ಹಲೋ ಸ್ನೇಹಿತರೇ, ಸ್ವಾವಲಂಬಿ ಸಾರಥಿ ಯೋಜನೆಯ ಮೂಲಕ ಒಬ್ಬ ಕುಟುಂಬಸ್ಥನೂ ನಾಲ್ಕು ಚಕ್ರದ ವಾಹನ ಖರೀದಿಸಲು ಸರ್ಕಾರವು ಸಬ್ಸಿಡಿಯ ಮೂಲಕ ಆರ್ಥಿಕ ಸಹಾಯವನ್ನು ನೀಡುತ್ತಿದೆ. ಅಷ್ಟೇ ಅಲ್ಲದೆ ಈ ಯೋಜನೆಗೆ ಯಾವುದೇ ಕೆಳವರ್ಗ ಮತ್ತು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಸ್ಥರು ಈ ಯೋಜನೆ ಅಡಿಯಲ್ಲಿ 3 ಲಕ್ಷ ಸಬ್ಸಿಡಿಯನ್ನು ಪಡೆಯಬಹುದು. ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕ ಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.
ಅಂದರೆ ಈ ಯೋಜನೆ ಅಡಿಯಲ್ಲಿ ಒಬ್ಬ ವ್ಯಕ್ತಿಯು ಕಾರು ಅಥವಾ ಗೂಡ್ಸ್ ವಾಹನಗಳಂತಹ ನಾಲ್ಕು ಚಕ್ರದ ವಾಹನಗಳನ್ನು ಖರೀದಿಸುವ ಮೂಲಕ ಸ್ವಂತ ಉದ್ಯೋಗವನ್ನು ಪ್ರಾರಂಭಿಸಬಹುದು.
ಯೋಜನೆಗೆ ಸಬ್ಸಿಡಿ ಪಡೆಯಲು ಬೇಕಾಗುವ ಅರ್ಹತೆಗಳು:
- ಈ ಯೋಜನೆಗೆ ಅರ್ಜಿ ಸಲ್ಲಿಸುವ ಅರ್ಜಿದಾರನು ಕನಿಷ್ಠ 21ರಿಂದ 45 ವರ್ಷದೊಳಗಿನ ನಿರುದ್ಯೋಗಿ ಆಗಿರಬೇಕು.
- ಅಷ್ಟೇ ಅಲ್ಲದೆ ಆ ಕುಟುಂಬಸ್ಥನ ವಾರ್ಷಿಕ ಆದಾಯವು 1.5 ಲಕ್ಷಕ್ಕಿಂತ ಮೇಲ್ಪಟ್ಟಿರಬಾರದು.
- ಜೊತೆಗೆ ಆ ವ್ಯಕ್ತಿಯು ಸಾರಿಗೆ ಅಧಿಕಾರಿಯಿಂದ ನೀಡಲಾದ (DL) ಡ್ರೈವಿಂಗ್ ಲೈಸೆನ್ಸ್ ನನ್ನು ಹೊಂದಿರಬೇಕು.
- ಆ ಕುಟುಂಬದ ಯಾವುದೇ ಸದಸ್ಯರು ಸರಕಾರಿ ಉದ್ಯೋಗದಲ್ಲಿ ಕಾರ್ಯನಿರ್ವಹಿಸಬಾರದು.
- ಅಷ್ಟೇ ಅಲ್ಲದೆ ಅರ್ಜಿ ಸಲ್ಲಿಸುವ ಕುಟುಂಬಸ್ಥರು ಭಾರತದ ಬಡತನ ರೇಖೆಗಿಂತ ಕೆಳಗಿರುವವರು ಮತ್ತು ಹಿಂದುಳಿದ ವರ್ಗದವರಾಗಿರಬೇಕು.
ರಾಜ್ಯದ ರೈತರಿಗೆ ಈ ಯೋಜನೆಯಡಿ 90% ಸಬ್ಸಿಡಿ! ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು:
- ಆಧಾರ್ ಕಾರ್ಡ್
- ಬ್ಯಾಂಕ್ ಪಾಸ್ ಬುಕ್
- ಫೋಟೋ
- ಆದಾಯ ದೃಡೀಕರಣ ಪತ್ರ / ಜಾತಿ ದೃಢೀಕರಣ ಪತ್ರ
- ಡ್ರೈವಿಂಗ್ ಲೈಸೆನ್ಸ್
- ಮೊಬೈಲ್ ನಂಬರ್
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:
ಎಲ್ಲಾ ಮುಖ್ಯ ದಾಖಲೆಗಳನ್ನು ಹೊಂದಿಸಿಕೊಂಡು. ನಿಮ್ಮ ಹತ್ತಿರದ ಗ್ರಾಮ ಓನ್/ ಕರ್ನಾಟಕ ಓನ್/ ಬೆಂಗಳೂರು ಓನ್ ನಾಗರಿಕ ಸೇವ ಕೇಂದ್ರಗಳಲ್ಲಿ, ಈ ಯೋಜನೆಗೆ ನಿಮ್ಮ ದಾಖಲೆಗಳನ್ನು ನೀಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಇತರೆ ವಿಷಯಗಳು:
IPPB ನಲ್ಲಿ ಮ್ಯಾನೇಜರ್ ಹುದ್ದೆಗಳ ನೇರ ನೇಮಕಾತಿ..!
ನಿರುದ್ಯೋಗಿಗಳಿಗೆ ಗುಡ್ ನ್ಯೂಸ್! ಪ್ರತಿ ತಿಂಗಳು ಪಡೆಯಬಹುದು ₹39,000