ಕರ್ನಾಟಕಕ್ಕೆ ಮತ್ತೊಂದು ಶಾಕ್.!! ನೀರಿನ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ

ಹಲೋ ಸ್ನೇಹಿತರೇ, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್​ ಸರ್ಕಾರ ಇನ್ನಿಲ್ಲದಂತೆ ಕಸರತ್ತು ನಡೆಸುತ್ತಿದೆ. ಹಾಲು, ಪೆಟ್ರೋಲ್​, ಡೀಸೆಲ್, ಆಸ್ತಿ ತೆರಿಗೆ ಹೆಚ್ಚಳ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಬೆಂಗಳೂರಿಗೆ ಮತ್ತೊಂದು ಶಾಕ್ ಕೊಡಲು ಮುಂದಾಗಿದೆ.

Water Price Hike karnataka

ನೀರಿನ ದರ ಹೆಚ್ಚಳ ಮಾಡುವುದಾಗಿ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ವಿಧಾನಸೌಧದ ಮುಂಭಾಗದಲ್ಲಿ 110 ಹಳ್ಳಿಗಳಿಗೆ ಕಾವೇರಿ ನೀರಿನ ಸಂಪರ್ಕ ಕಲ್ಪಿಸುವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಡಿ.ಕೆ.ಶಿವಕುಮಾರ್ ಮಾಧ್ಯಮದವರು, ಸಾರ್ವಜನಿಕರು ಬೈದರೂ, ವಿರೋಧ ಪಕ್ಷದವರಾದರು ವಿರೋಧ ಮಾಡಿದರೂ ನಾವು ನೀರಿನ ದರವನ್ನು ಹೆಚ್ಚಳ ಮಾಡಿಯೇ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಹಲವು ವರ್ಷಗಳಿಂದ ನೀರಿನ ದರವನ್ನು ಏರಿಕೆ ಮಾಡಿಲ್ಲ. ಬೆಂಗಳೂರಿನಲ್ಲಿ 1.40 ಕೋಟಿ ಜನಸಂಖ್ಯೆ ಇದೆ. ಮೇಕೆದಾಟು ಯೋಜನೆ ಮೇಲೆ ನನಗೆ ಭರವಸೆ ಇದೆ. ಆದಷ್ಟು ಬೇಗ ಅದು ಆಗಲಿದೆ. ಶರಾವತಿ ಕುಡಿಯುವ ನೀರಿನ ಯೋಜನೆಯೂ ಇದೆ. ಅದಕ್ಕೆ ಆ ಭಾಗದಲ್ಲಿ ಸಾಕಷ್ಟು ವಿರೋಧವಿದೆ. ಎತ್ತಿನಹೊಳೆ ಯೋಜನೆಯು ಒಂದು ಹಂತದಲ್ಲಿ ಇದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಸಿದ್ಧ.!! ಇನ್ಮುಂದೆ 5 ಕೆಜಿ ಅಕ್ಕಿ ಹಣ ಬಂದ್..

ಬಿಡಬ್ಲ್ಯೂಎಸ್‍ಎಸ್‍ಬಿಗೆ ನೀರಿನ ದರದ ಬಗ್ಗೆ ಮಾಹಿತಿಯನ್ನು ನೀಡುವಂತೆ ಸೂಚಿಸಿದ್ದೇವೆ. ಪ್ರತಿನಿತ್ಯ ನೀರಿಗೆ ಎಷ್ಟು ಖರ್ಚಾಗುತ್ತಿದೆ. ಎಷ್ಟು ಜನ ನೀರಿನ ಬಿಲ್ ಕಟ್ಟಿಲ್ಲ. ಎಷ್ಟು ವರ್ಷಗಳಿಂದ ನೀರಿನ ದರವನ್ನು ಹೆಚ್ಚಳ ಮಾಡಿಲ್ಲ. ಈ ಎಲ್ಲ ಮಾಹಿತಿ ಕೊಡುವಂತೆ ಬಿಡಬ್ಲ್ಯೂಎಸ್‍ಎಸ್‍ಬಿ ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ.

ನೀರಿನ ದರ ಏರಿಕೆಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ಮತ್ತು ಜೆಡಿಎಸ್​ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿಗೆ ಕಾಂಗ್ರೆಸ್​ನ ಕೊಡುಗೆ ಏನು..? ಲೋಕಸಭಾ ಚುನಾವಣೆಯಲ್ಲಿ ಸೋತಿರುವುದಕ್ಕೆ ಬೆಂಗಳೂರಿಗರ ಮೇಲೆ ಕಾಂಗ್ರೆಸ್​ಗೆ ಕೋಪವಿದೆ. ಬೆಂಗಳೂರಿನ 3 ಲೋಕಸಭಾ ಕ್ಷೇತ್ರ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಹೀಗಾಗಿ ಈ ಕೋಪಕ್ಕೆ ಕಾಂಗ್ರೆಸ್​ ನೀರಿನ ದರ ಏರಿಕೆ ಮುಂದಾಗಿದೆ ಎಂದು ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿವೆ.

ಇತರೆ ವಿಷಯಗಳು:

ಮಹಿಳೆಯರಿಗೆ ಗುಡ್ ನ್ಯೂಸ್.!! ರಾಜ್ಯ ಸರ್ಕಾರದಿಂದ ನಿಮ್ಮದಾಗಲಿದೆ ಈ ಯೋಜನೆಯ ಲಾಭ

ಮದ್ಯಪ್ರಿಯರಿಗೆ ಭರ್ಜರಿ ಸುದ್ದಿ.!! ಇನ್ಮುಂದೆ ದುಬಾರಿ ಎಣ್ಣೆಯ ಬೆಲೆ ಇಳಿಕೆ?

Leave a Reply

Your email address will not be published. Required fields are marked *