ನಮಸ್ಕಾರ ಸ್ನೇಹಿತರೇ, ಇಂದಿನ ನಮ್ಮ ಈ ಲೇಖನಕ್ಕೆ ನಿಮಗೆಲ್ಲರಿಗೂ ಆತ್ಮೀಯವಾದ ಸ್ವಾಗತ, ಗುಣಮಟ್ಟದ ಶಿಕ್ಷಣ ಮತ್ತು ಪರೀಕ್ಷಾ ಪಾವಿತ್ರ್ಯತೆಗೆ ಹೆಚ್ಚಿನ ಒತ್ತನ್ನು ನೀಡಲಾಗಿದ್ದು ವಿದ್ಯಾರ್ಥಿಗಳು ಉತ್ತಮ ಫಲತಾಂಶವನ್ನು ಪಡೆಯಲು ಅನುಕೂಲಕರವಾದ ಎಲ್ಲ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆಯು ಮಾಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.
ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಗುರುವಾರ ನಗರದ ಅಂಬೇಡ್ಕರ್ ಭವನದಲ್ಲಿ 2022-23 ನೇ ಸಾಲಿನಲ್ಲಿ ಎಸ್ ಎಸ್ಎಲ್ಸಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ವಿತರಣೆಯನ್ನು ಹಾಗೂ 2023-24 ನೇ ಸಾಲಿನಲ್ಲಿ SSLC ಯಲ್ಲಿ ಶೇ.100 ಫಲಿತಾಂಶವನ್ನು ಪಡೆದ ಶಾಲೆಗಳಿಗೆ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
SSLC ಯಲ್ಲಿ ಉತ್ತಮ ಅಂಕವನ್ನು ಮತ್ತು ಶೇ.100% ಫಲಿತಾಂಶವನ್ನು ಪಡೆದ ವಿದ್ಯಾರ್ಥಿಗಳು ಹಾಗೂ ಶಾಲೆಗಳು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಕೀರ್ತಿಯನ್ನು ತಂದಿವೆ. ಈ ಬಾರಿ ಜಿಲ್ಲೆಯ SSLC ಯಲ್ಲಿ 3 ನೇ ಸ್ಥಾನಕ್ಕೆ ಏರಿದ್ದು, ಈ ಸಾಧನೆಯನ್ನು ಶಿಕ್ಷಕ ವೃಂದಕ್ಕೆ ಅರ್ಪಿಸುತ್ತೇನೆ. ಗುಣಮಟ್ಟದ ಶಿಕ್ಷಣವನ್ನು ನೀಡಲು ಹಲವು ಬದಲಾವಣೆಗಳನ್ನು ಮಾಡಲಾಗಿದೆ.
ಆಯುಷ್ಮಾನ್ ಭಾರತ್ ಫಲಾನುಭವಿಗಳಿಗೆ ಗುಡ್ ನ್ಯೂಸ್! ವಿಮೆ ಮೊತ್ತ 10 ಲಕ್ಷಕ್ಕೆ ಏರಿಕೆ
ವರ್ಷದಲ್ಲಿ 3 ಪರೀಕ್ಷೆಯಿಂದ ಹಾಗೂ ಕಾಪಿಗೆ ಯಾವುದೇ ರೀತಿಯ ಅವಕಾಶವಿಲ್ಲದೆ ಶಿಸ್ತುಬದ್ದ ಪರೀಕ್ಷೆಯನ್ನು ನಡೆಸಿರುವುದು ಉತ್ತಮವಾದ ಫಲಿತಾಂಶವನ್ನೇ ನೀಡಿದೆ. ರಾಜ್ಯದಲ್ಲಿ 50 ಸಾವಿರ ಶಿಕ್ಷಕರ ಕೊರತೆ ಇತ್ತು. ಕಡಿಮೆ ಕಾಲಮಿತಿಯಲ್ಲಿ 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿ ಶಿಕ್ಷಣವನ್ನು ನೀಡಲಾಗುತ್ತಿದೆ.
ವಾರದಲ್ಲಿ 6 ದಿನವೂ ಸಿಗಲಿದೆ ಮೊಟ್ಟೆ..?
ಮಕ್ಕಳ ಪೌಷ್ಟಿಕಾಂಶಕ್ಕೆ ಹೆಚ್ಚಿನ ಒತ್ತನ್ನು ನೀಡಲಾಗಿದ್ದು 8ನೇ ತರಗತಿವರೆಗೆ ಮಾತ್ರ ನೀಡಲಾಗುತ್ತಿದ್ದ ಮೊಟ್ಟೆಯನ್ನು 10 ನೇ ತರಗತಿಯ ವರೆಗೂ ವಿಸ್ತರಣೆ ಮಾಡಲಾಗಿದೆ. ರಾಗಿ ಮಾಲ್ಟ್ ಅನ್ನು ನೀಡಲಾಗುತ್ತಿದೆ. ಹಾಗೂ ವಾರದಲ್ಲಿ 1 ನೀಡುತ್ತಿದ್ದ ಮೊಟ್ಟೆಯನ್ನು ಈಗಾ 2 ದಿನಕ್ಕೆ ಏರಿಕೆ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ವಾರದಲ್ಲಿ 6 ದಿನವೂ ಸಹ ಮೊಟ್ಟೆಯನ್ನು ಕೊಡುವ ವ್ಯವಸ್ಥೆಯನ್ನು ಮಾಡಲಾಗುವುದು ಎಂದು ಎಸ್.ಮಧು ಬಂಗಾರಪ್ಪ ಅವರು ಹೇಳಿದರು.
ಇತರೆ ವಿಷಯಗಳು:
ಜುಲೈ 22 ರವರೆಗೆ IMD ಭಾರೀ ಮಳೆ ಎಚ್ಚರಿಕೆ.!! ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ 100% ಮೀಸಲಾತಿ ಕಡ್ಡಾಯ!