ಜನತೆಗೆ ಮತ್ತೊಂದು “ಗ್ಯಾರಂಟಿ” ಶಾಕ್! ನೀರಿನ ದರ ಏರಿಕೆಗೆ ಸೂಚನೆ

ಹಲೋ ಸ್ನೇಹಿತರೆ, ರಾಜ್ಯದ ಜನತೆಗೆ ಪೆಟ್ರೋಲ್ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿ ಗಾಯದ ಮೇಲೆ ಬರೆ ಎಳೆದಿರುವ ಸರ್ಕಾರ ಈಗ ಮತ್ತೆ ನೀರಿನ ದರವನ್ನು ಹೆಚ್ಚಿಸುವ ಮೂಲಕ ಬೆಂಗಳೂರಿನ ನಾಗರಿಕರಿಗೆ ಮತ್ತಷ್ಟು ಸಂಕಷ್ಟ ತಂದಿಡಲು ಮುಂದಾಗಿದೆ. ನೀರಿನ ಬೆಲೆ ಎಷ್ಟು ಹೆಚ್ಚಾಗಲಿದೆ? ಈ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಲು ಈ ಲೇಖನವನ್ನು ಕೊನೆವರೆಗೂ ಓದಿ.

Water Rate Hike

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬೆಂಗಳೂರಿನ ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ನೀರು ಪೂರೈಸಲು ಹಾಗೂ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸುಸ್ಥಿರತೆಗಾಗಿ ದರ ಪರಿಷ್ಕರಣೆ ಮಾಡುವುದು ಅನಿವಾರ್ಯ ಎಂದು ಸ್ಪಷ್ಟಪಡಿಸಿದ್ದಾರೆ.

ಕಳೆದ 10 ವರ್ಷಗಳಿಂದಲೂ ನೀರಿನ ದರವನ್ನು ಹೆಚ್ಚಳ ಮಾಡಿಲ್ಲ. ಇದರಿಂದ ಯಾವುದೇ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ. ವರ್ಷದಿಂದ ವರ್ಷಕ್ಕೆ ನಷ್ಟದ ಪ್ರಮಾಣದಲ್ಲಿ ಹೆಚ್ಚಾಗುತ್ತಿದೆ. ಯಾವುದೇ ಬ್ಯಾಂಕುಗಳು ಆರ್ಥಿಕ ನೆರವಿಗೆ ಸಹ ಮುಂದೆ ಬರುತ್ತಿಲ್ಲ ಎಂದರು ಹೇಳಿದರು. ಸಂಗ್ರಹಿಸಲಾಗುತ್ತಿರುವ ನೀರಿನ ದರದಲ್ಲಿ ಶೇ.70 ರಷ್ಟು ವಿದ್ಯುತ್ ಬಿಲ್ ಮತ್ತು ಕಾರ್ಮಿಕರ ವೇತನಕ್ಕೆ ನೀಡಲಾಗುತ್ತಿದೆ.

150 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ BBMP : ಆರಂಭದಲ್ಲೇ ವೇತನ 20+ಸಿಗಲಿದೆ

ರಾಜಕೀಯ ಕಾರಣಕ್ಕಾಗಿ ನೀರಿನ ದರ ಪರಿಷ್ಕರಣೆ ಮಾಡದೇ ಸಂಸ್ಥೆಗೆ ನಷ್ಟ ಉಂಟು ಮಾಡಲಾಗುತ್ತಿದೆ ಎಂಬ ಟೀಕೆಗಳು ಕೇಳಿಬರುತ್ತಿವೆ. ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಹಾಗೂ ವಿಶ್ವಬ್ಯಾಂಕ್ ಸೇರಿದಂತೆ ಹಲವು ಸಂಸ್ಥೆಗಳು ರಾಜಕೀಯವನ್ನು ಬದಿಗಿಟ್ಟು ನಿರ್ಧಾರ ತೆಗೆದುಕೊಳ್ಳುಲು ಮುಂದಾಗುವಂತೆ ಸಲಹೆ ನೀಡುತ್ತಿವೆ ಎಂದು ಹೇಳಿದರು.

ನೀರಿನ ದರ ಬದಲಾವಣೆ ಸೇರಿದಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಆರ್ಥಿಕ ಸುಸ್ಥಿರತೆಗೆ ನೆರವಾಗುವಂತಹ ಎಲ್ಲಾ ಸಾಧ್ಯತೆಗಳನ್ನು ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸದ್ಯಕ್ಕೆ ಕಾಲಮಿತಿ ನಿಗದಿ ಮಾಡಲಾಗಿಲ್ಲ. ಆದರೆ ಈ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ ಎಂದು ಹೇಳಿದ್ದಾರೆ.

ಇತರೆ ವಿಷಯಗಳು:

ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ.!! ಮದ್ಯದ ದರಕ್ಕೆ ಸಿಕ್ತು ಟ್ವಿಸ್ಟ್

ಸರ್ಕಾರದ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಿದರೆ ನಿಮ್ಮ ಜೀವನ ಸುಖಮಯ!

Leave a Reply

Your email address will not be published. Required fields are marked *