ ಕೆಲಸ ಕಡ್ಡಾಯ

Leave a Reply

Your email address will not be published. Required fields are marked *